Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಮಧ್ಯರಾತ್ರಿ ಪೊಲೀಸರ ಫೈರಿಂಗ್: ರೌಡಿಶೀಟರ್ ಜಿಶಾನ್ ಕಾಲಿಗೆ ಗುಂಡು

 ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜಧಾನಿ ಬೆಂಗಳೂರಿನ ಸೋಮಸುಂಡ್ರಪಾಳ್ಯ ಪ್ರದೇಶದಲ್ಲಿ ಮಧ್ಯರಾತ್ರಿ ಪೊಲೀಸರ ಬಂದೂಕು ಸದ್ದು ಮಾಡಿದೆ. ಮಾರಕಾಸ್ತ್ರ ಹಿಡಿದು ಸಾರ್ವಜನಿಕರಲ್ಲಿ ಭೀತಿ ಹುಟ್ಟಿಸುತ್ತಿದ್ದ ರೌಡಿಶೀಟರ್
, ಬಂದ ಬಂಧಿಸಲು ಬಂದ ಪೊಲೀಸರ ಮೇಲೆಯೇ ದಾಳಿ ನಡೆಸಲು ಯತ್ನಿಸಿದಾಗ, ಆತ್ಮರಕ್ಷಣೆಗಾಗಿ ಪೊಲೀಸರು ಆತನ ಕಾಲಿಗೆ ಗುಂಡು ಹಾರಿಸಿ ಬಂಧಿಸಿರುವ ಘಟನೆ ನಡೆದಿದೆ.

ಘಟನೆಯ ವಿವರ: ಬಂಡೆಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಸೋಮಸುಂಡ್ರಪಾಳ್ಯದಲ್ಲಿ ತಲೆಮರೆಸಿಕೊಂಡಿದ್ದ ರೌಡಿಶೀಟರ್ ಜಿಶಾನ್, ದ್ವಿಚಕ್ರ ವಾಹನದಲ್ಲಿ ಮಾರಕಾಸ್ತ್ರ ಹಿಡಿದು ಸಾರ್ವಜನಿಕರಲ್ಲಿ ಭೀತಿ ಹುಟ್ಟಿಸುತ್ತಾ ಅನುಮಾನಾಸ್ಪದವಾಗಿ ಓಡಾಡುತ್ತಿದ್ದನು.

Advertisement

 ಈ ಬಗ್ಗೆ ಸ್ಥಳೀಯರಿಂದ ಖಚಿತ ಮಾಹಿತಿ ಲಭಿಸುತ್ತಿದ್ದಂತೆ, ಬಂಡೆಪಾಳ್ಯ ಪೊಲೀಸ್ ಠಾಣೆಯ ಪಿಎಸ್‌ಐ ಸಚಿನ್ ಹಾಗೂ ಸಿಬ್ಬಂದಿ ಸಂದೀಪ್ ಕಾಂಬ್ಳೆ ಸ್ಥಳಕ್ಕೆ ದೌಡಾಯಿಸಿದ್ದಾರೆ.

ಮಧ್ಯರಾತ್ರಿ ಸುಮಾರು 12.50ರ ವೇಳೆಗೆ ಆರೋಪಿ ಜಿಶಾನ್‌ನನ್ನು ವಶಕ್ಕೆ ಪಡೆಯಲು ಯತ್ನಿಸಿದಾಗ, ಆತ ತಪ್ಪಿಸಿಕೊಳ್ಳುವ ಭರದಲ್ಲಿ ತನ್ನ ಬಳಿಯಿದ್ದ ಮಾರಕಾಸ್ತ್ರದಿಂದ ಕಾನ್‌ಸ್ಟೇಬಲ್ ಸಂದೀಪ್ ಕಾಂಬ್ಳೆ ಅವರ ಮೇಲೆ ಹಲ್ಲೆ ನಡೆಸಿದ್ದಾನೆ.

ಆತ್ಮರಕ್ಷಣೆಗಾಗಿ ಪಿಎಸ್‌ಐ ಫೈರಿಂಗ್: ಕಾನ್‌ಸ್ಟೇಬಲ್ ಮೇಲೆ ದಾಳಿ ನಡೆಸಿದ ಬಳಿಕ ಆರೋಪಿ ಜಿಶಾನ್, ಪಿಎಸ್‌ಐ ಸಚಿನ್ ಅವರ ಮೇಲೆಯೂ ಮಾರಣಾಂತಿಕ ಹಲ್ಲೆಗೆ ಮುಂದಾಗಿದ್ದಾನೆ. ಈ ಹಂತದಲ್ಲಿ ಪರಿಸ್ಥಿತಿಯ ಗಂಭೀರತೆಯನ್ನು ಅರಿತು ಆತ್ಮರಕ್ಷಣೆಗಾಗಿ ಪಿಎಸ್‌ಐ ಸಚಿನ್ ಅವರು ಆರೋಪಿಯ ಕಾಲಿಗೆ ಗುಂಡು ಹಾರಿಸಿದ್ದಾರೆ. ಗುಂಡೇಟಿನಿಂದ ಕುಸಿದುಬಿದ್ದ ಆರೋಪಿಯನ್ನು ಪೊಲೀಸರು ಕೂಡಲೇ ವಶಕ್ಕೆ ಪಡೆದಿದ್ದಾರೆ.

