Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಶಿಕ್ಷಣ ಸುಧಾರಣೆಗೆ ಸಂಪುಟ ಉಪಸಮಿತಿ ಅಸ್ತ್ರ: ಕೆಪಿಎಸ್‌ಸಿ ಅಕ್ರಮ ತಡೆ, ಸಾರ್ವಜನಿಕ ಸಲಹೆಗೆ ವೆಬ್‌ಸೈಟ್ ಆರಂಭ

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯದ ವಿದ್ಯಾರ್ಥಿಗಳು ಎದುರಿಸುತ್ತಿರುವ ವಿವಿಧ ಸಮಸ್ಯೆಗಳಿಗೆ ಶೀಘ್ರ ಪರಿಹಾರ ಕಂಡುಕೊಳ್ಳಲು ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಮೂಲಭೂತ ಬದಲಾವಣೆ ತರಲು ರಚಿಸಲಾಗಿರುವ 'ಸಂಪುಟ ಉಪಸಮಿತಿ'ಯ ಮೊದಲ ಸಭೆ ಗುರುವಾರ ವಿಧಾನಸೌಧದಲ್ಲಿ ನಡೆಯಿತು.

ಸಚಿವ ಯು.ಟಿ. ಖಾದರ್ ಅಧ್ಯಕ್ಷತೆಯಲ್ಲಿ ನಡೆದ ಈ ಸಭೆಯಲ್ಲಿ, ಶಿಕ್ಷಣ ವ್ಯವಸ್ಥೆಯ ಸಮಗ್ರ ಸುಧಾರಣೆ ಹಾಗೂ ಕೆಪಿಎಸ್‌ಸಿ ನೇಮಕಾತಿ ಅಕ್ರಮಗಳಿಗೆ ಶಾಶ್ವತ ಇತಿಶ್ರೀ ಹಾಡುವ ಕುರಿತು ಸುದೀರ್ಘ ಚರ್ಚೆ ನಡೆಸಲಾಯಿತು. 

Advertisement

೬ ಪ್ರಮುಖ ವಿಚಾರಗಳ ಕುರಿತು ಗಹನ ಚರ್ಚೆ:
ಸಂಪುಟ ಉಪಸಮಿತಿಯ ಮೊದಲ ಸಭೆಯಲ್ಲಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಆರು ಪ್ರಮುಖ ವಿಷಯಗಳ ಮೇಲೆ ಬೆಳಕು ಚೆಲ್ಲಲಾಯಿತು:
 ಪರೀಕ್ಷೆಗಳು ಮತ್ತು ನೇಮಕಾತಿ ಪ್ರಕ್ರಿಯೆಗಳ ಪಾರದರ್ಶಕತೆ ಹಾಗೂ ಸಮಗ್ರತೆ.ಶಿಕ್ಷಣದ ವೆಚ್ಚ, ಶುಲ್ಕ ನಿಯಂತ್ರಣ ಮತ್ತು ಖಾಸಗಿ ಕೋಚಿಂಗ್ ಸೆಂಟರ್‌ಗಳ ಹದ್ದುಬಸ್ತು.

ಸರ್ಕಾರಿ ಹಾಗೂ ಸಾರ್ವಜನಿಕ ಶಿಕ್ಷಣ ಸಂಸ್ಥೆಗಳ ಮೂಲಸೌಕರ್ಯ ಮತ್ತು ಗುಣಮಟ್ಟ ವೃದ್ಧಿ.ಆಧುನಿಕ ಪಠ್ಯಕ್ರಮ, ಕೌಶಲ್ಯಾಭಿವೃದ್ಧಿ ಹಾಗೂ ಸೂಕ್ತ ಉದ್ಯೋಗ ಅವಕಾಶಗಳ ಸೃಷ್ಟಿ.

