Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಪರಿಸರ ಕಾಳಜಿಯಿಂದ ಮಾನವ-ವನ್ಯಜೀವಿ ಸಂಘರ್ಷ ನಿಗ್ರಹ

ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಅರಣ್ಯ ಮತ್ತು ಜೀವಿವೈವಿಧ್ಯತೆಯನ್ನು ಸಂರಕ್ಷಿಸುವುದು ಎಲ್ಲರ ಕರ್ತವ್ಯವಾಗಿದ್ದು
, ಪರಿಸರ ಕಾಳಜಿಯನ್ನು ಪ್ರತಿಯೊಬ್ಬರೂ ಹೊಂದುವುದರಿಂದ ಮಾನವ - ವನ್ಯಜೀವಿ ಸಂಘರ್ಷವನ್ನು ಕಡಿಮೆ ಮಾಡಬಹುದು ಎಂದು ಬೆಂ.ಗ್ರಾ ಜಿಲ್ಲಾ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಧನಲಕ್ಷ್ಮಿ ಹೇಳಿದರು.

ಇಲ್ಲಿನ ಆರ್.ಎಲ್.ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಬುಧವಾರ ಅರಣ್ಯ ಇಲಾಖೆ ದೊಡ್ಡಬಳ್ಳಾಪುರ ಪ್ರಾದೇಶಿಕ ಅರಣ್ಯ ವಲಯದ ಸಹಯೋಗದಲ್ಲಿ ನಡೆದ ವನ್ಯಜೀವಿ ಸಪ್ತಾಹ-2026 ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

Advertisement

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಹುಲುಕುಡಿ ಬೆಟ್ಟ ಮತ್ತು ಮಾಕಳಿ ಬೆಟ್ಟವನ್ನು ಚಾರಣ ವಲಯವಾಗಿ ಗುರುತಿಸಲಾಗಿದೆ. ಪ್ರತಿ ತಿಂಗಳು ಸರಾಸರಿ 2 ಸಾವಿರಕ್ಕೂ ಅಧಿಕ ಜನರು ಸರ್ಕಾರದ ಅಧಿಕೃತ ವೆಬ್‌ಸೈಟ್‌ಮೂಲಕ ನೊಂದಣಿ ಮಾಡಿಕೊಂಡು ಚಾರಣಕ್ಕೆ ಆಗಮಿಸುತ್ತಿದ್ದಾರೆ. ಇತ್ತೀಚಿನ ದಿನಗಳಲ್ಲಿ ಈ ಚಾರಣ ಪ್ರದೇಶಗಳು ಹೆಚ್ಚಿನ ಜನಪ್ರಿಯತೆ ಪಡೆಯುತ್ತಿವೆ. ಚಾರಣ ಮಾಡುವ ಜೊತೆಗೆ ಅಲ್ಲಿನ ಪಕ್ಷಿ ಹಾಗೂ ಪ್ರಾಣಿ ಸಂಕುಲದ ಬಗ್ಗೆ ಕಾಳಜಿಯನ್ನು ಬೆಳೆಸಿಕೊಳ್ಳುವುದು ಅಗತ್ಯ ಎಂದರು.

ಯುವ ಸಂಚಲನ ಅಧ್ಯಕ್ಷ ಚಿದಾನಂದಮೂರ್ತಿ ಮಾತನಾಡಿ, ಪ್ರಕೃತಿಯ ಭಾಗವಾಗಿರುವ ಪ್ರತಿಯೊಂದು ಜೀವಿ ಹಾಗೂ ಗಿಡಮರಗಳಿಗೆ ತಮ್ಮದೇ ಆದ ನಿರ್ದಿಷ್ಟ ಆವಾಸದಲ್ಲಿ ಬದುಕುವ, ಬೆಳೆಸುವ ನೈಸರ್ಗಿಕ ಹಕ್ಕು ಇದೆ. ಮನುಷ್ಯನ ಮಿತಿಮೀರಿದ ಸ್ವಾರ್ಥದಿಂದಾಗಿ ಇಂದು ಪರಿಸರದಲ್ಲಿನ ವೈವಿಧ್ಯತೆ ನಾಶವಾಗುತ್ತಿದೆ. ನಮ್ಮ ನೆಲ-ಜಲ, ಜೀವಿ ಸಂಕುಲವನ್ನು ಸಂರಕ್ಷಿಸಿ ಉಳಿಸಿ ಬೆಳೆಸುವುದು ಆದ್ಯ ಕರ್ತವ್ಯವಾಗಬೇಕು. ನಮ್ಮಂತೆಯೇ ಪ್ರಕೃತಿಯ ಎಲ್ಲ ಜೀವಿಗಳಿಗೂ ಬದುಕುವ ಹಕ್ಕು ಇದೆ ಎಂಬ ಸಾಮಾನ್ಯ ಜ್ಞಾನವನ್ನು ಪ್ರತಿಯೊಬ್ಬರೂ ಹೊಂದುವುದು ಮುಖ್ಯ ಎಂದು ಹೇಳಿದರು.

