Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

 ಹೆಸರು, ಉದ್ದಿನಕಾಳು ಸೇರಿ 4 ಬೆಳೆಗಳಿಗೆ ಬೆಂಬಲ ಬೆಲೆ -ಸಚಿವ ಶಿವಾನಂದ ಪಾಟೀಲ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಎಪಿಎಂಸಿ ಕಾಯ್ದೆ ಮರುಸ್ಥಾಪನೆಯಿಂದ ರೈತರಿಗೆ ಹೆಚ್ಚು ಅನುಕೂಲವಾಗಿದ್ದು, ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಏಕಕಾಲದಲ್ಲಿ ನಾಲ್ಕು ಬೆಳೆಗಳನ್ನು ಬೆಂಬಲ ಬೆಲೆ ಯೋಜನೆ ಅಡಿಯಲ್ಲಿ ಖರೀದಿ ಮಾಡಲಾಗುತ್ತಿದೆ ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಹೇಳಿದರು.

ವಿಧಾನಸೌಧದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಹೆಸರುಕಾಳು, ಸೂರ್ಯಕಾಂತಿ, ಸೋಯಾಬಿನ್ ಮತ್ತು ಉದ್ದಿನಕಾಳನ್ನು ಬೆಂಬಲ ಬೆಲೆ ಯೋಜನೆ ಅಡಿ ಖರೀದಿ ಮಾಡಲಾಗುತ್ತಿದೆ. ಸೋಯಾಬಿನ್ ಮತ್ತು ಉದ್ದಿನಕಾಳು ಖರೀದಿ ಪ್ರಕ್ರಿಯೆ ಆರಂಭಿಸಲು ಸೆಪ್ಟೆಂಬರ್ 5ರಂದು ಆದೇಶ ಹೊರಡಿಸಲಾಗಿದೆ ಎಂದು ತಿಳಿಸಿದರು.

ಈಗಾಗಲೇ ಹೆಸರುಕಾಳು ಮತ್ತು ಸೂರ್ಯಕಾಂತಿಯನ್ನು ಬೆಂಬಲ ಬೆಲೆಯಲ್ಲಿ ಖರೀದಿ ಮಾಡಲು ರಾಜ್ಯ ಸರ್ಕಾರ ಖರೀದಿ ಏಜನ್ಸಿಗಳನ್ನು ನೇಮಕ ಮಾಡಿದೆ. ಪ್ರತಿ ರೈತರಿಂದ ಗರಿಷ್ಠ 15 ಕ್ವಿಂಟಲ್ ಸೂರ್ಯಕಾಂತಿ ಮತ್ತು 10 ಕ್ವಿಂಟಲ್ ಹೆಸರುಕಾಳು ಖರೀದಿ ಮಾಡಲಿದೆ. ಎಫ್.ಎ.ಕ್ಯೂ ಗುಣಮಟ್ಟದ ಸೋಯಾಬಿನ್‍ಗೆ ಕ್ವಿಂಟಲ್‍ಗೆ ರೂ 4,892/- ಹಾಗೂ ಉದ್ದಿನ ಕಾಳಿಗೆ ಕ್ವಿಂಟಲ್‍ಗೆ ರೂ 7,400/- ಬೆಲೆ ನಿಗದಿಪಡಿಸಲಾಗಿದೆ. ಬೆಂಬಲ ಬೆಲೆಯಲ್ಲಿ ಸುಮಾರು 10 ಲಕ್ಷ ಕ್ವಿಂಟಲ್ ಸೋಯಾಬಿನ್ ಮತ್ತು 2 ಲಕ್ಷ ಕ್ವಿಂಟಲ್ ಉದ್ದಿನಕಾಳು ಖರೀದಿ ಮಾಡಲಾಗುವುದು. 2024-25ನೇ ಸಾಲಿನಲ್ಲಿ 4.10 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ 4.72 ಲಕ್ಷ ಮೆಟ್ರಿಕ್ ಟನ್ ಸೋಯಾಬಿನ್ ಹಾಗೂ 0.77 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ 0.40 ಲಕ್ಷ ಮೆಟ್ರಿಕ್ ಟನ್ ಉದ್ದಿನಕಾಳು ಇಳುವರಿ ನಿರೀಕ್ಷೆ ಮಾಡಲಾಗಿತ್ತು ಎಂದು ತಿಳಿಸಿದರು.

