ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ಸಹೋದರ ಗೋಪಾಲ್ ಜೋಶಿ, ಸಹೋದರಿ ವಿಜಯಲಕ್ಷ್ಮಿ ಮತ್ತು ಗೋಪಾಲ್ ಅವರ ಪುತ್ರ ಅಜಯ್ ವಿರುದ್ಧ 2 ಕೋಟಿ ರೂಪಾಯಿ ವಂಚನೆ ದೂರು ದಾಖಲಿಸಿದ್ದ ಮಹಿಳೆ ಸುನೀತಾ ಚವ್ಹಾಣ್ (48) ಕೊನೆಗೂ ರಾಜೀ ಸಂಧಾನದ ಬಳಿಕ ಕೇಸ್ ವಾಪಸ್ ಪಡೆದಿದ್ದಾರೆ.
ಜೆಡಿಎಸ್ ಮಾಜಿ ಶಾಸಕ ದೇವಾನಂದ್ ಫುಲ್ಸಿಂಗ್ ಚವ್ಹಾಣ್ ಅವರ ಪತ್ನಿ ಸುನೀತಾ ಚವ್ಹಾಣ್ (48) ಅವರು ದಾಖಲಿಸಿದ್ದ ವಂಚನೆ ಪ್ರಕರಣವನ್ನು ಅವರು ವಾಪಸ್ ಪಡೆದಿದ್ದಾರೆ ಎನ್ನಲಾಗಿದೆ.
ಯಶವಂತಪುರದ ನಿವಾಸಿ ಸುನೀತಾ, ಪ್ರಕರಣವನ್ನು ಹಿಂಪಡೆಯಲಾಗುವುದು ಎಂದು ತಿಳಿಸಿದ್ದಾರೆ. ಈ ವಂಚನೆ ಪ್ರಕರಣ ಸಂಬಂಧ ಈ ವರೆಗೂ ಮೂವರನ್ನು ಬಂಧಿಸಲಾಗಿತ್ತು. ಅಲ್ಲದೆ ಪೊಲೀಸರು ಮತ್ತೋರ್ವ ಆರೋಪಿ ಗೋಪಾಲ್‌ಗಾಗಿ ಶೋಧ ನಡೆಸುತ್ತಿದ್ದಾರೆ ಎಂಬ ಗೃಹ ಸಚಿವ ಡಾ ಜಿ ಪರಮೇಶ್ವರ ಅವರ ಹೇಳಿದ್ದರು.
ಈ ಬಗ್ಗೆಯೂ ಪ್ರತಿಕ್ರಿಯಿಸಿರುವ ಸುನಿತಾ ಅವರು, ‘ಸಮಸ್ಯೆ ಬಗೆಹರಿದಿದ್ದರಿಂದ ಯಾರನ್ನೂ ಬಂಧಿಸಲಾಗಿಲ್ಲ ಎಂದು ಹೇಳಿದರು.
ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ತುಂಬಾ ಒಳ್ಳೆಯವರು. ಅವರ ಬಗ್ಗೆ ನನಗೆ ಯಾವುದೇ ದೂರುಗಳಿಲ್ಲ. ಅವರ ಬಗ್ಗೆ ನನಗೆ ಧ್ವೇಷವಿಲ್ಲ. ನನಗೆ ವಂಚನೆಯಾಗಿದ್ದರಿಂದ ಮಾತ್ರ ನಾನು ಪೊಲೀಸ್ ಠಾಣೆ ಮೆಟ್ಟಿಲೇರಿದ್ದೇನೆ. ಈಗ ಪ್ರಕರಣ ಬಗೆಹರಿದಿದೆ. ಹೀಗಾಗಿ ಪ್ರಕರಣ ವಾಪಸ್ ಪಡೆಯುತ್ತೇನೆ ಎಂದು ಮಾಹಿತಿ ನೀಡಿದರು.