ಗುಡೇಕೋಟೆ ಪೊಲೀಸ್ ಠಾಣೆಗೆ ನೂತನ ಎಸ್ ಪಿ, ಎಎಸ್ಪಿ, ಭೇಟಿ

News Desk

ಚಂದ್ರವಳ್ಳಿ ನ್ಯೂಸ್, ಗುಡೇಕೋಟೆ(ಕೂಡ್ಲಿಗಿ):
ಕೂಡ್ಲಿಗಿ ತಾಲೂಕಿನ ಗುಡೇಕೋಟೆ ಪೊಲೀಸ್ ಠಾಣೆಗೆ ವಿಜಯನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣಾಂಗ್ಷು ಗಿರಿ ಹಾಗೂ ಅಡಿಷನಲ್ ಪೊಲೀಸ್ ಉಪ ವರಿಷ್ಠಾಧಿಕಾರಿ ಜಿ.ಮಂಜುನಾಥ್ ಅವರು ಠಾಣೆಗೆ ಭೇಟಿ ನೀಡಿ ಪರಿಶೀಲಿಸಿದರು.

ನೂತನ ಜಿಲ್ಲಾ ಪೊಲೀಸ್ ಪ್ರಭಾರಿ ವರಿಷ್ಠಾಧಿಕಾರಿ ಅರುಣಾಂಗ್ಷು ಗಿರಿ ಮಾತನಾಡಿ, ಕರ್ತವ್ಯ ಮತ್ತು ಠಾಣೆ ಸ್ವಚ್ಛತೆ ಬಗ್ಗೆ ಪರಿಶೀಲನೆ ನಡೆಸಿ ಮಾತನಾಡಿದ ಅವರು ವಿಜಯನಗರ ಜಿಲ್ಲೆ ಐತಿಹಾಸಿಕ, ಭೌಗೋಳಿಕವಾಗಿ ದೊಡ್ಡದಿದೆ. ಅದರಂತೆ ಪೊಲೀಸ್ ವ್ಯವಸ್ಥೆ ಬಗ್ಗೆ ಜನರ ನಿರೀಕ್ಷೆ ದೊಡ್ಡದಿದೆ. ಠಾಣೆಗೆ ಬರುವ ಯಾರೇ ಆಗಲಿ ದುಃಖದಲ್ಲಿ ಇರುತ್ತಾರೆ.

- Advertisement - 

ಆ ಸಮಯದಲ್ಲಿ ಅವರ ಸಮಸ್ಯೆ ತಕ್ಷಣವೇ ಬಗೆಹರಿಸಲು ಸಾಧ್ಯವಿಲ್ಲ. ಆದರೆ ನಾವು ಅವರ ನೋವು ಅರ್ಥ ಮಾಡಿಕೊಂಡು ಸ್ಪಂದಿಸಿದರೆ, ಅದೇ ಅವರಿಗೆ ಸಹಾಯ ಮಾಡಿದಂತೆ ಆಗುತ್ತದೆ. ಈ ನಿಟ್ಟಿನಲ್ಲಿ ಪೊಲೀಸ್ ಮತ್ತು ಜನರ ನಡುವೆ ಉತ್ತಮ ಬಾಂಧವ್ಯ ಬೆಳೆಸಿಕೊಳ್ಳಬೇಕು ಎಂದು ತಿಳಿಸಿದರು.

ವಿಜಯನಗರ ಜಿಲ್ಲಾ ನೂತನ ಅಡಿಷನಲ್ ಪೊಲೀಸ್ ಉಪ ವರಿಷ್ಠಾಧಿಕಾರಿ ಜಿ.ಮಂಜುನಾಥ್ ಮಾತನಾಡಿ, ಸಣ್ಣ ಪುಟ್ಟ ಜಗಳ ಹೊರತುಪಡಿಸಿ ಬೇರೆ ಪ್ರಕರಣಗಳಲ್ಲಿ ನಿಯಮಿತವಾಗಿ ಪೊಲೀಸ್ ಠಾಣೆಗಳಿಗೆ ಭೇಟಿ ನೀಡಿ ವ್ಯವಸ್ಥೆ ಪರಿಶೀಲಿಸಲಾಗುವುದು. ಬೀಟ್ ಬಲಪಡಿಸುವುದು,

- Advertisement - 

ಕಳವು ಪ್ರಕರಣಗಳಲ್ಲಿ ರಿಕವರಿ, ಸೈಬರ್ ಕ್ರೈಂ ಕುರಿತು ಜನಜಾಗೃತಿ ಸೇರಿದಂತೆ ಯಾವುದೇ ವಿಷಯಗಳಲ್ಲಿ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ವಿಜಯನಗರ ಜಿಲ್ಲೆಯಲ್ಲಿ ಕೆಲಸ ನಿರ್ವಹಿಸುವ ಅವಕಾಶ ಮಾಡಿಕೊಟ್ಟಿರುವುದಕ್ಕೆ ಸರ್ಕಾರಕ್ಕೆ ಧನ್ಯವಾದ ಸಲ್ಲಿಸುವೆ. ಜಿಲ್ಲೆಯಲ್ಲಿ ಕಾನೂನು ವ್ಯವಸ್ಥೆ ಕಾಪಾಡಲು ಕಠಿಣ ಕ್ರಮ ಅನುಸರಿಸಲಾಗುವುದು ಎಂದು ಎಚ್ಚರಿಸಿದರು.

ಗುಡೇಕೋಟೆ ಪೊಲೀಸ್ ಠಾಣೆ ಪಿಎಸ್ಐ ಸುಬ್ರಮಣ್ಯಂ ಜಿ, ಎಎಸ್ಐ ಯೋಗೇಶ್, ಬಾಬಾ ಫಕೃದ್ವೀನ್ ಸೇರಿದಂತೆ ಪೊಲೀಸ್ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು ಎಂದು ಸಿ ಅರುಣ್ ಕುಮಾರ್ ಮಾಹಿತಿ ನೀಡಿದ್ದಾರೆ.

 

 

 

Share This Article
error: Content is protected !!
";