Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ವೇತನ ಪರಿಷ್ಕರಣೆಗೆ ಪಟ್ಟು: ಸೆಪ್ಟೆಂಬರ್ 20 ರಿಂದ ಸಾಮೂಹಿಕ ರಾಜೀನಾಮೆಗೆ 108 ಅಂಬುಲೆನ್ಸ್ ನೌಕರರ ಎಚ್ಚರಿಕೆ!

ಚಂದ್ರವಳ್ಳಿ ನ್ಯೂಸ್, ಬೆಂಗಳೂರು: 
ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಹಕ್ಕುಬಾಧ್ಯತೆಗಳನ್ನು ಈಡೇರಿಸುವಂತೆ ಆಗ್ರಹಿಸಿ ರಾಜ್ಯ ಸರ್ಕಾರದ ಆರೋಗ್ಯ ಕವಚ ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ 108 ಆಂಬುಲೆನ್ಸ್ ನೌಕರರು ಸರ್ಕಾರದ ವಿರುದ್ಧ ಮುಷ್ಕರದ ಬಿಗ್ ಅಲ್ಟಿಮೇಟಂ ನೀಡಿದ್ದಾರೆ. ಸೆಪ್ಟೆಂಬರ್ 20 ರ ಒಳಗಾಗಿ ಬೇಡಿಕೆಗಳನ್ನು ಈಡೇರಿಸದಿದ್ದರೆ ಸಾಮೂಹಿಕ ರಾಜೀನಾಮೆ ನೀಡಿ ಬೃಹತ್ ಹೋರಾಟಕ್ಕಿಳಿಯುವುದಾಗಿ ಎಚ್ಚರಿಸಿದ್ದಾರೆ.
ಈ ಕುರಿತು 'ಸುವರ್ಣ ಕರ್ನಾಟಕ ಆರೋಗ್ಯ ಕವಚ-108 ನೌಕರರ ಸಂಘ' ಹಾಗೂ 'ಕರ್ನಾಟಕ ರಾಜ್ಯ ಆರೋಗ್ಯ ಕವಚ ಆಂಬುಲೆನ್ಸ್ ನೌಕರರ ಸಂಘ'ದ ಪದಾಧಿಕಾರಿಗಳು ಆರೋಗ್ಯ ಸಚಿವರು ಹಾಗೂ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ಸೆಪ್ಟೆಂಬರ್ 4 ರಂದು ಅಧಿಕೃತ ಪತ್ರ ಬರೆದು 15 ದಿನಗಳ ಗಡುವು ನೀಡಿದ್ದಾರೆ. ಜಿವಿ ಕೆ (GVK) ಸಂಸ್ಥೆಯ ಅಧೀನದಲ್ಲಿ ರಾಜ್ಯಾದ್ಯಂತ ಸುಮಾರು 35,000 ಕಾರ್ಮಿಕರು ಸೇವೆಯಲ್ಲಿದ್ದಾರೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಆಂಬುಲೆನ್ಸ್ ಸಿಬ್ಬಂದಿಯ ಪ್ರಮುಖ ಬೇಡಿಕೆಗಳು:
ಏಕರೂಪ ವೇತನ ವ್ಯವಸ್ಥೆ: ಪ್ರಸ್ತುತ ಇರುವ ವಲಯವಾರು ವೇತನ ವಿಂಗಡಣೆಯನ್ನು ರದ್ದುಪಡಿಸಿ, ರಾಜ್ಯಾದ್ಯಂತ ಎಲ್ಲಾ ಸಿಬ್ಬಂದಿಗೆ ಏಕರೂಪದ ವೇತನ ಜಾರಿಗೊಳಿಸಬೇಕು.
ವೇತನ ಜೇಷ್ಠತೆ ಹಾಗೂ ಸಮಯಕ್ಕೆ ಸರಿಯಾಗಿ ಪಾವತಿ: ಸೇವಾ ಜೇಷ್ಠತೆ ಆಧರಿಸಿ ವೇತನ ನಿಗದಿಪಡಿಸಬೇಕು ಮತ್ತು ಕಾರ್ಮಿಕ ಕಾಯ್ದೆಯಂತೆ ಪ್ರತಿ ತಿಂಗಳ 7ನೇ ತಾರೀಖಿನ ಒಳಗಾಗಿ ಕಡ್ಡಾಯವಾಗಿ ವೇತನ ಪಾವತಿಸಬೇಕು.

