ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಲೋಕಸಭಾ ಕ್ಷೇತ್ರಗಳ ಮರುವಿಂಗಡಣೆ ವಿಚಾರದಲ್ಲಿ ಕೇಂದ್ರ ಸರ್ಕಾರವು ದಕ್ಷಿಣ ರಾಜ್ಯಗಳಿಗೆ ಅನ್ಯಾಯ ಮಾಡುತ್ತಿದೆ ಎಂಬ ಕಾಂಗ್ರೆಸ್ ಆರೋಪಕ್ಕೆ ಪ್ರತಿಪಕ್ಷ ನಾಯಕ ಆರ್. ಅಶೋಕ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. "ಕಾಂಗ್ರೆಸ್ ಪಕ್ಷವು ದೇಶವನ್ನು ದಾರಿ ತಪ್ಪಿಸಲು ಸುಳ್ಳು ಭಯವನ್ನು ಬಿತ್ತುತ್ತಿದೆ, ಆದರೆ ಅಂಕಿಅಂಶಗಳು ಸುಳ್ಳು ಹೇಳುವುದಿಲ್ಲ" ಎಂದು ಅವರು ಗುಡುಗಿದ್ದಾರೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಹೇಳಿಕೆಯನ್ನು ಉಲ್ಲೇಖಿಸಿ ಆರ್. ಅಶೋಕ್ ಅವರು ದಕ್ಷಿಣ ಭಾರತದ ರಾಜ್ಯಗಳಿಗೆ ಸಿಗಲಿರುವ ಪ್ರಾತಿನಿಧ್ಯದ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.
ಅಂಕಿಅಂಶಗಳ ಸಮರ: ಅಶೋಕ್
ಕ್ಷೇತ್ರ ಮರುವಿಂಗಡಣೆಯ ನಂತರ ದಕ್ಷಿಣದ ರಾಜ್ಯಗಳ ಪ್ರಾತಿನಿಧ್ಯ ಕುಸಿಯಲಿದೆ ಎಂಬ ವಾದವನ್ನು ಅಶೋಕ್ ಅವರು ಅಂಕಿಅಂಶಗಳ ಸಮೇತ ತಳ್ಳಿಹಾಕಿದ್ದಾರೆ.


