ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ (ಬೆಂಗಳೂರು), ಚಿತ್ರದುರ್ಗ ಜಿಲ್ಲಾ ಕಾರ್ಯನಿರತ ಪತ್ರಿಕಾ ವಿತರಕರ ಹಾಗೂ ಹಂಚಿಕೆದಾರರ ಸಂಘ ಮತ್ತು ಹಿರಿಯೂರು ತಾಲೂಕು ಪತ್ರಿಕಾ ವಿತರಕರ ಸಂಘದ ಜಂಟಿ ಆಶ್ರಯದಲ್ಲಿ ಮೊಟ್ಟಮೊದಲ ಬಾರಿಗೆ ‘ಜಿಲ್ಲಾ ಮಟ್ಟದ ಪತ್ರಿಕಾ ವಿತರಕರ ದಿನಾಚರಣೆ’ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ತಾಲೂಕು ಪತ್ರಿಕಾ ವಿತರಕರ ಸಂಘದ ಅಧ್ಯಕ್ಷ ಎನ್. ನಾಗಣ್ಣ ತಿಳಿಸಿದ್ದಾರೆ.
ನಗರದ ಎ. ಕೃಷ್ಣಪ್ಪ ರೋಟರಿ ಸಭಾಭವನದಲ್ಲಿ ಸೆಪ್ಟಂಬರ್ 4 ರ ಶುಕ್ರವಾರ ಬೆಳಿಗ್ಗೆ 11:30 ಕ್ಕೆ ಈ ದಿನಾಚರಣೆ ಸಮಾರಂಭ ನಡೆಯಲಿದೆ.
ಕಾರ್ಯಕ್ರಮವನ್ನು ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಟಿ. ರಘುಮೂರ್ತಿ ಅವರು ಉದ್ಘಾಟಿಸಲಿದ್ದಾರೆ. ತಾಲೂಕು ಪತ್ರಿಕಾ ವಿತರಕರ ಸಂಘದ ಅಧ್ಯಕ್ಷ ಎನ್. ನಾಗಣ್ಣ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.
ಚಿತ್ರದುರ್ಗ ಲೋಕಸಭಾ ಸದಸ್ಯ ಗೋವಿಂದ್ ಎಂ. ಕಾರಜೋಳ, ಚಿತ್ರದುರ್ಗ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ, ವಿಧಾನ ಪರಿಷತ್ ಸದಸ್ಯರುಗಳಾದ ಕೆ.ಎಸ್. ನವೀನ್ ಹಾಗೂ ಡಿ.ಟಿ. ಶ್ರೀನಿವಾಸ್ ಅವರುಗಳು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಹಿರಿಯೂರು ಕ್ಷೇತ್ರದ ಪ್ರಮುಖರು ಹಾಗೂ ಜನಪ್ರತಿನಿಧಿಗಳು ಉಪಸ್ಥಿತರಿರಲಿದ್ದಾರೆ.
ರಾಜಣ್ಣ: ಅಧ್ಯಕ್ಷರು, ಕರ್ನಾಟಕ ರಾಜ್ಯ ಕಾಡುಗೊಲ್ಲರ ಸಂಘ ಹಾಗೂ ಮಾಜಿ ಬಿಬಿಎಂಪಿ ಸದಸ್ಯರು, ಡಾ. ಬೊಮ್ಮನಹಳ್ಳಿ ಬಾಬು: ಮಾಲೀಕರು, ಅಟ್ಟಿಕಾ ಗೋಲ್ಡ್ ಕಂಪನಿ, ಜಯರಾಮಯ್ಯ: ಜೆಡಿಎಸ್ ಮುಖಂಡರು, ಎಂ. ಜಯಣ್ಣ: ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷರು, ಚಿತ್ರದುರ್ಗ, ಸಣ್ಣ ಚಿತ್ತಯ್ಯ: ನಿವೃತ್ತ ಎಂ.ಡಿ., ವಿ.ಜ.ನಿ.ನಿ.
