Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಗ್ರಾಮೀಣ ಪತ್ರಕರ್ತರ ಬಸ್‌ಪಾಸ್ ನಿಯಮ ಮತ್ತಷ್ಟು ಸರಳೀಕರಣಕ್ಕೆ ಕೆಯುಡಬ್ಲ್ಯುಜೆ ಆಗ್ರಹ

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್‌ಪಾಸ್ ಸೌಲಭ್ಯ ಕಲ್ಪಿಸಿರುವ ಹಿನ್ನೆಲೆಯಲ್ಲಿ, ಬಸ್‌ಪಾಸ್ ಪಡೆಯಲು ಇರುವ ನಿಯಮಗಳನ್ನು ಮತ್ತಷ್ಟು ಸರಳೀಕರಣಗೊಳಿಸುವಂತೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯುಜೆ) ಸರ್ಕಾರವನ್ನು ಆಗ್ರಹಿಸಿದೆ.

ಗ್ರಾಮೀಣ ಪತ್ರಕರ್ತರು ತಮ್ಮ ವೃತ್ತಿ ಕರ್ತವ್ಯ ನಿರ್ವಹಿಸಲು ಅನುಕೂಲವಾಗುವ ಉದ್ದೇಶದಿಂದ ಉಚಿತ ಬಸ್‌ಪಾಸ್ ಸೌಲಭ್ಯ ಕಲ್ಪಿಸಿರುವುದು ಸ್ವಾಗತಾರ್ಹ. ಆದರೆ ಪ್ರಸ್ತುತ ಇರುವ ಕೆಲವು ನಿಯಮಗಳು ಬಸ್‌ಪಾಸ್‌ಗೆ ಅರ್ಜಿ ಸಲ್ಲಿಸಲು ಹಾಗೂ ಸೌಲಭ್ಯ ಪಡೆಯಲು ತೊಡಕಾಗಿವೆ ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು ಮುಖ್ಯಮಂತ್ರಿಗಳಿಗೆ ಸಲ್ಲಿಸಿರುವ ಮನವಿಯಲ್ಲಿ ತಿಳಿಸಿದ್ದಾರೆ.

Advertisement

ವಿಶೇಷವಾಗಿ ಜಿಲ್ಲಾ ಮಟ್ಟದಲ್ಲಿ ಪ್ರಕಟವಾಗುವ ಪತ್ರಿಕೆಗಳು ಹಾಗೂ ಪ್ರಾದೇಶಿಕ ಪತ್ರಿಕೆಗಳಲ್ಲಿ ಕಾರ್ಯನಿರ್ವಹಿಸುವ ತಾಲೂಕು ಮತ್ತು ಹೋಬಳಿ ಮಟ್ಟದ ವರದಿಗಾರರಿಗೆ ಬಸ್‌ಪಾಸ್ ಸೌಲಭ್ಯ ದೊರೆಯುವಂತೆ ನಿಯಮಗಳನ್ನು ಸರಳೀಕರಿಸಬೇಕು ಎಂದು ಕೆಯುಡಬ್ಲ್ಯುಜೆ ಒತ್ತಾಯಿಸಿದೆ.

ಗ್ರಾಮೀಣ ಭಾಗದಲ್ಲಿ ಕಾರ್ಯನಿರ್ವಹಿಸುವ ಅರ್ಹ ಪತ್ರಕರ್ತರಿಗೆ ಯಾವುದೇ ಅನಗತ್ಯ ನಿಯಮಗಳಿಂದ ಸೌಲಭ್ಯ ವಂಚಿತವಾಗದಂತೆ, ಬಸ್‌ಪಾಸ್ ನಿಯಮಾವಳಿಗಳನ್ನು ಮರುಪರಿಶೀಲಿಸಿ ಅಗತ್ಯ ತಿದ್ದುಪಡಿ ಮಾಡುವಂತೆ ಸಂಘ ಮನವಿ ಮಾಡಿದೆ. ಗ್ರಾಮೀಣ ಪತ್ರಕರ್ತರ ಹಿತದೃಷ್ಟಿಯಿಂದ ಮನವಿಯನ್ನು ಆದ್ಯತೆಯಿಂದ ಪರಿಗಣಿಸಿ, ನಿಯಮಗಳ ಸರಳೀಕರಣಕ್ಕೆ ಕ್ರಮ ಕೈಗೊಳ್ಳುವಂತೆ ಕೆಯುಡಬ್ಲ್ಯುಜೆ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಮನವಿ ಮಾಡಿದ್ದಾರೆ.

