Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಮಾಜದ ಋಣ ತೀರಿಸುವುದು ಪ್ರತಿಯೊಬ್ಬರ ಆದ್ಯ ಕರ್ತವ್ಯವಾಗಬೇಕು-ಭೋವಿಶ್ರೀ

ಸಮಾಜದ ಋಣ ತೀರಿಸುವುದು ಪ್ರತಿಯೊಬ್ಬರ ಆದ್ಯ ಕರ್ತವ್ಯವಾಗಬೇಕು-ಭೋವಿಶ್ರೀ

Advertisement

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಸಮಾಜದ ಋಣ ತೀರಿಸುವುದು ಪ್ರತಿಯೊಬ್ಬರ ಆದ್ಯ ಕರ್ತವ್ಯವಾಗಬೇಕು. ಸಂಘಟನೆಯ ಜವಾಬ್ದಾರಿ ಸಿಕ್ಕಾಗ ಅದನ್ನು ಸ್ವಾರ್ಥಕ್ಕಾಗಿ ಬಳಸಿಕೊಳ್ಳದೆ, ಕಾಯಾ ವಾಚಾ ಮನಸಾ ಸೇವೆಯಲ್ಲಿ ತೊಡಗಿಸಿಕೊಳ್ಳುವುದು ನೈಜ ನಾಯಕತ್ವದ ಲಕ್ಷಣ ಎಂದು ಭೋವಿ ಗುರುಪೀಠದ ಜಗದ್ಗುರು ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ ಹೇಳಿದರು.

ಭೋವಿಗುರುಪೀಠದಲ್ಲಿ ಜಿಲ್ಲಾ ಭೋವಿ ಸಂಘದಿಂದ ಹಮ್ಮಿಕೊಂಡ ಅಂಬೇಡ್ಕರ್ ಜಯಂತ್ಯೋತ್ಸವ ಹಾಗೂ ನೂತನ ಪದಾಧಿಕಾರಿಗಳ ಅಭಿನಂದನ ಸಮಾರಂಭದಲ್ಲಿ ಸಾನ್ನಿಧ್ಯವಹಿಸಿ ಮಾತನಾಡಿದ ಪೂಜ್ಯರು ಸಂಘಟನೆಯನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ದೂರದೃಷ್ಟಿಯ ಯೋಜನೆಗಳನ್ನು ಹಮ್ಮಿಕೊಳ್ಳಲಾಗಿದೆ. ಭವಿಷ್ಯದಲ್ಲಿ ಸಮಾಜದ ಎಲ್ಲ ಸ್ತರದ ಜನರನ್ನು ಒಳಗೊಳ್ಳುವ ಉದ್ದೇಶದಿಂದ ಮಹಿಳಾ ಘಟಕ, ಯುವ ಘಟಕ ಮತ್ತು ವಿದ್ಯಾರ್ಥಿ ಘಟಕಗಳನ್ನು ಸೃಜಿಸಲು ನಿರ್ಧರಿಸಲಾಗಿದೆ.