ಸುಹಾಸ್ ಸುಧಾಕರ್: ಯುವ ಕಾಂಗ್ರೆಸ್ ಮುಖಂಡರು, ಸಿ.ಬಿ. ಪಾಪಣ್ಣ: ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರು, ಆಲೂರು ಹನುಮಂತರಾಯಪ್ಪ: ಹಿರಿಯ ಪತ್ರಕರ್ತರು, ಹೆಚ್.ಎಸ್. ಸುಂದರರಾಜ್: ಛೇರ್ಮನ್, ರೆಡ್ ಕ್ರಾಸ್ ಸಂಸ್ಥೆ (ಹಿರಿಯೂರು ಶಾಖೆ), ಹೆಚ್.ಡಿ. ವಸಂತ ಕುಮಾರ್: ಅಧ್ಯಕ್ಷರು, ರೋಟರಿ ಸಂಸ್ಥೆ, ಹಿರಿಯೂರು, ಎಂ.ಎಲ್. ಗಿರಿಧರ್: ಅಧ್ಯಕ್ಷರು, ತಾಲೂಕು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ, ಹಿರಿಯೂರು ತಹಶೀಲ್ದಾರ್ ಎಂ. ಸಿದ್ದೇಶ್, ನಗರಸಭೆ ಪೌರಾಯುಕ್ತ ಎ. ವಾಸಿಂ ಹಾಗೂ ಹಿರಿಯೂರು ಡಿವೈಎಸ್ಪಿ ಟಿ.ಎಂ. ಶಿವಕುಮಾರ್ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ರಾಜ್ಯ ಹಾಗೂ ಜಿಲ್ಲಾ ಮಟ್ಟದ ಪದಾಧಿಕಾರಿಗಳು:
ವಿಶೇಷ ಆಹ್ವಾನಿತರಾಗಿ ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಸಂಘದ ರಾಜ್ಯಾಧ್ಯಕ್ಷ ಕೆ. ಶಂಭುಲಿಂಗ, ಪ್ರಧಾನ ಕಾರ್ಯದರ್ಶಿ ಸುರೇಶ್ ಪಿ., ಉಪಾಧ್ಯಕ್ಷ ಪ್ರಶಾಂತ್ ಕುಮಾರ್ ಎನ್., ತುಮಕೂರು ಜಿಲ್ಲಾ ಪತ್ರಿಕೆ ಹಂಚಿಕೆದಾರರ ಸಂಘದ ಅಧ್ಯಕ್ಷ ಚೆಲುವರಾಜ್ (ರಘು), ಪ್ರಧಾನ ಕಾರ್ಯದರ್ಶಿ ವಾಸುದೇವ್ ಎನ್. ನಾದೂರು, ಚಿತ್ರದುರ್ಗ ಜಿಲ್ಲಾ ಸಂಘದ ಅಧ್ಯಕ್ಷ ಎಸ್. ತಿಪ್ಪೇಸ್ವಾಮಿ, ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಆರ್. ಹಾಗೂ ಸಂಚಾಲಕ ಎ.ಎನ್. ಕೃಷ್ಣಮೂರ್ತಿ ಅವರುಗಳು ಆಗಮಿಸಲಿದ್ದಾರೆ.
ಈ ಅಭೂತಪೂರ್ವ ಕಾರ್ಯಕ್ರಮದಲ್ಲಿ ಹಿರಿಯೂರು ತಾಲೂಕು ಪತ್ರಿಕಾ ವಿತರಕರ ಒಕ್ಕೂಟದ ಎಲ್ಲಾ ಪದಾಧಿಕಾರಿಗಳು ಹಾಗೂ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ಸಂಘದ ಪ್ರಧಾನ ಕಾರ್ಯದರ್ಶಿ ಈ. ಉಮೇಶ್ ಮನವಿ ಮಾಡಿದ್ದಾರೆ.




