Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Feature Article

ಕಿರು ಅಧ್ಯಯನ ನಡೆಸಲು 1.50 ಲಕ್ಷ ಫೆಲೋಶಿಪ್

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಸಂತಕವಿ ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರವು 2024-25ನೇ ಸಾಲಿನಲ್ಲಿ ಕಿರು ಅಧ್ಯಯನ ನಡೆಸಲು ತಲಾ ರೂ.1.50 ಲಕ್ಷಗಳಂತೆ ಫೆಲೋಶಿಪ್ ನೀಡುತ್ತದೆ.

ಕನಕದಾಸರ ಮುಂಡಿಗೆ ಸಾಹಿತ್ಯ- ತಾತ್ವಿಕ ವಿವೇಚನೆ, ಕರ್ನಾಟಕ ತತ್ವಪದಗಳ ಚಾರಿತ್ರಿಕ ಅಧ್ಯಯನ, ಕನ್ನಡದಲ್ಲಿ ಅನುಭಾವ ಸಾಹಿತ್ಯ- ತಾತ್ವಿಕ ಅಧ್ಯಯನ, ಕನ್ನಡದಲ್ಲಿ ಕೀರ್ತನ ಸಾಹಿತ್ಯದ ಸಮಾಜೋ-ಸಾಂಸ್ಕøತಿಕ ಅಧ್ಯಯನ ವಿಷಯಗಳ ಕುರಿತು ಅಧ್ಯಯನ ನಡೆಸಬೇಕು.

12 ತಿಂಗಳ ಅವಧಿಯ ಅಧ್ಯಯನ ಯೋಜನೆಯ ಬಗ್ಗೆ ಆಸಕ್ತ ಯುವ ಸಂಶೋಧನಾರ್ಥಿಗಳು ತಮ್ಮ ವಿದ್ಯಾರ್ಹತೆ, ಸಂಶೋಧನೆಯ ಬಗೆಗಿನ ಅನುಭವ ಹಾಗೂ ತಮ್ಮ ಆಸಕ್ತಿ ಕ್ಷೇತ್ರವನ್ನು ಒಳಗೊಂಡ ವಿವರಗಳನ್ನು ಹಾಗೂ ಆಯ್ಕೆ ಮಾಡಿಕೊಂಡ ವಿಷಯವನ್ನು ಕುರಿತು ಅಧ್ಯಯನ ವ್ಯಾಪ್ತಿ ಮತ್ತು ಆಕರ ಸಾಮಗ್ರಿಗಳನ್ನು ಒಳಗೊಂಡ ಸಂಕ್ಷಿಪ್ತ ಮಾಹಿತಿಯಿರುವ ಸಾರಲೇಖವನ್ನು ಅರ್ಜಿಯೊಂದಿಗೆ ಲಗತ್ತಿಸಿರಬೇಕು.

ಆಸಕ್ತಿಯಿರುವ 20 ರಿಂದ 55 ವರ್ಷ ವಯಸುಳ್ಳ ರಾಜ್ಯದ ಎಲ್ಲಾ ಭಾಗದ ಅಭ್ಯರ್ಥಿಗಳು ಅರ್ಜಿಯನ್ನು ಅಧ್ಯಯನ ಕೇಂದ್ರ -ಮೇಲ್ ಗೆ ಅಥವಾ ಅಂಚೆ ಮೂಲಕ ಕಳುಹಿಸಬಹುದು.
ಅರ್ಜಿ ಸಲ್ಲಿಸಲು 2025 ಮೇ 20 ಕೊನೆಯ ದಿನಾಂಕವಾಗಿದ್ದು, ಹೆಚ್ಚಿನ ಮಾಹಿತಿಗಳಿಗಾಗಿ ಸಂತಕವಿ ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರದ ದೂರವಾಣಿ ಸಂಖ್ಯೆ: 080-22113147 ಹಾಗೂ 6364529319 ಗೆ ಸಂಪರ್ಕಿಸಬಹುದು.

-ವಿಳಾಸ: [email protected]  ಮತ್ತು ವೆಬ್ ಸೈಟ್ https://kanakadasaresearchcenter.karnataka.gov.in  ಮೂಲಕ ಅರ್ಜಿ ನಮೂನೆ ಹಾಗೂ ವಿವರಗಳನ್ನು ಪಡೆದುಕೊಳ್ಳಬಹುದು ಎಂದು ಸಂತಕವಿ ಕನಕದಾಸ ಮತ್ತು ತತ್ವಪದಕಾರ ಅಧ್ಯಯನ ಕೇಂದ್ರದ ಅಧ್ಯಕ್ಷ ಕಾ.. ಚಿಕ್ಕಣ್ಣ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಸಾಪ ಮಾಜಿ ಜಿಲ್ಲಾಧ್ಯಕ್ಷ, ಶಿಕ್ಷಣತಜ್ಞ ಡಾ. ಕೆ.ಎಂ. ವೀರೇಶ್ ಹೃದಯಾಘಾತದಿಂದ ನಿಧನದುರ್ಗಕ್ಕೆ ಹರಿದು ಬಂದ ಭದ್ರೆ- ಸೆ.24ರಂದು ಮುಖ್ಯಮಂತ್ರಿಗಳಿಂದ ಗಂಗಾಪೂಜೆ,  ಬೃಹತ್ ಸಾರ್ವಜನಿಕ ಸಮಾರಂಭಆರ್.ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ 22ನೇ ಘಟಿಕೋತ್ಸವ ಮತ್ತು ಪದವಿ ಪ್ರದಾನ ಕಾರ್ಯಕ್ರಮನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಬೈಕ್ ಸವಾರ ಸಾವುಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಸಭೆ ಹೋರಾಟಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಾತಿನಿಧ್ಯ ಕಡಿಮೆ- ಚಿಕ್ಕಪ್ಪನಹಳ್ಳಿ ಷಣ್ಮುಖಕುಂಚಿಟಿಗ ನೌಕರರ ಸಂಘಕ್ಕೆ ಸದಸ್ಯರಾಗಿ: ಎಸ್.ಕೆ ಲಕ್ಷ್ಮಣ್ಚಳವಳಿ ನೆನಪಾಗಿ ಉಳಿದ ‘ತೆಂಕ-ಬಡಗ’ಅಂತಾರಾಷ್ಟ್ರೀಯ ಶಾಂತಿ ದಿನ – ಮನದ ದ್ವೇಷ ಕರಗಿದಾಗಲೇ ಜಗದ ಶಾಂತಿ ಅರಳುವುದು!ಗಣಪತಿ ಮೆರವಣಿಗೆ ವೇಳೆ ಗಲಾಟೆ 7 ಯುವಕರ ವಿರುದ್ಧ ಸುಮೋಟೋ ಪ್ರಕರಣ ದಾಖಲು