Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಜನಾಗ್ರಹಕ್ಕೆ ಮಣಿದ ಸರ್ಕಾರ: ವಿವಾದಿತ ‘ಪಾರ್ಕ್ ತಿದ್ದುಪಡಿ ಮಸೂದೆ’ ವಾಪಸ್

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಉದ್ಯಾನವನಗಳ ಶೇಕಡಾ 5ರಷ್ಟು ಜಾಗವನ್ನು ಸಾರ್ವಜನಿಕ ಮತ್ತು ಮೂಲಸೌಕರ್ಯ ಯೋಜನೆಗಳಿಗೆ ಬಳಸಿಕೊಳ್ಳಲು ಅವಕಾಶ ಕಲ್ಪಿಸುವ 'ಕರ್ನಾಟಕ ಉದ್ಯಾನವನಗಳ (ಸಂರಕ್ಷಣೆ) ತಿದ್ದುಪಡಿ ಮಸೂದೆ-2026' ಅನ್ನು ಹಿಂಪಡೆಯಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಉಪಸ್ಥಿತಿಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ. 

ಇತ್ತೀಚೆಗೆ ಮುಕ್ತಾಯಗೊಂಡ ವಿಧಾನಮಂಡಲದ ಮುಂಗಾರು ಅಧಿವೇಶನದಲ್ಲಿ ಯಾವುದೇ ಸುದೀರ್ಘ ಚರ್ಚೆಯಿಲ್ಲದೆ ತರಾತುರಿಯಲ್ಲಿ ಈ ಮಸೂದೆಯನ್ನು ಅಂಗೀಕರಿಸಲಾಗಿತ್ತು. ಆದರೆ ಪರಿಸರ ಪ್ರೇಮಿಗಳು, ಸಾರ್ವಜನಿಕರು ಹಾಗೂ ವಿರೋಧ ಪಕ್ಷಗಳಿಂದ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ, ಸರ್ಕಾರ ತನ್ನ ನಿರ್ಧಾರದಿಂದ ಹಿಂದೆ ಸರಿಯಬೇಕಾಯಿತು. 

Advertisement

ತೀವ್ರ ಆಕ್ರೋಶಕ್ಕೆ ಕಾರಣವೇನು?:
 
ಹೆಬ್ಬಾಳದಿಂದ ಸೆಂಟ್ರಲ್ ಸಿಲ್ಕ್ ಬೋರ್ಡ್‌ವರೆಗೆ ನಿರ್ಮಿಸಲು ಉದ್ದೇಶಿಸಿರುವ 17 ಕಿ.ಮೀ ಉದ್ದದ ಅವಳಿ ಸುರಂಗ ರಸ್ತೆ (ಟನಲ್ ರೋಡ್) ಯೋಜನೆಗೆ ಲಾಲ್‌ಬಾಗ್‌ನ ಸಿದ್ದಾಪುರ ಗೇಟ್ ಬಳಿ ಪ್ರವೇಶ ಮತ್ತು ನಿರ್ಗಮನ ಮಾರ್ಗ ಕಲ್ಪಿಸಲು ಈ ತಿದ್ದುಪಡಿಯನ್ನು ತರಲಾಗುತ್ತಿದೆ ಎಂಬ ಆರೋಪ ಕೇಳಿಬಂದಿತ್ತು. 

ಉದ್ಯಾನವನದ ಒಟ್ಟು ಭೂಪ್ರದೇಶದ ಶೇ.5ರಷ್ಟು ಜಾಗವನ್ನು 'ಸಾರ್ವಜನಿಕ ಯೋಜನೆ'ಗಳ ಹೆಸರಿನಲ್ಲಿ ಸರ್ಕಾರಿ ಇಲಾಖೆಗಳು, ಶಾಸನಬದ್ಧ ಸಂಸ್ಥೆಗಳು ಹಾಗೂ ಸ್ಥಳೀಯ ಸಂಸ್ಥೆಗಳಿಗೆ ಉಡುಗೊರೆ, ವಿನಿಮಯ, ಅಡಮಾನ, ಮಾರಾಟ ಅಥವಾ ಗುತ್ತಿಗೆ ಮೂಲಕ ನೀಡಲು ಮಸೂದೆಯಲ್ಲಿ ಅವಕಾಶ ನೀಡಲಾಗಿತ್ತು. ಇದು ಬೆಂಗಳೂರಿನ ಹಸಿರು ವಲಯ ಮತ್ತು ಐತಿಹಾಸಿಕ ಲಾಲ್‌ಬಾಗ್, ಕಬ್ಬನ್ ಪಾರ್ಕ್‌ಗಳ ಅಸ್ತಿತ್ವಕ್ಕೆ ಕಂಠಕವಾಗಲಿದೆ ಎಂದು ನಾಗರಿಕರು ಹಾಗೂ ಜಿ.ವೈ. ಯೆಲ್ಲಪ್ಪ ರೆಡ್ಡಿ ಅವರಂತಹ ಹಿರಿಯ ಪರಿಸರವಾದಿಗಳ ನೇತೃತ್ವದಲ್ಲಿ ಬೃಹತ್ ಹೋರಾಟ ನಡೆಸಿದ್ದರು. 

