LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಹೊರಗಿನ ಅಭ್ಯರ್ಥಿಗಳ ಆಯ್ಕೆ ಸರಿಯಲ್ಲ; ಸ್ಥಳೀಯರಿಗೆ ಆದ್ಯತೆ ನೀಡಿ: ಬೇತೂರು ಪಾಳ್ಯ ರಾಜು

Advertisement
Advertisement

ಚಂದ್ರವಳ್ಳಿ ನ್ಯೂಸ್, ಹಿರಿಯೂರು:
​ಹಿರಿಯೂರು ವಿಧಾನಸಭಾ ಕ್ಷೇತ್ರದಲ್ಲಿ ರಾಜಕೀಯ ಬಿರುಸು ಹೆಚ್ಚಾಗಿದೆ. ಸ್ಥಳೀಯ ಅಭ್ಯರ್ಥಿಗಳಿಗೆ ಆದ್ಯತೆ ನೀಡಬೇಕೆಂಬ ಆಗ್ರಹ ಬಲವಾಗುತ್ತಿದೆ. ಈ ನಿಟ್ಟಿನಲ್ಲಿ ಮತದಾರರು ಸ್ಥಳೀಯ ಅಭ್ಯರ್ಥಿ ಆಯ್ಕೆಗೆ ಒತ್ತು ನೀಡಬೇಕು ಎಂದು ಟಿಕೆಟ್ ಆಕಾಂಕ್ಷಿ ಬೇತೂರುಪಾಳ್ಯ ಜೆ.ರಾಜು ಮನವಿ ಮಾಡಿದರು.

​ಜೆ.ಜೆ ಹಳ್ಳಿ ಹೋಬಳಿಯ ಲಕ್ಕೇನಹಳ್ಳಿ ಬೂತಪ್ಪ ದೇವಸ್ಥಾನದ ಆವರಣದಲ್ಲಿ ಸ್ಥಳೀಯರ ಸ್ವಾಭಿಮಾನ ವೇದಿಕೆವತಿಯಿಂದ ನಡೆದ ಜನಭಿಪ್ರಾಯ ಸಂಗ್ರಹ ಕಾರ್ಯಕ್ರಮದಲ್ಲಿ ಭಾಗವಹಿಸಿ ಹಿರಿಯೂರು ವಿಧಾನಸಭಾ ಕ್ಷೇತ್ರದ ಶಾಸಕ ಸ್ಥಾನದ ಆಕಾಂಕ್ಷಿ ಬೆತೂರುಪಾಳ್ಯ ರಾಜು ಅವರು ಹೊರಗಿನಿಂದ ಬಂದು ಗೆದ್ದವರು ತಾಲ್ಲೂಕಿನ ಸಮಸ್ಯೆಗಳನ್ನು ಪರಿಹರಿಸುವಲ್ಲಿ ವಿಫಲರಾಗಿದ್ದಾರೆ ಎಂದು ಕಿಡಿಕಾರಿದ್ದಾರೆ.

ಜೆ.ಜೆ ಹಳ್ಳಿ ಹೋಬಳಿಯಲ್ಲಿ ಕುಡಿಯುವ ನೀರಿನ ಶಾಶ್ವತ ಸಮಸ್ಯೆಯಾಗಿದ್ದರೂ, ದಶಕಗಳಿಂದ ಹೊರಗಿನಿಂದ ಬಂದು ಗೆದ್ದವರು ಈ ಬಗ್ಗೆ ಗಂಭೀರವಾಗಿ ಗಮನಿಸದೇ ಕೇವಲ ರಾಜಕಾರಣ ಮಾಡುತ್ತಿದ್ದಾರೆ ಎಂದಿದ್ದಾರೆ.

​ಟಿಕೆಟ್ ನೀಡಿ ಸ್ಥಳೀಯರ ಸಮಸ್ಯೆಗಳಿಗೆ ಪರಿಹಾರ ನೀಡಬೇಕಾದ್ದು ಪಕ್ಷಗಳ ಕರ್ತವ್ಯ. ಹಣದ ಪ್ರಭಾವ ಬಳಸಿ ಬಂದ ಹೊರಗಿನ ವ್ಯಕ್ತಿಗಳು ಕಳೆದ ಹಣದ ಕ್ರೂಢೀಕರಣದಲ್ಲಿಯೇ ಸಮಯ ಕಳೆಯುತ್ತಿದ್ದಾರೆ.

ಇದರಿಂದ ತಾಲ್ಲೂಕಿನ ಅಭಿವೃದ್ಧಿ ಕುಂಠಿತಗೊಳ್ಳುತ್ತಿದೆ. ಅದೇ ಸ್ಥಳೀಯ ಅಭ್ಯರ್ಥಿಗಳಾದರೆ, ತಾಲ್ಲೂಕಿನ ಜನರ ಸಂಕಷ್ಟದ ಬಗ್ಗೆ ಸಂಪೂರ್ಣ ಮಾಹಿತಿ ಇರುತ್ತದೆ. ಸ್ಥಳೀಯರು ಗೆದ್ದರೆ ತಾಲ್ಲೂಕಿನ ಅಭಿವೃದ್ಧಿ ವೇಗ ಪಡೆದುಕೊಳ್ಳಲಿದೆ ಎಂದು ಅವರು ಹೇಳಿದರು.

​ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ 'ಸ್ಥಳೀಯರ ಸ್ವಾಭಿಮಾನ ವೇದಿಕೆ'ಯ ನೂರಾರು ಮುಖಂಡರು ಸ್ಥಳೀಯ ಅಭ್ಯರ್ಥಿಗೆ ಟಿಕೆಟ್ ನೀಡಬೇಕೆಂದು ಒಕ್ಕೊರಲಿನಿಂದ ಆಗ್ರಹಿಸಿದರು ಮತ್ತು ಜೆ. ರಾಜು ಅವರಿಗೆ ಟಿಕೆಟ್ ನೀಡಬೇಕೆಂದು ಒತ್ತಾಯಿಸಿದರು.

​ಈ ಕಾರ್ಯಕ್ರಮದಲ್ಲಿ ದಿಂಡಾವರ ಗೋವಿಂದ ರಾಜು, ಗ್ರಾಮಾಂತರ ಮಾಜಿ ಅಧ್ಯಕ್ಷ ನಾರಾಯಣಸ್ವಾಮಿ, ಮಾಜಿ ಸದಸ್ಯ ವಿರೂಪಾಕ್ಷಪ್ಪ, ರೈತ ಮುಖಂಡ ಚಂದ್ರಗಿರಿ, ಸುರೇಶ್ ಗೌಡ, ಲಕ್ಕೇನಹಳ್ಳಿ ರಮೇಶ್, ಭೂತೇಶ್, ಈರೇಗೌಡ, ಕರಿಯಣ್ಣ ತಿಮ್ಮಣ್ಣ, ಕರೇಗೌಡ, ಮಂಜುನಾಥ್, ಯಲ್ಲದಕೆರೆ ಪ್ರದೀಪ್, ಶಿವಕುಮಾರ್, ಗೌಡ ಪಿಲಾಲ ಮೊದಲಾದವರು ಉಪಸ್ಥಿತರಿದ್ದರು.

 

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರೈತರಿಗೆ 3 ದಿನಗಳ ವಸತಿಯುಕ್ತ ಉಚಿತ ಸಾವಯವ ಕೃಷಿ ತರಬೇತಿ ಹಾಗೂ ಪ್ರವಾಸಬಿಡದಿ ಟೌನ್‌ಶಿಪ್‌ ಯೋಜನೆ ವಿರುದ್ಧ ಕುಮಾರಸ್ವಾಮಿ, ಆರ್.ಅಶೋಕ್ ಚಾಲನೆ: ಪಾದಯಾತ್ರೆಯಲ್ಲಿ ಹಿರಿಯೂರು ಮುಖಂಡರು ಭಾಗಿಸರ್ಕಾರಿ ಶಾಲೆಗೆ ಭೂಮಿ ದಾನ ಅತ್ಯಂತ ಶ್ರೇಷ್ಠ ಕಾರ್ಯ-ಎನ್. ಶ್ರೀನಿವಾಸ್ ಚಿನ್ಮೂಲಾದ್ರಿ ಅಕ್ಷರೋತ್ಸವ ಕವಿಗೋಷ್ಟಿ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟಿಸಿದ ಡಾ.ಎಲ್.ಪಾಲಾಕ್ಷಯ್ಯಬಿಡದಿ ಟೌನ್‌ಶಿಪ್ ವಿರೋಧಿ ಪಾದಯಾತ್ರೆಗೆ ಸಿಎಂ ಡಿ.ಕೆ. ಶಿವಕುಮಾರ್ ಪ್ರತ್ಯುತ್ತರ:ಬಿಡದಿ ಟೌನ್‌ಶಿಪ್ ವಿರುದ್ಧ ಬಿಜೆಪಿ-ಜೆಡಿಎಸ್ ಜಂಟಿ ಸಮರ: ಬೈರಮಂಗಲದಿಂದ ಬೆಂಗಳೂರಿಗೆ 'ಪಾದಯಾತ್ರೆ' ಆರಂಭ"ನನ್ನನ್ನು ಕೊಂಡುಕೊಳ್ಳಲು ಯಾರಿಂದಲೂ ಸಾಧ್ಯವಿಲ್ಲ": ಹೆಚ್.ಡಿ. ಕೆ ವಾಗ್ದಾಳಿ ಖಾತೆ ಹಂಚಿಕೆ, ಸಂಪುಟ ಪುನಾರಚನೆ ಕಸರತ್ತು: ಹೈಕಮಾಂಡ್ ಭೇಟಿಗೆ ದೆಹಲಿಗೆ ತೆರಳಿದ ಸಿಎಂ ಶಿವಕುಮಾರ್ಪೊಲೀಸರ ಮೆಗಾ ಆಪರೇಷನ್: 105 ಅಕ್ರಮ ಬಾಂಗ್ಲಾ ವಲಸಿಗರ ಬಂಧನ, ಗಡಿಪಾರಿಗೆ ಕ್ರಮಸಚಿವ ನಾಗೇಂದ್ರ ರಾಜೀನಾಮೆಗೆ ಶ್ರೀರಾಮುಲು ಆಗ್ರಹ; ರೆಡ್ಡಿ ಬ್ರದರ್ಸ್‌ಗೆ ಈಶ್ವರ್ ಖಂಡ್ರೆ ತಿರುಗೇಟು