ದೇಶದ ಮೊದಲನೇ ಪ್ರಧಾನಿ ನೆಹರು ಅವರು ಆಧುನಿಕ ಭಾರತದ ನಿರ್ಮಾತೃ-ಸಿಎಂ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಸ್ವತಂತ್ರ ಭಾರತದ ಮೊದಲನೇ ಪ್ರಧಾನಿ ಜವಾಹರ್ ಲಾಲ್ ನೆಹರು ಅವರು ಆಧುನಿಕ ಭಾರತದ ನಿರ್ಮಾತೃಗಳು ಕೂಡ ಹೌದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ವಿಧಾನಸೌಧ ಆವರಣದಲ್ಲಿರುವ ಮಾಜಿ ಪ್ರಧಾನಿ ದಿವಂಗತ ಪಂಡಿತ್ ಜವಾಹರಲಾಲ್ ನೆಹರೂರವರ ಪ್ರತಿಮೆ ಹಾಗೂ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ
, ಮಾಧ್ಯಮ ಪ್ರತಿನಿಧಿಗಳ ಜೊತೆ ಮುಖ್ಯಮಂತ್ರಿಗಳು ಮಾತನಾಡಿದರು.

- Advertisement - 

ನೆಹರೂ ಅವರ ಪುಣ್ಯ ತಿಥಿಯನ್ನು ಸರ್ಕಾರ ಗೌರವ ಹಾಗೂ ಅಭಿಮಾನದಿಂದ ನೆರವೇರಿಸಿದೆ. ದೇಶದ ಬಡತನವನ್ನು ಹೋಗಲಾಡಿಸುವ ಪ್ರಾಮಾಣಿಕ ಪ್ರಯತ್ನವನ್ನು ಅವರು ಮಾಡಿದ್ದರು. ಉದ್ಯೋಗ ಸೃಷ್ಟಿ, ಮಿಶ್ರ ಆರ್ಥಿಕತೆಯನ್ನು ದೇಶದಲ್ಲಿ ಪರಿಚಯಿಸಿದ್ದಲ್ಲದೆ  ದೇಶದಲ್ಲಿ ಹಸಿರು ಕ್ರಾಂತಿಗೆ ಅಡಿಗಲ್ಲು ಹಾಕಿದರು.  ಸಹಕಾರಿ ಚಳವಳಿ, ವಿಕೇಂದ್ರೀಕರಣಕ್ಕೆ ಬದ್ಧತೆಯಿಂದ ಕೆಲಸ ಮಾಡಿದರು ಎಂದು ಸ್ಮರಿಸಿದರು.

- Advertisement - 

ನೆಹರೂ ಅವರು ಪ್ರಧಾನಿಗಳಾಗಿದ್ದ 17 ವರ್ಷಗಳ ಅವಧಿಯಲ್ಲಿ ಅನೇಕ ಅಣೆಕಟ್ಟು, ಸಾರ್ವಜನಿಕ ವಲಯದಲ್ಲಿ ಕೈಗಾರಿಕೆ, ಶಿಕ್ಷಣ ಸಂಸ್ಥೆಗಳನ್ನೂ ಸ್ಥಾಪಿಸಿದರು. ದೇಶ ಆರ್ಥಿಕವಾಗಿ ಸಬಲತೆಯನ್ನು ಕಂಡುಕೊಂಡಿದ್ದರೆ, ಆಹಾರದಲ್ಲಿ ಸ್ವಾವಲಂಬನೆಯನ್ನು ಕಂಡುಕೊಂಡಿದ್ದರೆ ನೆಹರೂ ಅವರು ಹಾಕಿದ ಅಡಿಪಾಯ ಕಾರಣ. ನೆಹರೂ ಅವರನ್ನು ಗೌರವದಿಂದ ಸ್ಮರಿಸುವ ಕೆಲಸವನ್ನು ಪ್ರತಿಯೊಬ್ಬ ಭಾರತೀಯನೂ ಮಾಡಬೇಕು. ಆಧುನಿಕ ಭಾರತಕ್ಕೆ ನೆಹರೂ ಅಡಿಪಾಯ ಹಾಕಿರದೇ ಹೋಗಿದ್ದರೆ ಇಂದಿನ ಭಾರತ ಇರುತ್ತಿರಲಿಲ್ಲ. ಆರ್ಥಿಕತೆಯಲ್ಲಿ ಜಗತ್ತಿನಲ್ಲಿ 4ನೇ ಸ್ಥಾನದಲ್ಲಿದ್ದರೆ ಅದಕ್ಕೆ ನೆಹರೂ ಅವರೇ ಕಾರಣ ಎಂದು ಸಿದ್ದರಾಮಯ್ಯ ತಿಳಿಸಿದರು.

 

- Advertisement - 

 

Share This Article
error: Content is protected !!
";