ಚಂದ್ರವಳ್ಳಿ ನ್ಯೂಸ್, ಮಸ್ಕಿ:
ಬಿಜೆಪಿ ರಾಜ್ಯ ಅಧ್ಯಕ್ಷ ಬಿ.ವೈ ವಿಜಯೇಂದ್ರ ನೇತೃತ್ವದಲ್ಲಿ ನಡೆಯುತ್ತಿರುವ 'ಬಳ್ಳಾರಿ ಚಲೋ' ಪಾದಯಾತ್ರೆಯ ಮೂರನೇ ದಿನದ ನಡಿಗೆಯು ಮಸ್ಕಿ ತಾಲೂಕಿನ ಗುಡದೂರದಿಂದ ಆರಂಭಗೊಂಡಿದ್ದು, ಮಾರ್ಗಮಧ್ಯೆ ಪಾಂಡುರಂಗ ಕ್ಯಾಂಪ್‌ನಲ್ಲಿ ವಿಜಯೇಂದ್ರ ಅವರು ಭತ್ತದ ಗದ್ದೆಗೆ ಇಳಿದು ಸಾಂಕೇತಿಕವಾಗಿ ನಾಟಿ ಕಾರ್ಯದಲ್ಲಿ ಭಾಗವಹಿಸಿದರು. ಮಾಜಿ ಸಚಿವ ಬಿ. ಶ್ರೀರಾಮುಲು ಸೇರಿದಂತೆ ಹಲವು ಹಿರಿಯ ನಾಯಕರು ಹಾಗೂ ಕಾರ್ಯಕರ್ತರು ಈ ಸಂದರ್ಭದಲ್ಲಿ ಸಾಥ್ ನೀಡಿದರು.
ಸರ್ಕಾರದ ವಿರುದ್ಧ ಜನಾಕ್ರೋಶ: ಪಾದಯಾತ್ರೆಯುದ್ದಕ್ಕೂ ಕಾಂಗ್ರೆಸ್ ಸರ್ಕಾರದ ವಿರುದ್ಧ ಜನಸಾಮಾನ್ಯರು, ಯುವಜನತೆ ಹಾಗೂ ಮಹಿಳೆಯರು ಅಭೂತಪೂರ್ವ ಬೆಂಬಲ ವ್ಯಕ್ತಪಡಿಸುತ್ತಿದ್ದು, ಜನವಿರೋಧಿ ಆಡಳಿತದ ವಿರುದ್ಧ ಜನಾಕ್ರೋಶ ವ್ಯಕ್ತವಾಗುತ್ತಿದೆ.
ರೈತರ ಸ್ಥಿತಿಗೆ ಕಳವಳ: ತೀವ್ರ ಬರ ಹಾಗೂ ರಾಜ್ಯ ಸರ್ಕಾರದ ನಿರ್ಲಕ್ಷ್ಯದ ನಡುವೆಯೂ ಶ್ರಮಿಸುತ್ತಿರುವ ಅನ್ನದಾತರ ಧೈರ್ಯಕ್ಕೆ ಶರಣೆನ್ನಬೇಕು. ಕೃಷಿಕರ ಶ್ರಮಕ್ಕೆ ತಕ್ಕ ಪ್ರತಿಫಲ ಸಿಗುವವರೆಗೆ ಬಿಜೆಪಿ ಹೋರಾಟ ಸಾಗಲಿದೆ.
ಪ್ರಮುಖ ಬೇಡಿಕೆಗಳು: ರಾಜ್ಯದಲ್ಲಿ ಪರಿಸ್ಥಿತಿ ಗಂಭೀರವಾಗಿದ್ದು, ಸರ್ಕಾರ ತಕ್ಷಣವೇ ಎಚ್ಚೆತ್ತುಕೊಂಡು 190ಕ್ಕೂ ಹೆಚ್ಚು ತಾಲೂಕುಗಳನ್ನು 'ಬರಪೀಡಿತ' ಎಂದು ಘೋಷಿಸಬೇಕು. ಜೊತೆಗೆ ರೈತರ ₹5 ಲಕ್ಷದವರೆಗಿನ ಕೃಷಿ ಸಾಲವನ್ನು ತಕ್ಷಣವೇ ಮನ್ನಾ ಮಾಡಬೇಕು.
ಈ ಭ್ರಷ್ಟ ಕಾಂಗ್ರೆಸ್ ಸರ್ಕಾರದ ವೈಫಲ್ಯಗಳನ್ನು ಖಂಡಿಸಿ ಬಿಜೆಪಿ ಕೈಗೊಂಡಿರುವ ಈ ಜನಾಂದೋಲನವು ಮುಂಬರುವ ದಿನಗಳಲ್ಲಿ ಸರ್ಕಾರಕ್ಕೆ ತಕ್ಕ ಪಾಠ ಕಲಿಸಲಿದೆ ಎಂದು ವಿಜಯೇಂದ್ರ ಎಚ್ಚರಿಸಿದ್ದಾರೆ.