Advertisement

₹50 ಲಕ್ಷ ಪರಿಹಾರ ಹಾಗೂ ಮೂಲಸೌಕರ್ಯ: ಕರ್ತವ್ಯದಲ್ಲಿದ್ದಾಗ ಅಪಘಾತಕ್ಕೀಡಾಗಿ ಮೃತಪಡುವ ಸಿಬ್ಬಂದಿಯ ಕುಟುಂಬಕ್ಕೆ ₹50 ಲಕ್ಷ ಪರಿಹಾರ ನೀಡಬೇಕು. ಜೊತೆಗೆ ಕೆಲಸದ ಸ್ಥಳಗಳಲ್ಲಿ ಶೌಚಾಲಯ, ವಿಶ್ರಾಂತಿ ಕೊಠಡಿ ಹಾಗೂ ಆಂಬುಲೆನ್ಸ್ ಸ್ವಚ್ಛಗೊಳಿಸಲು ನೀರಿನ ವ್ಯವಸ್ಥೆ ಕಲ್ಪಿಸಬೇಕು.
"ನಮ್ಮ ನ್ಯಾಯಯುತ ಬೇಡಿಕೆಗಳಿಗೆ ಸರ್ಕಾರ 15 ದಿನಗಳಲ್ಲಿ ಸ್ಪಂದಿಸದಿದ್ದರೆ ಸೆ.20 ರಿಂದ ಸಾಮೂಹಿಕ ರಾಜೀನಾಮೆ ಸಲ್ಲಿಸಿ ಸೇವೆ ಸ್ಥಗಿತಗೊಳಿಸುತ್ತೇವೆ. ಮುಂದೆ ಎದುರಾಗುವ ಯಾವುದೇ ಅನಾಹುತಕ್ಕೂ ಸರ್ಕಾರವೇ ನೇರ ಹೊಣೆ" ಎಂದು ಸಂಘಟನೆಯ ಪದಾಧಿಕಾರಿಗಳು ಎಚ್ಚರಿಸಿದ್ದಾರೆ.

ಸಚಿವ ಯು.ಟಿ. ಖಾದರ್ ಕಟ್ಟುನಿಟ್ಟಿನ ಎಚ್ಚರಿಕೆ:
108 ಆಂಬುಲೆನ್ಸ್ ನೌಕರರ ಮುಷ್ಕರದ ಬೆದರಿಕೆಗೆ ಪ್ರತಿಕ್ರಿಯಿಸಿರುವ ಸಚಿವ ಯು.ಟಿ. ಖಾದರ್, "ಆಂಬುಲೆನ್ಸ್ ಸೇವೆ ಸ್ಥಗಿತಗೊಂಡು ರೋಗಿಗಳಿಗೆ ತೊಂದರೆಯಾದರೆ ಜವಾಬ್ದಾರರ ವಿರುದ್ಧ ಮುಲಾಜಿಲ್ಲದೆ ಕಠಿಣ ಕ್ರಮ ಜರುಗಿಸಲಾಗುವುದು. ಚಾಲಕರಿಗೆ ಸಮಸ್ಯೆಗಳಿದ್ದಲ್ಲಿ ಸೇವಾ ಸಂಸ್ಥೆಯೊಂದಿಗೆ ಮಾತುಕತೆ ನಡೆಸಬೇಕು. ಚಾಲಕರು ಮತ್ತು ಸಿಬ್ಬಂದಿಯನ್ನು ಸರಿಯಾಗಿ ನಿರ್ವಹಿಸಲು ಸಾಧ್ಯವಾಗದಿದ್ದರೆ ಸದರಿ ಕಂಪನಿಯೇ ಒಪ್ಪಂದ ಮುರಿದುಕೊಂಡು ಹೊರನಡೆಯಲಿ" ಎಂದು ಖಡಕ್ ಎಚ್ಚರಿಕೆ ನೀಡಿದ್ದಾರೆ.

Author
ಸಿ.ಹೆಂಜಾರಪ್ಪ
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಸಾಪ ಮಾಜಿ ಜಿಲ್ಲಾಧ್ಯಕ್ಷ, ಶಿಕ್ಷಣತಜ್ಞ ಡಾ. ಕೆ.ಎಂ. ವೀರೇಶ್ ಹೃದಯಾಘಾತದಿಂದ ನಿಧನದುರ್ಗಕ್ಕೆ ಹರಿದು ಬಂದ ಭದ್ರೆ- ಸೆ.24ರಂದು ಮುಖ್ಯಮಂತ್ರಿಗಳಿಂದ ಗಂಗಾಪೂಜೆ,  ಬೃಹತ್ ಸಾರ್ವಜನಿಕ ಸಮಾರಂಭಆರ್.ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ 22ನೇ ಘಟಿಕೋತ್ಸವ ಮತ್ತು ಪದವಿ ಪ್ರದಾನ ಕಾರ್ಯಕ್ರಮನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಬೈಕ್ ಸವಾರ ಸಾವುಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಸಭೆ ಹೋರಾಟಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಾತಿನಿಧ್ಯ ಕಡಿಮೆ- ಚಿಕ್ಕಪ್ಪನಹಳ್ಳಿ ಷಣ್ಮುಖಕುಂಚಿಟಿಗ ನೌಕರರ ಸಂಘಕ್ಕೆ ಸದಸ್ಯರಾಗಿ: ಎಸ್.ಕೆ ಲಕ್ಷ್ಮಣ್ಚಳವಳಿ ನೆನಪಾಗಿ ಉಳಿದ ‘ತೆಂಕ-ಬಡಗ’ಅಂತಾರಾಷ್ಟ್ರೀಯ ಶಾಂತಿ ದಿನ – ಮನದ ದ್ವೇಷ ಕರಗಿದಾಗಲೇ ಜಗದ ಶಾಂತಿ ಅರಳುವುದು!ಗಣಪತಿ ಮೆರವಣಿಗೆ ವೇಳೆ ಗಲಾಟೆ 7 ಯುವಕರ ವಿರುದ್ಧ ಸುಮೋಟೋ ಪ್ರಕರಣ ದಾಖಲು