ಘಟನೆಯಲ್ಲಿ ಗಾಯಗೊಂಡ ಕಾನ್‌ಸ್ಟೇಬಲ್ ಸಂದೀಪ್ ಕಾಂಬ್ಳೆ ಹಾಗೂ ಗುಂಡೇಟು ತಗುಲಿದ ರೌಡಿಶೀಟರ್ ಜಿಶಾನ್ ಇಬ್ಬರನ್ನೂ ಹೆಚ್ಚಿನ ಚಿಕಿತ್ಸೆಗಾಗಿ ಸಂಜಯ್ ಗಾಂಧಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಹಲವು ಪ್ರಕರಣಗಳಲ್ಲಿ ಭಾಗಿ: ಆರೋಪಿ ಜಿಶಾನ್ ಈ ಹಿಂದೆ ಮಡಿವಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಸುಹೇಲ್ ಕೊಲೆ ಪ್ರಕರಣದ ಪ್ರಮುಖ ಆರೋಪಿ, ರೌಡಿಶೀಟರ್ ಆದಿಲ್ ಅಕ್ಮಲ್‌ನ ಆಪ್ತ ಸಹಚರನಾಗಿದ್ದಾನೆ. ಈತನ ಮೇಲೆ ಹಲವು ಕ್ರಿಮಿನಲ್ ಪ್ರಕರಣಗಳಿದ್ದು, ಪೊಲೀಸರಿಗೆ ದೀರ್ಘಕಾಲದಿಂದ ಬೇಕಾಗಿದ್ದನು. ಮಧ್ಯರಾತ್ರಿ ಈತ ಯಾವ ದೊಡ್ಡ ಅಪರಾಧ ಕೃತ್ಯಕ್ಕೆ ಸಂಚು ರೂಪಿಸುತ್ತಿದ್ದ ಎಂಬ ಬಗ್ಗೆ ಬಂಡೆಪಾಳ್ಯ ಪೊಲೀಸರು ತನಿಖೆ ತೀವ್ರಗೊಳಿಸಿದ್ದಾರೆ.

 

Author
ಸಿ.ಹೆಂಜಾರಪ್ಪ
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೃತ್ಯ ಭಾರತೀಯ ಸಂಸ್ಕೃತಿಯ ಜೀವಂತ ಅಭಿವ್ಯಕ್ತಿ: ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿನೇಪಾಳ ಪ್ರವಾಹ: ನೆರವು ನಿರಾಕರಿಸಿದ ನೇಪಾಳ; ಭಾರತದಿಂದ ಬೃಹತ್ ಮಾನವೀಯ ಸಹಾಯ'ನಥಿಂಗ್ ನೈಸ್' ಅಭಿಯಾನಕ್ಕೆ ಚಾಲನೆ: ಸರ್ಕಾರವೇ ರಸ್ತೆ ಸ್ವಾಧೀನಪಡಿಸಿಕೊಳ್ಳಲಿ - ನಿಖಿಲ್ ಕುಮಾರಸ್ವಾಮಿ ಆಗ್ರಹಎಇಇ ನೇಮಕಾತಿ ಹಗರಣ: ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಹೆಚ್.ಡಿ. ಕುಮಾರಸ್ವಾಮಿ ಆಗ್ರಹ, ದಾಖಲೆ ಬಿಡುಗಡೆಮಧ್ಯರಾತ್ರಿ ಪೊಲೀಸರ ಫೈರಿಂಗ್: ರೌಡಿಶೀಟರ್ ಜಿಶಾನ್ ಕಾಲಿಗೆ ಗುಂಡುಮುಡಾ ಹಗರಣ: 50:50 ಅನುಪಾತದ 1,100ಕ್ಕೂ ಹೆಚ್ಚಿನ ಸೈಟುಗಳು ರದ್ದು –ಸಚಿವ ಯತೀಂದ್ರನೇಪಾಳದ ದಿಢೀರ್ ಪ್ರವಾಹ: ಬಲಿ ಸಂಖ್ಯೆ 538ಕ್ಕೆ ಏರಿಕೆ, 320ಕ್ಕೂ ಹೆಚ್ಚು ಭಾರತೀಯ ಪ್ರವಾಸಿಗರು ನಾಪತ್ತೆಭದ್ರತೆಗೆ ಮಹತ್ವದ ಹೆಜ್ಜೆ: ಪೋಲಿಸರಿಗೆ ಎನ್‌ಎಸ್‌ಜಿ ತರಬೇತಿರೈಲ್ವೇ ಚತುಷ್ಪಥ ಯೋಜನೆ: ಕರ್ನಾಟಕಕ್ಕೆ ಕೇಂದ್ರದ ಮಲತಾಯಿ ಧೋರಣೆ - ಸಚಿವ ಎಂ.ಬಿ. ಪಾಟೀಲ್ ಆಕ್ರೋಶಪೊಲೀಸರಿಗೆ ಹಲ್ಲೆಗೆ ಯತ್ನಿಸಿದ ರೌಡಿಶೀಟರ್; ಕಾಲಿಗೆ ಗುಂಡು