ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬಿಜೆಪಿಯವರು ಜವಾಹಾರ್ ನೆಹರೂ ಅವರನ್ನು ವಿರೋಧಿಸುತ್ತಾರೆ. ಅಂಬೇಡ್ಕರ್ ಅವರನ್ನು ನೆಹರೂ ವಿರೋಧಿಸಲಿಲ್ಲ. ಹಾಗಿದ್ದರೆ, ಅಂಬೇಡ್ಕರ್ ಅವರನ್ನು ಸಂವಿಧಾನ ಬರೆಯಲು ಆಯ್ಕೆ ಮಾಡುತ್ತಿರಲಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಹಿಂದೂ ಕೋಡ್ ಬಿಲ್ ತಂದಾಗ ನೆಹರೂ ಅದರ ಪರವಾಗಿಯೇ ಇದ್ದರು. ನಮ್ಮಲ್ಲಿರುವ ಕೆಲವು ಶಕ್ತಿಗಳು ನೆಹರೂ ಅವರು ಅದನ್ನು ಜಾರಿ ಮಾಡಲು ಬಿಡಲಿಲ್ಲ. ಆದರೆ ಹಿಂದೂ ಕೋಡ್ ಬಿಲ್ ನಲ್ಲಿರುವ ಅಂಶಗಳನ್ನು ನೆಹರೂ ಅವರು ಅವರ ಅಧಿಕಾರದ ಅವಧಿಯಲ್ಲಿ ಜಾರಿ ಮಾಡುವ ಪ್ರಯತ್ನ ಮಾಡಿದ್ದರು ಎಂದು ಸಿಎಂ ಹೇಳಿದರು.