ವಿದ್ಯಾರ್ಥಿಗಳ ಮಾನಸಿಕ ಆರೋಗ್ಯ ಹಾಗೂ ಕ್ಷೇಮಾಭಿವೃದ್ಧಿ ಯೋಜನೆಗಳು.ಪ್ರವೇಶಾವಕಾಶಗಳಲ್ಲಿ ಸಮಾನತೆ ಮತ್ತು ಪಾರದರ್ಶಕತೆ ಕಾಯ್ದುಕೊಳ್ಳುವುದು.ಸಾರ್ವಜನಿಕ ಸಲಹೆಗೆ ಶೀಘ್ರವೇ ವೆಬ್‌ಸೈಟ್‌:ಶಿಕ್ಷಣ ಸುಧಾರಣೆ ಪ್ರಕ್ರಿಯೆಯಲ್ಲಿ ಸಾರ್ವಜನಿಕರ ಭಾಗವಹಿಸುವಿಕೆಯನ್ನು ಉತ್ತೇಜಿಸಲು ವಿದ್ಯಾರ್ಥಿಗಳು, ಪೋಷಕರು ಹಾಗೂ ಶಿಕ್ಷಣ ತಜ್ಞರಿಂದ ನೇರ ಸಲಹೆ ಸ್ವೀಕರಿಸಲು ಪ್ರತ್ಯೇಕ ವೆಬ್‌ಸೈಟ್ ಆರಂಭಿಸಲು ಸಭೆಯಲ್ಲಿ ನಿರ್ಧರಿಸಲಾಯಿತು. ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳ ಆಕಾಂಕ್ಷೆಗಳಿಗೆ ತಕ್ಕಂತೆ ನೀತಿಗಳನ್ನು ರೂಪಿಸುವುದು ಈ ಕ್ರಮದ ಮುಖ್ಯ ಉದ್ದೇಶವಾಗಿದೆ.

ಕೆಪಿಎಸ್‌ಸಿ ನೇಮಕಾತಿಗೆ ಶಸ್ತ್ರಚಿಕಿ:ಕರ್ನಾಟಕ ಲೋಕಸೇವಾ ಆಯೋಗದ (KPSC) ಪರೀಕ್ಷೆಗಳು ಮತ್ತು ನೇಮಕಾತಿಗಳಲ್ಲಿ ಮತ್ತೆ ಮತ್ತೆ ಮರುಕಳಿಸುತ್ತಿರುವ ಅಕ್ರಮಗಳಿಗೆ ಕೊನೆಹಾಡಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಸಭೆಯಲ್ಲಿ ತೀರ್ಮಾನಿಸಲಾಯಿತು.

ಕೆಪಿಎಸ್‌ಸಿಯಲ್ಲಿ ಯುಪಿಎಸ್‌ಸಿ ಮಾದರಿಯ ಪಾರದರ್ಶಕ ವ್ಯವಸ್ಥೆ ಅಳವಡಿಕೆಗೆ ಎದುರಾಗುತ್ತಿರುವ ತೊಡಕುಗಳ ಕುರಿತು ವಿಸ್ತೃತವಾಗಿ ಚರ್ಚಿಸಿದ ಸಚಿವರು, ನೇಮಕಾತಿ ಅಕ್ರಮ ತಡೆಗೆ ಶಾಶ್ವತ ಕಾಯ್ದೆ ಹಾಗೂ ಸುಧಾರಣೆಗಳನ್ನು ರೂಪಿಸಲು ಒಲವು ವ್ಯಕ್ತಪಡಿಸಿದರು.

