Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಜನಾರ್ದನ ರೆಡ್ಡಿ ಕಳ್ಳರ ಸಂಘದ ಅಧ್ಯಕ್ಷ, ಶ್ರೀರಾಮುಲು ಉಪಾಧ್ಯಕ್ಷ: ಶಾಸಕ ಪ್ರದೀಪ್ ಈಶ್ವರ್ ವಾಗ್ದಾಳಿ 

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬಿಜೆಪಿ ನಾಯಕರ ವಿರುದ್ಧ ಕಿಡಿಕಾರಿರುವ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್, "ಜನಾರ್ದನ ರೆಡ್ಡಿ ಅಂತಾರಾಷ್ಟ್ರೀಯ ಕಳ್ಳರ ಸಂಘದ ಅಧ್ಯಕ್ಷ ಮತ್ತು ಬಿ. ಶ್ರೀರಾಮುಲು ಅದರ ಉಪಾಧ್ಯಕ್ಷ" ಎಂದು ಆಕ್ರೋಶ ಹೊರಹಾಕಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದ ಹಗರಣಗಳ ಸಾಲನ್ನು ತೆರೆದಿಟ್ಟು ಕಮಲ ನಾಯಕರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. 

Advertisement

'ಲೂಟಿಕೋರರಿಂದ ಪಾಠ ಕಲಿಯಬೇಕಿಲ್ಲ'"ಕರ್ನಾಟಕವನ್ನು ಮನಸೋಇಚ್ಛೆ ಲೂಟಿ ಮಾಡಿದ್ದೇ ಈ ಜನಾರ್ದನ ರೆಡ್ಡಿ ಮತ್ತು ಶ್ರೀರಾಮುಲು. ಇಂತಹವರಿಂದ ನಾವು ಸದಾಚಾರದ ಪಾಠ ಕಲಿಯುವ ಅಗತ್ಯವೇ ಇಲ್ಲ" ಎಂದ ಅವರು, "ಕರ್ನಾಟಕದ ಜನತೆಗೆ ಈ ನಾಯಕರ ಅಸಲಿ ಮುಖ ಹಾಗೂ ಇತಿಹಾಸ ಚೆನ್ನಾಗಿ ಗೊತ್ತಿದೆ" ಎಂದು ಹೇಳಿದರು.

 ಬಿಜೆಪಿ ಆಡಳಿತಾವಧಿಯ ಹಗರಣಗಳ ಪಟ್ಟಿ:ತಮ್ಮ ಮಾತನ್ನು ಮುಂದುವರಿಸಿದ ಕಾಂಗ್ರೆಸ್ ಶಾಸಕರು, ಬಿಜೆಪಿ ಆಡಳಿತದ ಅವಧಿಯಲ್ಲಿ ನಡೆದಿದೆ ಎನ್ನಲಾದ ಸಾಲು ಸಾಲು ಅಕ್ರಮಗಳನ್ನು ಪ್ರಸ್ತಾಪಿಸಿದರು.

ಕೋವಿಡ್ ಅಕ್ರಮ ಬೋವಿ ಅಭಿವೃದ್ಧಿ ನಿಗಮದ ಹಗರಣ, ದೇವರಾಜ್ ಅರಸು ಟ್ರಕ್ ಟರ್ಮಿನಲ್ ಹಗರಣ, ಕಿಯೋನಿಕ್ಸ್ ಹಾಗೂ ಪಿಎಸ್ಐ ನೇಮಕಾತಿ ಅಕ್ರಮ ನೀಟ್ ಮತ್ತು ಬಿಟ್‌ಕಾಯಿನ್ ಹಗರಣಗಳು, ಪರಶುರಾಮ್ ಥೀಮ್ ಪಾರ್ಕ್ ಹಾಗೂ ಕೆಕೆಆರ್‌ಡಿಬಿ ಅಕ್ರಮಗಳು ಉತ್ತರ ನೀಡಲಿ ಎಂದು ಅವರು ಸವಾಲ್ ಹಾಕಿದರು.

"ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ನಾಯಕರಾದ ಆರ್. ಅಶೋಕ್, ಬಿ. ಶ್ರೀರಾಮುಲು, ಡಾ. ಕೆ. ಸುಧಾಕರ್, ಶಶಿಕಲಾ ಜೊಲ್ಲೆ, ಕೋಟ ಶ್ರೀನಿವಾಸ ಪೂಜಾರಿ ಹಾಗೂ ಜನಾರ್ದನ ರೆಡ್ಡಿ ಸೇರಿದಂತೆ ಅನೇಕರ ಅವಧಿಯಲ್ಲಿ ನೂರಾರು ಕೋಟಿ ರೂಪಾಯಿಗಳ ಹಗರಣಗಳು ನಡೆದಿವೆ. ಬಿಜೆಪಿ ನಾಯಕರು ಮೊದಲು ಈ ಎಲ್ಲಾ ಸಾಲು ಸಾಲು ಅಕ್ರಮಗಳಿಗೆ ನಾಡಿನ ಜನತೆಗೆ ಸ್ಪಷ್ಟ ಉತ್ತರ ನೀಡಲಿ" ಎಂದು ಶಾಸಕ ಪ್ರದೀಪ್ ಈಶ್ವರ್ ಕಟುವಾಗಿ ಸವಾಲೆಸೆದರು.

 

 

Author
ಸಿ.ಹೆಂಜಾರಪ್ಪ
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಸಾಪ ಮಾಜಿ ಜಿಲ್ಲಾಧ್ಯಕ್ಷ, ಶಿಕ್ಷಣತಜ್ಞ ಡಾ. ಕೆ.ಎಂ. ವೀರೇಶ್ ಹೃದಯಾಘಾತದಿಂದ ನಿಧನದುರ್ಗಕ್ಕೆ ಹರಿದು ಬಂದ ಭದ್ರೆ- ಸೆ.24ರಂದು ಮುಖ್ಯಮಂತ್ರಿಗಳಿಂದ ಗಂಗಾಪೂಜೆ,  ಬೃಹತ್ ಸಾರ್ವಜನಿಕ ಸಮಾರಂಭಆರ್.ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ 22ನೇ ಘಟಿಕೋತ್ಸವ ಮತ್ತು ಪದವಿ ಪ್ರದಾನ ಕಾರ್ಯಕ್ರಮನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಬೈಕ್ ಸವಾರ ಸಾವುಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಸಭೆ ಹೋರಾಟಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಾತಿನಿಧ್ಯ ಕಡಿಮೆ- ಚಿಕ್ಕಪ್ಪನಹಳ್ಳಿ ಷಣ್ಮುಖಕುಂಚಿಟಿಗ ನೌಕರರ ಸಂಘಕ್ಕೆ ಸದಸ್ಯರಾಗಿ: ಎಸ್.ಕೆ ಲಕ್ಷ್ಮಣ್ಚಳವಳಿ ನೆನಪಾಗಿ ಉಳಿದ ‘ತೆಂಕ-ಬಡಗ’ಅಂತಾರಾಷ್ಟ್ರೀಯ ಶಾಂತಿ ದಿನ – ಮನದ ದ್ವೇಷ ಕರಗಿದಾಗಲೇ ಜಗದ ಶಾಂತಿ ಅರಳುವುದು!ಗಣಪತಿ ಮೆರವಣಿಗೆ ವೇಳೆ ಗಲಾಟೆ 7 ಯುವಕರ ವಿರುದ್ಧ ಸುಮೋಟೋ ಪ್ರಕರಣ ದಾಖಲು