Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಸೆಪ್ಟೆಂಬರ್ 15 ರಂದು ‘ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ’

 ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕ ಸರ್ಕಾರದ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಬೆಂಗಳೂರಿನ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‍ನಲ್ಲಿ 2026 ನೇ ಸೆಪ್ಟೆಂಬರ್ 15 ರಂದು ಬೆಳಿಗ್ಗೆ 10.00 ಗಂಟೆಗೆ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಕಾರ್ಯಕ್ರಮವನ್ನು ಅತ್ಯಂತ ವಿಜೃಂಭಣೆಯಿಂದ ಆಯೋಜಿಸಲಾಗಿದೆ.

ಈ ಮಹತ್ವದ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಉದ್ಘಾಟಿಸಲಿದ್ದು ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ, ಕರ್ನಾಟಕ ವಿಧಾನ ಪರಿಷತ್ತಿನ ಸಭಾಪತಿ ಸಲೀಂ ಅಹ್ಮದ್ ಮತ್ತು ವಿಧಾನಸಭೆಯ ಸಭಾಧ್ಯಕ್ಷ ಜಿ.ಎಸ್. ಪಾಟೀಲ್ ಅವರ ಘನ ಉಪಸ್ಥಿತಿಯಲ್ಲಿ ಆಹಾರ ಹಾಗೂ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ರಿಜ್ವಾನ್ ಅರ್ಷದ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ ಮತ್ತು ಮಾನ್ಯ ಸಮಾಜ ಕಲ್ಯಾಣ ಸಚಿವ ಕೆ.ಹೆಚ್. ಮುನಿಯಪ್ಪ ಅವರು ಉಪಸ್ಥಿತರಿರುವರು.

Advertisement

ಈ ಕಾರ್ಯಕ್ರಮದಲ್ಲಿ ಸಚಿವ ಸಂಪುಟದ ಎಲ್ಲಾ, ಸಚಿವರು, ಶಾಸಕರು, ರಾಜ್ಯದ ಎಲ್ಲಾ ಸಂಸದರು, ವಿಧಾನಪರಿಷತ್ ಸದಸ್ಯರು, ಹಾಗೂ ಎಲ್ಲಾ ಆಯೋಗ, ನಿಗಮ, ಮಂಡಳಿಗಳ ಅಧ್ಯಕ್ಷರು ಮತ್ತು ಸದಸ್ಯರು, ವಿಧಾನಸಭೆಯ ಮತ್ತು ವಿಧಾನಪರಿಷತ್ತಿನ ವಿರೋಧ ಪಕ್ಷದ ನಾಯಕರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಅವರು ಗೌರವ ಅತಿಥಿಗಳಾಗಿ ಭಾಗವಹಿಸಲಿದ್ದು, ಸಮಾಜ ಕಲ್ಯಾಣ ಇಲಾಖೆಯ ಕಾರ್ಯದರ್ಶಿ ಮೋಹನ್ ರಾಜ್ ಕೆ.ಪಿ., ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಪಿ. ಹರಿಶೇಖರನ್ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಆಯುಕ್ತ ಡಾ. ರಾಕೇಶ್ ಕುಮಾರ್ ಅವರು ಉಪಸ್ಥಿತರಿರುವರು ಎಂದು ಸಮಾಜ ಕಲ್ಯಾಣ ಇಲಾಖೆಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

 

 

 

 

 

Author
ಸಿ.ಹೆಂಜಾರಪ್ಪ
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಗಣೇಶ ಮಂಡಳಿಗಳಿಗೆ ಆರ್ಥಿಕ ನೆರವು ಮತ್ತು ಪಕ್ಷ ಸಂಘಟನೆಯ ಸಂಭ್ರಮ "ಅಮೆರಿಕ ಅಧ್ಯಕ್ಷ ಡೊನಾಲ್ಡ್‌ಟ್ರಂಪ್‌ಕೂಡ ನಮ್ಮ ಗ್ಯಾರಂಟಿ ಕಾಪಿ ಮಾಡುತ್ತಿದ್ದಾರೆ" - ಸಿಎಂ ಡಿ.ಕೆ. ಶಿವಕುಮಾರ್‌ಶಾರ್ಟ್ ಸರ್ಕ್ಯೂಟ್‌ನಿಂದ ಭೀಕರ ಅಗ್ನಿಅವಘಡ; ಒಂದೇ ಕುಟುಂಬದ ನಾಲ್ವರು ಸಜೀವ ದಹನಚಿಕನ್ ಬಿರಿಯಾನಿ ತಿನ್ನುತ್ತಿರುವ ಗಣೇಶನ ಬ್ಯಾನರ್ ಅಳವಡಿಕೆ ವಿವಾದ; ಅಂಗಡಿ ಮಾಲೀಕನ ಬಂಧನಗಣೇಶೋತ್ಸವ ವಿವಾದ ತೀವ್ರ; ಪೊಲೀಸ್ ಠಾಣೆ ಬಳಿಯೇ ಹಿಂದೂ ಮಹಾಗಣಪತಿ ಪ್ರತಿಷ್ಠಾಪನೆ'ವಂದೇ ಮಾತರಂ' ಮೊದಲ ಎರಡು ಚರಣ ಕಡ್ಡಾಯ ಆದೇಶ ಪ್ರಶ್ನಿಸಿ ಹೈಕೋರ್ಟ್‌ನಲ್ಲಿ ಪಿಐಎಲ್ ಸಲ್ಲಿಕೆಯುವಶಕ್ತಿಯಲ್ಲಿ ಭಾರತೀಯತೆ ಮತ್ತು ಆಧ್ಯಾತ್ಮಿಕ ಶಕ್ತಿ ಹೆಚ್ಚಿಸಿದ ಮಹಾನ್ ಚೇತನ ತಿಲಕ್ಬದುಕಿನ ದಿಕ್ಕನ್ನೇ ಬದಲಿಸಿದ ಆ ಒಂದು ಸೋಲು…ರಾಜ್ಯ ಮಟ್ಟದ ಪರಿಸರ ಸತ್ಯಾಗ್ರಹ: ಚಿತ್ರದುರ್ಗದಿಂದ 100ಕ್ಕೂ ಹೆಚ್ಚು ಪರಿಸರ ಆಸಕ್ತರು ಭಾಗಿಕುಂಚಿಟಿಗ ಅಧಿಕಾರಿಗಳ ಮತ್ತು ನೌಕರರ ಸಂಘದ 24ನೇ ವಾರ್ಷಿಕ ಸರ್ವ ಸದಸ್ಯರ ಸಭೆ