'ಮೊದಲು ತಜ್ಞರ ಅಭಿಪ್ರಾಯ ಪಡೆದು ಮುನ್ನಡೆಯೋಣ'ಸಭೆಯಲ್ಲಿ ಮಾತನಾಡಿದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ, "ಶಿಕ್ಷಣ ಕ್ಷೇತ್ರದಲ್ಲಿ ನೈಜ ಬದಲಾವಣೆ ತರಲು ಮೊದಲು ತಜ್ಞರ ಸಭೆ ಕರೆದು ಸಲಹೆ ಪಡೆಯಬೇಕು. ಸಾರ್ವಜನಿಕ ಮಟ್ಟದಲ್ಲಿಯೂ ಈ ಕುರಿತು ವ್ಯಾಪಕ ಪ್ರಚಾರ ನಡೆಸಿ ಅಭಿಪ್ರಾಯ ಕಲೆಹಾಕಿದ ನಂತರ ಅಜೆಂಡಾದ ಪ್ರತಿ ವಿಷಯದ ಮೇಲೆ ಕಾರ್ಯಪ್ರವೃತ್ತರಾಗುವುದು ಸೂಕ್ತ" ಎಂದು ಸಲಹೆ ನೀಡಿದರು.

ಸಭೆಯಲ್ಲಿ ಸಚಿವರಾದ ಮಧು ಬಂಗಾರಪ್ಪ, ಬಸವರಾಜ ರಾಯರೆಡ್ಡಿ, ಪ್ರಿಯಾಂಕ್ ಖರ್ಗೆ, ಶರಣಪ್ರಕಾಶ್ ಪಾಟೀಲ್ ಹಾಗೂ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಎಲ್.ಕೆ. ಅತೀಕ್, ಹಿರಿಯ ಐಎಎಸ್ ಅಧಿಕಾರಿಗಳಾದ ವಿ. ರಶ್ಮಿ ಮಹೇಶ್, ತುಳಸಿ ಮದ್ದಿನೇನಿ ಸೇರಿದಂತೆ ವಿವಿಧ ಇಲಾಖೆಗಳ ಉನ್ನತಾಧಿಕಾರಿಗಳು ಉಪಸ್ಥಿತರಿದ್ದರು.

 

 

Author
ಸಿ.ಹೆಂಜಾರಪ್ಪ
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಸಾಪ ಮಾಜಿ ಜಿಲ್ಲಾಧ್ಯಕ್ಷ, ಶಿಕ್ಷಣತಜ್ಞ ಡಾ. ಕೆ.ಎಂ. ವೀರೇಶ್ ಹೃದಯಾಘಾತದಿಂದ ನಿಧನದುರ್ಗಕ್ಕೆ ಹರಿದು ಬಂದ ಭದ್ರೆ- ಸೆ.24ರಂದು ಮುಖ್ಯಮಂತ್ರಿಗಳಿಂದ ಗಂಗಾಪೂಜೆ,  ಬೃಹತ್ ಸಾರ್ವಜನಿಕ ಸಮಾರಂಭಆರ್.ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ 22ನೇ ಘಟಿಕೋತ್ಸವ ಮತ್ತು ಪದವಿ ಪ್ರದಾನ ಕಾರ್ಯಕ್ರಮನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಬೈಕ್ ಸವಾರ ಸಾವುಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಸಭೆ ಹೋರಾಟಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಾತಿನಿಧ್ಯ ಕಡಿಮೆ- ಚಿಕ್ಕಪ್ಪನಹಳ್ಳಿ ಷಣ್ಮುಖಕುಂಚಿಟಿಗ ನೌಕರರ ಸಂಘಕ್ಕೆ ಸದಸ್ಯರಾಗಿ: ಎಸ್.ಕೆ ಲಕ್ಷ್ಮಣ್ಚಳವಳಿ ನೆನಪಾಗಿ ಉಳಿದ ‘ತೆಂಕ-ಬಡಗ’ಅಂತಾರಾಷ್ಟ್ರೀಯ ಶಾಂತಿ ದಿನ – ಮನದ ದ್ವೇಷ ಕರಗಿದಾಗಲೇ ಜಗದ ಶಾಂತಿ ಅರಳುವುದು!ಗಣಪತಿ ಮೆರವಣಿಗೆ ವೇಳೆ ಗಲಾಟೆ 7 ಯುವಕರ ವಿರುದ್ಧ ಸುಮೋಟೋ ಪ್ರಕರಣ ದಾಖಲು