Author
ಸಿ.ಹೆಂಜಾರಪ್ಪ
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮುಖ್ಯಮಂತ್ರಿಯವರ ತಾಂತ್ರಿಕ ಸಲಹೆಗಾರರಾಗಿ ನಿವೃತ್ತ ಕಾರ್ಯದರ್ಶಿ ಡಾ. ಕೆ. ಜೈಪ್ರಕಾಶ್ ನೇಮಕಜೆಎನ್‌ಯು ಪ್ರೊಫೆಸರ್ ಹಾಗೂ ಕಾಂಗ್ರೆಸ್ ಸಂಸದರಿಂದ ಲೈಂಗಿಕ ಕಿರುಕುಳ ಆರೋಪ, ಸೇವೆಯಿಂದ ವಜಾಆರ್‌ಬಿಐ ಬಿಗ್ ಶಾಕ್: ರೆಪೋ ದರ ಏರಿಕೆಯಿಂದ ಸಾಲಗಾರರಿಗೆ ಹೆಚ್ಚಳವಾದ ಇಎಂಐ ಬರೆ!ಎಸ್‌ಐಆರ್ ರದ್ದುಪಡಿಸುವಂತೆ ಜನತಾ ನ್ಯಾಯಾಲಯ ಸಮಾವೇಶ: ಮುಖ್ಯ ಚುನಾವಣಾ ಆಯುಕ್ತರ ರಾಜೀನಾಮೆಗೆ ಆಗ್ರಹ10 ಸಚಿವರ ವಿರುದ್ಧ ಸ್ಟಿಂಗ್ ಆಪರೇಷನ್ ಸುಪಾರಿ - ಶಾಸಕ ಗಣಿಗ ರವಿ ಸ್ಫೋಟಕ ಪೆನ್‌ಡ್ರೈವ್ ಬಾಂಬ್!ಸಚಿವರಿಗೆ ಬಲೆ ಬೀಳಿಸಲು ಯತ್ನ: ಸಿಎಂ ಎಚ್ಚರಿಕೆ ನೀಡಿದ್ದಾರೆ ಎಂದ ಸತೀಶ್ ಜಾರಕಿಹೊಳಿಕೇಂದ್ರದೊಂದಿಗೆ ಜಿಎಸ್‌ಟಿ ಸಭೆ: ರಾಜ್ಯದ ಬಾಕಿ ಹಣದ ಕುರಿತು 'ಸಿಹಿ ಸುದ್ದಿ' ನೀಡಿದ ಸಿಎಂ ಡಿ.ಕೆ ಶಿವಕುಮಾರ್ ಸುಳಿವು!ಪ್ರಜ್ವಲ್ ರೇವಣ್ಣ ಜೈಲಿನಲ್ಲಿ ಮೊಬೈಲ್ ಪತ್ತೆ ಪ್ರಕರಣ: ಹಿಂಡಲಗಾ ಜೈಲಿಗೆ ಸ್ಥಳಾಂತರಪ್ರತಿಭಟನೆ ಹೆಸರಲ್ಲಿ ಎಲ್ಲವನ್ನೂ ಬಂದ್ ಮಾಡಲು ಆಗದು: ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್ದಾವಣಗೆರೆಯಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ವಕೀಲರ ಪಟ್ಟು: ಮಧ್ಯಕರ್ನಾಟಕದಲ್ಲಿ ತೀವ್ರಗೊಂಡ ಹೋರಾಟ