ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕನ್ನಡ ಚಿತ್ರರಂಗದ ಹಿರಿಯ ನಟಿ, ‘ಅಭಿನಯ ಸರಸ್ವತಿ’ ಎಂದೇ ಹೆಸರುವಾಸಿಯಾಗಿದ್ದ ಶ್ರೀಮತಿ ಬಿ.ಸರೋಜಾದೇವಿ ಅವರ ನಿಧನದ ಸುದ್ದಿ ತಿಳಿದು ದುಃಖವಾಯಿತು ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಕಂಬನಿ ಮಿಡಿದಿದ್ದಾರೆ.
ಕನ್ನಡ, ತಮಿಳು, ತೆಲುಗು ಮತ್ತು ಹಿಂದಿ ಚಿತ್ರರಂಗಗಳಲ್ಲಿ ಸುಮಾರು 160ಕ್ಕೂ ಚಿತ್ರಗಳಲ್ಲಿ ನಾಯಕ ನಟಿಯಾಗಿ ಅಭಿನಯಿಸಿದ್ದ ಅವರ ಅಗಲಿಕೆಯಿಂದ, ಕನ್ನಡ ಮಾತ್ರವಲ್ಲದೆ ಇಡೀ ಭಾರತೀಯ ಚಿತ್ರರಂಗಕ್ಕೆ ತುಂಬಲಾರದ ನಷ್ಟವಾಗಿದೆ.
ಭಗವಂತ ಅವರ ಆತ್ಮಕ್ಕೆ ಚಿರಶಾಂತಿ ನೀಡಲಿ, ಅವರ ಕುಟುಂಬ ಸದಸ್ಯರಿಗೆ, ಅಭಿಮಾನಿಗಳಿಗೆ ಈ ಅಗಲಿಕೆಯ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ಅಶೋಕ್ ಪ್ರಾರ್ಥಿಸಿದ್ದಾರೆ.