ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಚಿತ್ರದುರ್ಗ ಜಿಲ್ಲಾ ಯಾದವ ಗೊಲ್ಲರ ಸಂಘದ ಆಡಳಿತಾಧಿಕಾರಿಯಾಗಿ ಚಿತ್ರದುರ್ಗ ಉಪವಿಭಾಗಾಧಿಕಾರಿಗಳನ್ನು ಮುಂದುವರಿಸಿ ಸರ್ಕಾರ ಆದೇಶ ಹೊರಡಿಸಿದೆ.
ದಿನಾಂಕ: 27.03.2026 ರಿಂದ ಜಾರಿಗೆ ಬರುವಂತೆ ಮುಂದಿನ 6 ತಿಂಗಳ ಅವಧಿಗೆ ಆಡಳಿತಾಧಿಕಾರಿಗಳ ಸೇವೆಯನ್ನು ವಿಸ್ತರಿಸಲಾಗಿದೆ.

ಉಪವಿಭಾಗಾಧಿಕಾರಿ ಸಂಘದ ಆಡಳಿತಾಧಿಕಾರಿಯಾಗಿ ಕಾರ್ಯನಿರ್ವಹಿಸಲಿದ್ದು, ಸಂಘದ ಎಲ್ಲಾ ಪತ್ರ ವ್ಯವಹಾರಗಳು, ಸಭೆ-ಸಮಾರಂಭಗಳು ಹಾಗೂ ಬ್ಯಾಂಕ್ ಮತ್ತು ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ಚಿತ್ರದುರ್ಗ ನಗರದ ರಂಗಯ್ಯನಬಾಗಿಲು ಬಳಿ ಇರುವ ಸಂಘದ ಕಚೇರಿ ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.