ದೊಡ್ಡಬಳ್ಳಾಪುರ ವಲಯ ಅರಣ್ಯ ಸಂರಕ್ಷಣಾಧಿಕಾರಿ ಆರ್.ಹಂಸವಿ ಮಾತನಾಡಿ, ಅರಣ್ಯ ಹಾಗೂ ಜೀವಿ ಪರಿಸರದ ಜೊತೆಗೆ ಮನುಷ್ಯನ ನಡವಳಿಕೆ ಅತ್ಯಂತ ಕಾಳಜಿಯುತವಾಗಿರಬೇಕು. ಬೆಟ್ಟ-ಗುಡ್ಡಗಳು, ಹಳ್ಳ-ಕೊಳ್ಳ, ಕಾಡು ಪ್ರದೇಶ ದೇಶದ ಆಸ್ತಿಯಾಗಿರುತ್ತದೆ. ಪರಿಸರದೊಂದಿಗಿನ ಬದುಕು ಭವಿಷ್ಯದ ಸದೃಢ ಚಿಂತನೆಗಳಿಗೆ ಪೂರಕವಾಗಿರಬೇಕು ಎಂದರು.

ಇದೇ ವೇಳೆ ಅವರು, ದೊಡ್ಡಬಳ್ಳಾಪುರ ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿನ ಅರಣ್ಯ ಹಾಗೂ ಪರಿಸರ ಸಂಬಂಧಿತ ಹಲವು ಮಾಹಿತಿ ಹಾಗೂ ಘಟನಾವಳಿಗಳನ್ನು ಪ್ರಾತ್ಯಕ್ಷಿಕೆಯ ಮೂಲಕ ವಿವರಿಸಿದರು.

ಅಧ್ಯಕ್ಷತೆ ವಹಿಸಿದ್ದ ಶ್ರೀ ದೇವರಾಜ್‌ಅರಸ್‌ಶಿಕ್ಷಣ ಸಂಸ್ಥೆ ಉಪಾಧ್ಯಕ್ಷ ಜೆ.ರಾಜೇಂದ್ರ ಮಾತನಾಡಿ, ಅರಣ್ಯೀಕರಣ ಯೋಜನೆಗಳಿಗೆ ತಮ್ಮ ವಿದ್ಯಾ ಸಂಸ್ಥೆ ನಿರಂತರವಾಗಿ ಸಹಕಾರ ನೀಡುತ್ತಿದೆ. ತಾಲೂಕು ಸೇರಿದಂತೆ ನೆರೆಯ ಜಿಲ್ಲೆಗಳಲ್ಲೂ ಹೊಂಗೆ ಸಸಿ ಬೆಳೆಸುವ ಅಭಿಯಾನವನ್ನು ನಡೆಸಿ ಲಕ್ಷಾಂತರ ಹೊಂಗೆ ಗಿಡಗಳನ್ನು ಬೆಳೆಸಲಾಗಿದೆ. ದಿವಂಗತ ಆರ್.ಎಲ್.ಜಾಲಪ್ಪ ಅವರ ಪರಿಸರ ಕಾಳಜಿ ನಮ್ಮೆಲ್ಲರಿಗೂ ಮಾದರಿಯಾಗಿದೆ. ಅರಣ್ಯ ಇಲಾಖೆ ಪರಿಸರ ಸ್ನೇಹಿ ಕೆಲಸಗಳನ್ನು ನಿರ್ವಹಿಸುವುದರ ಜೊತೆಗೆ ರೈತ ಸ್ನೇಹಿಯಾಗಿಯೂ ಕೆಲಸ ಮಾಡುವುದು ಅತ್ಯಗತ್ಯ ಎಂದು ತಿಳಿಸಿದರು.

ಮಾಕಳಿ ಬೆಟ್ಟ ಚಾರಣದಲ್ಲಿ ಪಾಲ್ಗೊಂಡ ವಿದ್ಯಾರ್ಥಿಗಳು ತಮ್ಮ ಅನುಭವಗಳನ್ನು ಹಂಚಿಕೊಂಡರು.