ಈ ಘಟಕಗಳ ರಚನೆ ಮತ್ತು ಜವಾಬ್ದಾರಿಗಳ ಕುರಿತು ಸಮಾಜದ ಕಾರ್ಯಕರ್ತರಿಗೆ ಮಾರ್ಗದರ್ಶನ ನೀಡಲು ವಿಶೇಷ ಕಾರ್ಯಗಾರಗಳನ್ನು ಹಮ್ಮಿಕೊಳ್ಳುವ ಮೂಲಕ ಸಂಘಟನೆಗೆ ಹೊಸ ಆಯಾಮ ನೀಡಲಾಗುವುದು. ಯಾವುದೇ ಸಂಘಟನೆಯ ಯಶಸ್ಸು ಅಲ್ಲಿನ ಪಾರದರ್ಶಕತೆಯ ಮೇಲೆ ನಿಂತಿರುತ್ತದೆ. ಪದಾಧಿಕಾರಿಗಳು ಹಣಕಾಸಿನ ವ್ಯವಹಾರಗಳಲ್ಲಿ ಅತ್ಯಂತ ಶಿಸ್ತು ಮತ್ತು ಪಾರದರ್ಶಕತೆಯನ್ನು ಕಾಪಾಡಿಕೊಳ್ಳುವುದು ಅನಿವಾರ್ಯ. ಸಂಘಟನೆಯೇ ಪ್ರಥಮ ಆದ್ಯತೆ. ಎಂಬ ಮಂತ್ರದೊಂದಿಗೆ ಕೆಲಸ ಮಾಡಿದಾಗ ಮಾತ್ರ ಸಾರ್ವಜನಿಕ ನಂಬಿಕೆ ಗಳಿಸಲು ಸಾಧ್ಯ. ಅಧಿಕಾರ ಎನ್ನುವುದು ಶಾಶ್ವತವಲ್ಲ. ಆದರೆ ಅಧಿಕಾರದಲ್ಲಿದ್ದಾಗ ಮಾಡುವ ಕೆಲಸಗಳು ಶಾಶ್ವತವಾಗಿರಬೇಕು. ನಾಯಕತ್ವದ ಅವಕಾಶ ಸಿಕ್ಕಾಗ ಅದನ್ನು ಸುವರ್ಣಾಕ್ಷರಗಳಲ್ಲಿ ಬರೆದಿಡುವಂತಹ ಮಾದರಿ ಸೇವೆಯನ್ನಾಗಿ ಪರಿವರ್ತಿಸಬೇಕು. ಪದಾಧಿಕಾರಿಗಳು ಪರಸ್ಪರ ಟೀಕೆ-ಟಿಪ್ಪಣಿಗಳಿಗೆ ಒಳಗಾಗದೆ ಸ್ಥಿತಪ್ರಜ್ಞತೆಯನ್ನು ಕಾಯ್ದುಕೊಂಡು, ಒಗ್ಗಟ್ಟಿನಿಂದ ಶ್ರಮಿಸಬೇಕೆಂದು ಹೇಳಿದರು.

ಸಭೆಯಲ್ಲಿ ಜಿಲ್ಲಾ ಭೋವಿ ಸಂಘದ ನೂತನ ಅಧ್ಯಕ್ಷ ಸೂರಗೊಂಡನಹಳ್ಳಿ ಕೃಷ್ಣಮೂರ್ತಿ.ಟಿ, ಗೌರವಾಧ್ಯಕ್ಷ ಟಿ.ತಿಪ್ಪೇಸ್ವಾಮಿ, ಡಿ.ತಿಮ್ಮಣ್ಣ, ಕಾರ್ಯಧ್ಯಕ್ಷ ಡಿ.ಸಿ.ಮೋಹನ, ಉಪಾಧ್ಯಕ್ಷರಾದ ಲಕ್ಷಣ ಹೆಚ್, ಅನ್ನೆಹಾಳ ತಿಪ್ಪೇಸ್ವಾಮಿ, ಪ್ರಧಾನ ಕಾರ್ಯದರ್ಶಿ ಮಂಜುನಾಥ ಈ, ಸಹಕಾರ್ಯದರ್ಶಿ ಪಿ.ದೇವರಾಜ, ಖಂಜಾಚಿ ವಿ.ಹನುಮಂತಪ್ಪ, ಸಂಚಾಲಕ ರಾಮಚಂದ್ರಪ್ಪ, ಸಂಘಟನಾ ಕಾರ್ಯದರ್ಶಿ ಆಂಜನೇಯ ಹೆಚ್, ನಿರ್ದೇಶಕರುಗಳಾದ ಟಿ.ಚಂದ್ರಶೇಖರ್, ಹೆಚ್.ನಟೇಶ್, ನಿರಂಜನ.ಆರ್, ವೆಂಕಟೇಶ ಎಲ್.ಬಿ, ನಾಗರಾಜ.ಹೆಚ್, ಅಣ್ಣಪ್ಪ ಸಿ.ಜೆ, ಪಿ.ಅಂಜಿನಯ್ಯ, ಆರ್.ಈರಣ್ಣ, ಎಮ್.ರಾಮು, ಹೆಚ್.ಭೀಮರಾಜು, ಭೋವಿಗುರುಪೀಠದ ಸಿಇಒ ಗೋವಿಂದಪ್ಪ ಹಾಗೂ ಇನ್ನಿತರರು ಉಪಸ್ಥಿತಿಯಿದ್ದರು.

 news_1776469179_1_867.webp

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