ಎಫ್.ಎ.ಕ್ಯೂ ಗುಣಮಟ್ಟದ ಹೆಸರುಕಾಳಿಗೆ ಪ್ರತಿ ಕ್ವಿಂಟಲ್ ಗೆ ರೂ 8,682 ರೂ. ಹಾಗೂ ಸೂರ್ಯಕಾಂತಿಗೆ ರೂ 7,280 ನಿಗದಿಪಡಿಸಲಾಗಿದೆ. ಹೆಸರುಕಾಳು ಖರೀದಿಗೆ 172 ಖರೀದಿ ಕೇಂದ್ರ ಗುರುತಿಸಲಾಗಿದ್ದು, 1982 ರೈತರು ನೋಂದಣಿ ಮಾಡಿಸಿಕೊಂಡಿದ್ದಾರೆ. ಸೂರ್ಯಕಾಂತಿ ಖರೀದಿಗೆ 19 ಖರೀದಿ ಕೇಂದ್ರ ಗುರುತಿಸಲಾಗಿದ್ದು, 461 ರೈತರು ನೋಂದಣಿ ಮಾಡಿಕೊಂಡಿದ್ದಾರೆ. ಕೊಬ್ಬರಿ ಖರೀದಿಯಲ್ಲೂ ಈ ಬಾರಿ ಪ್ರಮುಖ ಪಾತ್ರ ವಹಿಸಲಾಗಿದ್ದು, ಇದೇ ಮೊದಲ ಬಾರಿಗೆ ಮಿಲ್ಲಿಂಗ್ ಕೊಬ್ಬರಿಯನ್ನು ಬೆಂಬಲ ಬೆಲೆಯಲ್ಲಿ ಖರೀದಿ ಮಾಡಲಾಗಿದೆ ಎಂದು ತಿಳಿಸಿದರು.

ಎಪಿಎಂಸಿ ಯಾರ್ಡ್ ಗಳಲ್ಲಿ 150 ಕೋಟಿ ರೂ. ವೆಚ್ಚದಲ್ಲಿ 14 ರಿಂದ 15  ಶೀಥಲ ಗೃಹಗಳನ್ನು ಎಪಿಎಂಸಿಗಳಲ್ಲಿ ನಿರ್ಮಾಣ ಮಾಡಲಾಗುವುದು.  ರಾಜ್ಯದ ನಾಲ್ಕು ಕಂದಾಯ ವಿಭಾಗಗಳಲ್ಲಿ ವಿಭಾಗಾವಾರು ವಿಜಿಲೆನ್ಸ್ ಸೆಲ್‍ಗಳನ್ನು ರಚಿಸಲಾಗಿದೆ. ವಿಜಿಲೆನ್ಸ್ ರಚನೆ ಪರಿಣಾಮ ಎಪಿಎಂಸಿ ಆದಾಯ ಕೂಡ ಹೆಚ್ಚಾಗಿದೆ, ಈ ವರ್ಷ ರೂ 380ರಿಂದ ರೂ 400 ಕೋಟಿ ಆದಾಯ ನಿರೀಕ್ಷೆ ಮಾಡಲಾಗಿದ್ದು, ಆರ್ಥಿಕ ವರ್ಷದ 5 ತಿಂಗಳಲ್ಲಿ ರೂ 133.15 ಕೋಟಿ ಆದಾಯ ಸಂಗ್ರಹವಾಗಿದೆ. ಕಳೆದ  ವರ್ಷ ಇದೇ ಅವಧಿಯಲ್ಲಿ ರೂ 77.42 ಕೋಟಿ. ಆದಾಯ ಸಂಗ್ರಹವಾಗಿತ್ತು.


Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