ಕಾಲೇಜಿನ ಪ್ರಾಂಶುಪಾಲ ಡಾ.ಜಿ.ಮುರಳಿ, ಉಪಪ್ರಾಂಶುಪಾಲ ಡಾ.ಆರ್.ಎಂ.ಸುನಿಲ್‌ಕುಮಾರ್‌, ಮಾನವ ಸಂಪನ್ಮೂಲ ನಿರ್ದೇಶಕ ಬಾಬುರೆಡ್ಡಿ, ಶೈಕ್ಷಣಿಕ ನಿರ್ದೇಶಕ ಡಾ.ಎಂ.ಶ್ರೀನಿವಾಸರೆಡ್ಡಿ, ವಿದ್ಯಾರ್ಥಿ ಕಲ್ಯಾಣಾಧಿಕಾರಿ ಡಾ.ಎನ್.ಬಿ.ಶಂಕರ್, ಲಯನ್ಸ್‌ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ವಿಭಾಗದ ಅಧ್ಯಕ್ಷ ಪ್ರೊ.ಕೆ.ಆರ್.ರವಿಕಿರಣ್, ವಿವಿಧ ವಿಭಾಗಗಳ ಮುಖ್ಯಸ್ಥರು, ವಿದ್ಯಾರ್ಥಿ ಸ್ವಯಂ ಸೇವಕರು ಭಾಗವಹಿಸಿದ್ದರು.

 

Author
ಸಿ.ಹೆಂಜಾರಪ್ಪ
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮುಖ್ಯಮಂತ್ರಿಯವರ ತಾಂತ್ರಿಕ ಸಲಹೆಗಾರರಾಗಿ ನಿವೃತ್ತ ಕಾರ್ಯದರ್ಶಿ ಡಾ. ಕೆ. ಜೈಪ್ರಕಾಶ್ ನೇಮಕಜೆಎನ್‌ಯು ಪ್ರೊಫೆಸರ್ ಹಾಗೂ ಕಾಂಗ್ರೆಸ್ ಸಂಸದರಿಂದ ಲೈಂಗಿಕ ಕಿರುಕುಳ ಆರೋಪ, ಸೇವೆಯಿಂದ ವಜಾಆರ್‌ಬಿಐ ಬಿಗ್ ಶಾಕ್: ರೆಪೋ ದರ ಏರಿಕೆಯಿಂದ ಸಾಲಗಾರರಿಗೆ ಹೆಚ್ಚಳವಾದ ಇಎಂಐ ಬರೆ!ಎಸ್‌ಐಆರ್ ರದ್ದುಪಡಿಸುವಂತೆ ಜನತಾ ನ್ಯಾಯಾಲಯ ಸಮಾವೇಶ: ಮುಖ್ಯ ಚುನಾವಣಾ ಆಯುಕ್ತರ ರಾಜೀನಾಮೆಗೆ ಆಗ್ರಹ10 ಸಚಿವರ ವಿರುದ್ಧ ಸ್ಟಿಂಗ್ ಆಪರೇಷನ್ ಸುಪಾರಿ - ಶಾಸಕ ಗಣಿಗ ರವಿ ಸ್ಫೋಟಕ ಪೆನ್‌ಡ್ರೈವ್ ಬಾಂಬ್!ಸಚಿವರಿಗೆ ಬಲೆ ಬೀಳಿಸಲು ಯತ್ನ: ಸಿಎಂ ಎಚ್ಚರಿಕೆ ನೀಡಿದ್ದಾರೆ ಎಂದ ಸತೀಶ್ ಜಾರಕಿಹೊಳಿಕೇಂದ್ರದೊಂದಿಗೆ ಜಿಎಸ್‌ಟಿ ಸಭೆ: ರಾಜ್ಯದ ಬಾಕಿ ಹಣದ ಕುರಿತು 'ಸಿಹಿ ಸುದ್ದಿ' ನೀಡಿದ ಸಿಎಂ ಡಿ.ಕೆ ಶಿವಕುಮಾರ್ ಸುಳಿವು!ಪ್ರಜ್ವಲ್ ರೇವಣ್ಣ ಜೈಲಿನಲ್ಲಿ ಮೊಬೈಲ್ ಪತ್ತೆ ಪ್ರಕರಣ: ಹಿಂಡಲಗಾ ಜೈಲಿಗೆ ಸ್ಥಳಾಂತರಪ್ರತಿಭಟನೆ ಹೆಸರಲ್ಲಿ ಎಲ್ಲವನ್ನೂ ಬಂದ್ ಮಾಡಲು ಆಗದು: ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್ದಾವಣಗೆರೆಯಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ವಕೀಲರ ಪಟ್ಟು: ಮಧ್ಯಕರ್ನಾಟಕದಲ್ಲಿ ತೀವ್ರಗೊಂಡ ಹೋರಾಟ