ಸರ್ಕಾರದ ತೀರ್ಮಾನ ಸ್ವಾಗತಿಸಿದ ತೇಜಸ್ವಿ ಸೂರ್ಯ: 
ರಾಜ್ಯ ಸರ್ಕಾರದ ಈ ನಿರ್ಧಾರವನ್ನು ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಸ್ವಾಗತಿಸಿದ್ದಾರೆ. ಈ ಕುರಿತು ಎಕ್ಸ್’ (ಟ್ವಿಟರ್)‌ನಲ್ಲಿ ವಿಡಿಯೋ ಸಂದೇಶ ಹಂಚಿಕೊಂಡಿರುವ ಅವರು,   

"ಜನರು ತಮ್ಮ ಧ್ವನಿ ಎತ್ತಿದರು, ಸರ್ಕಾರ ಅದನ್ನು ಆಲಿಸಿತು. ಪ್ರಜಾಪ್ರಭುತ್ವ ಹೀಗೆಯೇ ಕಾರ್ಯನಿರ್ವಹಿಸಬೇಕು. 5% ಉದ್ಯಾನವನ ಭೂಮಿ ಪರಭಾರೆಗೆ ಅವಕಾಶ ನೀಡುವ ಕಾಯ್ದೆಯನ್ನು ವಿರೋಧಿಸಿ, 91 ವರ್ಷದ ಯೆಲ್ಲಪ್ಪ ರೆಡ್ಡಿ ಅವರ ನೇತೃತ್ವದಲ್ಲಿ ಲಾಲ್‌ಬಾಗ್‌ಗೆ ಆಗಮಿಸಿ ಹೋರಾಟ ನಡೆಸಿದ ಪ್ರತಿಯೊಬ್ಬ ನಾಗರಿಕನಿಗೂ ಧನ್ಯವಾದಗಳು" ಎಂದು ಹೇಳಿದ್ದಾರೆ.

ಸಾರ್ವಜನಿಕರ ಅಭಿಪ್ರಾಯಕ್ಕೆ ಗೌರವ ನೀಡಿ ಮಸೂದೆ ಹಿಂಪಡೆದ ನಿರ್ಧಾರವನ್ನು ಶ್ಲಾಘಿಸಿರುವ ಅವರು, ಹೋರಾಟ ಇನ್ನೂ ಮುಗಿದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. "ವಿನಾಶಕಾರಿ ಟನಲ್ ರೋಡ್ ಯೋಜನೆಯನ್ನು ಅಧಿಕೃತವಾಗಿ ಕೈಬಿಡುವವರೆಗೂ ಲಾಲ್‌ಬಾಗ್ ಆಗಲಿ ಅಥವಾ ಅಲ್ಲಿನ 300 ಕೋಟಿ ವರ್ಷಗಳಷ್ಟು ಪ್ರಾಚೀನ 'ಪೆನಿನ್ಸುಲರ್ ಗ್ನೈಸ್' ಶಿಲೆಯಾಗಲಿ ಸುರಕ್ಷಿತವಲ್ಲ. ಹೈಕೋರ್ಟ್‌ನಲ್ಲಿ ಟನಲ್ ರೋಡ್ ಯೋಜನೆ ವಿರುದ್ಧ ವಾದ ಮಂಡಿಸಲಾಗಿದ್ದು, ಭಾರತೀಯ ಭೂವೈಜ್ಞಾನಿಕ ಸಮೀಕ್ಷೆ ವರದಿ ಸಲ್ಲಿಸುವಂತೆ ಕೋರ್ಟ್ ಸೂಚಿಸಿದೆ. ಮುಂದಿನ ವಿಚಾರಣೆ ಸೆಪ್ಟೆಂಬರ್ 10ಕ್ಕೆ ನಿಗದಿಯಾಗಿದೆ" ಎಂದು ತಿಳಿಸಿದ್ದಾರೆ. 

