ಚಂದ್ರವಳ್ಳಿ ನ್ಯೂಸ್, ಹುಬ್ಬಳ್ಳಿ:
ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆ ಅಪರೂಪದ ಘಟನೆಯೊಂದಕ್ಕೆ ಸಾಕ್ಷಿಯಾಗಿದೆ. ಎರಡನೇ ಹೆರಿಗೆಗೆಂದು ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯು ಜನ್ಮ ನೀಡಿದ ಮಗುವಿನೊಳಗೊಂದು ಭ್ರೂಣ ಇರೋದು ಪತ್ತೆಯಾಗಿದ್ದು ಅಚ್ಚರಿಗೆ ಕಾರಣವಾಗಿದೆ ಅಷ್ಟೇ ಅಲ್ಲ ವೈದ್ಯಕೀಯ ಲೋಕ ಬೆಚ್ಚು ಬೀಳುವಂತೆ ಮಾಡಿದೆ. ಎರಡನೇ ಹೆರಿಗೆಗೆಂದು ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಗರ್ಭಿಣಿಯೊಬ್ಬರು ಕಿಮ್ಸ್ ನ ತಾಯಿ ಮತ್ತು ಮಕ್ಕಳ ವಿಭಾಗದಲ್ಲಿ ದಾಖಲಾಗಿದ್ದರು.
ಕಳೆದಸೆಪ್ಟೆಂಬರ್ 23ರಂದು ಗಂಡು ಮಗುವಿಗೆ ಈಕೆ ಜನ್ಮ ನೀಡಿದ್ದಾಳೆ. ಮಗುವಿನ ದೇಹದಲ್ಲಿ ಕೆಲ ಬದಲಾವಣೆಗಳು ಕಂಡು ಬಂದ ಹಿನ್ನಲೆಯಲ್ಲಿ ನವಜಾತ ಶಿಶುವಿಗೆ ಆಲ್ಟ್ರಾಸೌಂಡ್ ಮಾಡಿಸಲಾಗಿದೆ.
ಈ ವೇಳೆ ಮಗುವಿನ ಹೊಟ್ಟೆಯಲ್ಲಿ ಬೆನ್ನುಹುರಿ ಇರುವ ಭ್ರೂಣ ಪತ್ತೆಯಾಗಿದೆ. ಆದರೂ ಎಂಆರ್‌ಐ ಸ್ಕ್ಯಾನ್ ಮಾಡಲು ವೈದ್ಯರು ನಿರ್ಧರಿಸಿದ್ದಾರೆ.
ಅಂತಿಮ ವರದಿ ಬಂದ ಬಳಿಕ ಮುಂದಿನ ಕ್ರಮದ ಬಗ್ಗೆ ನಿರ್ಧರಿಸೋದಾಗಿ ತಿಳಿಸಿದ್ದು, ಇದೊಂದು ಅಪರೂಪದ ಪ್ರಕರಣ ಎಂದು ಹುಬ್ಬಳ್ಳಿ ಕಿಮ್ಸ್ ನ ವೈದ್ಯಕೀಯ ಅಧೀಕ್ಷಕ ಡಾ.ಈಶ್ವರ ಹಸಬಿ ಅಭಿಪ್ರಾಯಪಟ್ಟಿದ್ದಾರೆ.

