ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮಂಗಳವಾರ ನಿಕಟಪೂರ್ವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಅವರ ಅಧಿಕೃತ ನಿವಾಸ ‘ಕಾವೇರಿ’ಯಲ್ಲಿ ಭೇಟಿ ಮಾಡಿ ಮಹತ್ವದ ಸಮಾಲೋಚನೆ ನಡೆಸಿದರು.
ಪ್ರಸ್ತುತ ರಾಜ್ಯ ರಾಜಕೀಯ ವಿದ್ಯಮಾನಗಳು, ಆಡಳಿತಾತ್ಮಕ ವಿಷಯಗಳು ಹಾಗೂ ಪಕ್ಷದ ಸಂಘಟನೆಗೆ ಸಂಬಂಧಿಸಿದ ಪ್ರಮುಖ ಸಂಗತಿಗಳ ಕುರಿತು ಇಬ್ಬರೂ ಹಿರಿಯ ನಾಯಕರು ಸುದೀರ್ಘವಾಗಿ ಚರ್ಚಿಸಿದರು.
ಈ ಭೇಟಿಯ ಕುರಿತು ಮಾಹಿತಿ ಹಂಚಿಕೊಂಡ ಡಿ.ಕೆ. ಶಿವಕುಮಾರ್ ಅವರು, " ನಿಕಟಪೂರ್ವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ‘ಕಾವೇರಿ’ ನಿವಾಸದಲ್ಲಿ ಭೇಟಿ ಮಾಡಿ ಸಮಾಲೋಚನೆ ನಡೆಸಲಾಯಿತು" ಎಂದು ತಿಳಿಸಿದ್ದಾರೆ.
ರಾಜ್ಯದಲ್ಲಿ ಮುಂಬರುವ ರಾಜಕೀಯ ಕಾರ್ಯತಂತ್ರಗಳು ಹಾಗೂ ಸರಕಾರದ ಯೋಜನೆಗಳ ಅನುಷ್ಠಾನದ ದೃಷ್ಟಿಯಿಂದ ಈ ಭೇಟಿ ತೀವ್ರ ಕುತೂಹಲ ಮೂಡಿಸಿದೆ.




