ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ಅದರ ವ್ಯಾಪ್ತಿಯಲ್ಲಿರುವ ಕಚೇರಿಗಳಲ್ಲಿ ಖಾಲಿ ಇರುವ ಶಾಖಾಧಿಕಾರಿ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಉಳಿಕೆ ಮೂಲ ವೃಂದ 17 ಹುದ್ದೆಗಳು ಹಾಗೂ ಕಲ್ಯಾಣ ಕರ್ನಾಟಕ ವೃಂದ 02 ಹುದ್ದೆಗಳು ನೇರ ನೇಮಕಾತಿಗೆ ಅಧಿಸೂಚಿಸಲಾಗಿದೆ.
ಅರ್ಜಿ ಸಲ್ಲಿಸಲು ಮೇ 15 ಕೊನೆಯ ದಿನಾಂಕವಾಗಿದೆ.
ಹುದ್ದೆಗಳ ವರ್ಗೀಕರಣ, ವೇತನ ಶ್ರೇಣಿ, ನೇಮಕಾತಿ ವಿಧಾನ, ಸ್ಪರ್ಧಾತ್ಮಕ ಪರೀಕ್ಷೆ, ವಯೋಮಿತಿ, ಅರ್ಹತಾ ಮಾನದಂಡಗಳು, ಅರ್ಜಿ ಶುಲ್ಕ ಮತ್ತು ಆಯ್ಕೆ ವಿಧಾನ ಕುರಿತಾದ ಸಂಪೂರ್ಣ ವಿವರಗಳಿಗಾಗಿ ಅಭ್ಯರ್ಥಿಗಳು ಈ ಅಧಿಕೃತ ವೆಬ್‍ಸೈಟ್‍ಗಳಾದ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA): https://cetonline.karnataka.gov.in/kea/indexnew ಹಾಗೂ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ https://karnataka.nalsa.gov.in ಗೆ ಭೇಟಿ ನೀಡಬಹುದು.
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿತ ಅವಧಿಯೊಳಗೆ ಆನ್‍ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಬಹುದು ಎಂದು ಸದಸ್ಯ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