ಅಲ್ಲದೆ, ಹೆಬ್ಬಾಳ ಕೆರೆ ಬಳಿ ಸುರಂಗ ಯೋಜನೆಗೆ ಅನುಕೂಲವಾಗುವಂತೆ ಕೆರೆಗಳ ಬಫರ್ ವಲಯವನ್ನು 30 ಮೀಟರ್‌ನಿಂದ 3 ಮೀಟರ್‌ಗೆ ಇಳಿಸಿರುವ 'ಕರ್ನಾಟಕ ಕೆರೆ ಸಂರಕ್ಷಣಾ ಕಾಯ್ದೆ' ತಿದ್ದುಪಡಿಯನ್ನೂ ಸರ್ಕಾರ ತಕ್ಷಣವೇ ಹಿಂಪಡೆಯಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಮುಂದಿನ ನಡೆ:  ಮಸೂದೆಯನ್ನು ಸದ್ಯಕ್ಕೆ ಹಿಂಪಡೆದಿದ್ದರೂ, ಸಾರ್ವಜನಿಕ ವಲಯದಲ್ಲಿ ಚರ್ಚಿಸಿದ ನಂತರ ಮುಂದಿನ ಅಧಿವೇಶನದಲ್ಲಿ ಮರುಮಂಡಿಸುವ ಸುಳಿವನ್ನು ಸರ್ಕಾರ ನೀಡಿದೆ. ಇದರಿಂದಾಗಿ ಬೆಂಗಳೂರಿನ ಹಸಿರು ಪ್ರದೇಶಗಳು, ಕೆರೆಗಳು ಹಾಗೂ ಉದ್ಯಾನವನಗಳ ರಕ್ಷಣೆಗಾಗಿ ಸಾರ್ವಜನಿಕ ಹಾಗೂ ಕಾನೂನು ಹೋರಾಟ ಮುಂದುವರಿಯಲಿದೆ. 

 

 

 

Author
ಸಿ.ಹೆಂಜಾರಪ್ಪ
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಸಾಪ ಮಾಜಿ ಜಿಲ್ಲಾಧ್ಯಕ್ಷ, ಶಿಕ್ಷಣತಜ್ಞ ಡಾ. ಕೆ.ಎಂ. ವೀರೇಶ್ ಹೃದಯಾಘಾತದಿಂದ ನಿಧನದುರ್ಗಕ್ಕೆ ಹರಿದು ಬಂದ ಭದ್ರೆ- ಸೆ.24ರಂದು ಮುಖ್ಯಮಂತ್ರಿಗಳಿಂದ ಗಂಗಾಪೂಜೆ,  ಬೃಹತ್ ಸಾರ್ವಜನಿಕ ಸಮಾರಂಭಆರ್.ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ 22ನೇ ಘಟಿಕೋತ್ಸವ ಮತ್ತು ಪದವಿ ಪ್ರದಾನ ಕಾರ್ಯಕ್ರಮನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಬೈಕ್ ಸವಾರ ಸಾವುಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಸಭೆ ಹೋರಾಟಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಾತಿನಿಧ್ಯ ಕಡಿಮೆ- ಚಿಕ್ಕಪ್ಪನಹಳ್ಳಿ ಷಣ್ಮುಖಕುಂಚಿಟಿಗ ನೌಕರರ ಸಂಘಕ್ಕೆ ಸದಸ್ಯರಾಗಿ: ಎಸ್.ಕೆ ಲಕ್ಷ್ಮಣ್ಚಳವಳಿ ನೆನಪಾಗಿ ಉಳಿದ ‘ತೆಂಕ-ಬಡಗ’ಅಂತಾರಾಷ್ಟ್ರೀಯ ಶಾಂತಿ ದಿನ – ಮನದ ದ್ವೇಷ ಕರಗಿದಾಗಲೇ ಜಗದ ಶಾಂತಿ ಅರಳುವುದು!ಗಣಪತಿ ಮೆರವಣಿಗೆ ವೇಳೆ ಗಲಾಟೆ 7 ಯುವಕರ ವಿರುದ್ಧ ಸುಮೋಟೋ ಪ್ರಕರಣ ದಾಖಲು