ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ ಇವರುಗಳ ಸಂಯುಕ್ತಾಶ್ರಯದಲ್ಲಿ ಶಿಕ್ಷಕರ ದಿನಾಚರಣೆ-2026 ಡಾ.ಸರ್ವೆಪಲ್ಲಿ ರಾಧಾಕೃಷ್ಣನ್‍ರವರ ಜನ್ಮದಿನೋತ್ಸವ ಹಾಗೂ ಜಿಲ್ಲಾಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪ್ರಧಾನ ಸಮಾರಂಭವನ್ನು ಚಿತ್ರದುರ್ಗ ನಗರದ ತರಾಸು ರಂಗಮಂದಿರದಲ್ಲಿ ಬೆಳಿಗ್ಗೆ 9.30ಕ್ಕೆ ಆಯೋಜಿಸಲಾಗಿದೆ.
ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಟಿ.ರಘುಮೂರ್ತಿ ಉದ್ಘಾಟನೆ ನೆರವೇರಿಸುವರು. ಹೊಸದುರ್ಗ ಶಾಸಕರು ಹಾಗೂ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಅಧ್ಯಕ್ಷ ಬಿ.ಜಿ.ಗೋವಿಂದಪ್ಪ, ಸಂಸದ ಗೋವಿಂದ ಎಂ.ಕಾರಜೋಳ ಘನ ಉಪಸ್ಥಿತಿ ವಹಿಸುವರು. ಚಿತ್ರದುರ್ಗ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಅಧ್ಯಕ್ಷತೆ ವಹಿಸುವರು.
ಗೌರವಾನ್ವಿತ ಅತಿಥಿಗಳಾಗಿ ಕರ್ನಾಟಕ ದ್ರಾಕ್ಷಾರಸ ಮಂಡಳಿ ಅಧ್ಯಕ್ಷ ಡಾ.ಬಿ.ಯೋಗೇಶ್ ಬಾಬು, ಆದಿಜಾಂಬವ ಅಭಿವೃದ್ಧಿ ನಿಗಮ ಅಧ್ಯಕ್ಷ ಜಿ.ಎಸ್.ಮಂಜುನಾಥ್, ಕರ್ನಾಟಕ ಸಫಾಯಿ ಕರ್ಮಚಾರಿ ಆಯೋಗ ಅಧ್ಯಕ್ಷ ಪಿ.ರಘು, ಬಯಲುಸೀಮೆ ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ಹೆಚ್.ಮಂಜಪ್ಪ, ಮೊಳಕಾಲ್ಮುರು ಶಾಸಕ ಎನ್.ವೈ.ಗೋಪಾಲಕೃಷ್ಣ, ಹೊಳಲ್ಕೆರೆ ಶಾಸಕ ಡಾ.ಎಂ.ಚಂದ್ರಪ್ಪ, ವಿಧಾನ ಪರಿಷತ್ ಶಾಸಕರಾದ ಚಿದಾನಂದ ಎಂ.ಗೌಡ, ಕೆ.ಎಸ್.ನವೀನ್, ಡಿ.ಟಿ.ಶ್ರೀನಿವಾಸ್, ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಎಂ.ಕೆ.ತಾಜ್‍ಪೀರ್, ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷ ಅರ್.ಶಿವಣ್ಣ ಭಾಗವಹಿಸುವರು. ವಿಶೇಷ ಆಹ್ವಾನಿತರಾಗಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಅಮ್ಲಾನ್ ಆದಿತ್ಯ ಬಿಸ್ವಾಸ್, ಜಿಲ್ಲಾಧಿಕಾರಿ ಎಸ್.ರಮ್ಯ, ಜಿಲ್ಲಾ ಪಂಚಾಯಿತಿ ಸಿಇಒ ಡಾ.ಎಸ್.ಆಕಾಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು,
ಪ್ರಾಂಶುಪಾಲರು ಹಾಗೂ ಪದನಿಮಿತ್ತ ಸಹ ನಿರ್ದೇಶಕ ಸಿಟಿಇ ವೈ.ಸಿ.ರವಿಕುಮಾರ್, ರಾಜ್ಯ ಸರ್ಕಾರಿ ನೌಕರರ ಸಂಘ ಜಿಲ್ಲಾಧ್ಯಕ್ಷ ಮಾಲತೇಶ್ ಮುದ್ದಜ್ಜಿ, ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯ ಉಪಾಧ್ಯಕ್ಷ ಆರ್.ಮಾರುತೇಶ್, ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಜಿ.ಬಿ.ಮಹಂತೇಶ್, ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಜಿ.ಎಸ್.ಶಿವಣ್ಣ, ತಾಲ್ಲೂಕು ಅಧ್ಯಕ್ಷರಾದ ಎಂ.ನಿಜಲಿಂಗಪ್ಪ, ಪಿ.ಜೆ.ಗುರುನಾಥಪ್ಪ ಸೇರಿದಂತೆ ಮತ್ತಿತರರು ಭಾಗವಹಿಸುವರು ಎಂದು ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಂ.ಆರ್.ಮಂಜುನಾಥ ತಿಳಿಸಿದ್ದಾರೆ.




