ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಚಿತ್ರದುರ್ಗ ನಗರದಲ್ಲಿ ನಡೆದ ಈದ್ ಮಿಲಾದ್ ಕಾರ್ಯಕ್ರಮದಲ್ಲಿ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸಚಿವರು ಹಾಗೂ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಟಿ. ರಘುಮೂರ್ತಿ ಅವರು ಭಾಗವಹಿಸಿ, ಮುಸ್ಲಿಂ ಸಮುದಾಯದ ಬಂಧುಗಳಿಗೆ ಹಬ್ಬದ ಶುಭಾಶಯಗಳನ್ನು ಕೋರಿದರು.
ಧರ್ಮ, ಜಾತಿ ಹಾಗೂ ಭೇದಭಾವಗಳನ್ನು ಮೀರಿದ ಸಹಬಾಳ್ವೆ ಮತ್ತು ಸಾಮಾಜಿಕ ಸಾಮರಸ್ಯವೇ ನಮ್ಮ ನಾಡಿನ ಶಕ್ತಿ. ಎಲ್ಲರೂ ಒಗ್ಗಟ್ಟಿನಿಂದ ಬದುಕಿ, ಶಾಂತಿ ಮತ್ತು ಸೌಹಾರ್ದತೆಯ ಸಂದೇಶವನ್ನು ಸಮಾಜದಲ್ಲಿ ಮತ್ತಷ್ಟು ಬಲಪಡಿಸೋಣ ಎಂದು ಸಚಿವರು ಕರೆ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ತಾಜಪೀರ್, ಧಾರ್ಮಿಕ ಮುಖಂಡರು, ಜನಪ್ರತಿನಿಧಿಗಳು, ಸ್ಥಳೀಯ ಮುಖಂಡರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.



