Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮೃತರಿಗೆ 10 ಲಕ್ಷ ಪರಿಹಾರ-ಸಿದ್ದರಾಮಯ್ಯ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ವಿಜಯೋತ್ಸವ ಸಂದರ್ಭದಲ್ಲಿ ದೊಡ್ಡ ಪ್ರಮಾಣದ ದುರಂತ ಸಂಭವಿಸಿದೆ. ಇಲ್ಲಿ ಕಾಲ್ತುಳಿತಕ್ಕೆ ಒಳಗಾಗಿ 11ಜನರು ಮೃತಪಟ್ಟು, 47 ಮಂದಿ ಗಾಯಗೊಂಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕೃತವಾಗಿ ತಿಳಿಸಿದ್ದಾರೆ.

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತ ಪ್ರಕರಣದ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದರು.

ಅವರು ಬೌರಿಂಗ್ ಆಸ್ಪತ್ರೆ, ವೈದೇಹಿ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿ ಧೈರ್ಯ ತುಂಬಿದರು, ತಮ್ಮವರನ್ನು ಕಳೆದುಕೊಂಡವರನ್ನು ಸಂತೈಸಿದರು. ಸಂಭ್ರಮಾಚರಣೆ ಮಾಡುವಾಗ ಇಂತಹ ದುರಂತ ನಡೆಯಬಾರದಾಗಿತ್ತು. ಈ ಘಟನೆಯ ಬಗ್ಗೆ ನಮಗೆ ಮರುಕವಿದೆ.

ಸಾವಿಗೀಡಾದವರಲ್ಲಿ ಹೆಚ್ಚಿನವರು ಯುವ ವಯಸ್ಸಿನವರು. ನಾವು ಮೃತಪಟ್ಟವರ ಕುಟುಂಬದವರಿಗೆ ರೂ.10 ಲಕ್ಷ ಪರಿಹಾರ ನೀಡಲಿದ್ದೇವೆ. ಗಾಯಗೊಂಡವರ ಚಿಕಿತ್ಸೆ ವೆಚ್ಚವನ್ನು ಸರ್ಕಾರ ಭರಿಸಲಿದೆ. ಗಾಯಗೊಂಡವರು ಪ್ರಾಣಾಪಾಯಾದಿಂದ ಪಾರಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ ಎಂದು ಸಿಎಂ ತಿಳಿಸಿದರು.

ಈ ದುರಂತದ ಬಗ್ಗೆ ಮ್ಯಾಜಿಸ್ಟ್ರೀಯಲ್ ತನಿಖೆಗೆ ಆದೇಶಿಸಿದ್ದೇನೆ. ತಪ್ಪಿತಸ್ಥರ ಮೇಲೆ ಸೂಕ್ತ ಕ್ರಮ ಜರುಗಿಸಲಾಗುವುದು. 15ದಿನಗಳ ಒಳಗಾಗಿ ತನಿಖೆಯ ವರದಿಯನ್ನು ಸಲ್ಲಿಸಲು ಸೂಚನೆ ನೀಡಲಾಗಿದೆ ಎಂದು ಸಿಎಂ ತಿಳಿಸಿದರು.

ನಿನ್ನೆ ತಡರಾತ್ರಿವರೆಗೂ ಐಪಿಎಲ್ ಫೈನಲ್ ಪಂದ್ಯ ನಡೆದಿತ್ತು. ಕ್ರಿಕೆಟ್ ಅಸೋಸಿಯೇಶನ್ ಅವರು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ವಿಜಯೋತ್ಸವ ಕಾರ್ಯಕ್ರಮ ಹಮ್ಮಿಕೊಂಡಿದ್ದರು. ಸರ್ಕಾರದ ವತಿಯಿಂದ ವಿಧಾನಸೌಧದ ಬಳಿ ಕಾರ್ಯಕ್ರಮ ಆಯೋಜಿಸಲಾಗಿತ್ತು.

ನಮ್ಮ ನಿರೀಕ್ಷೆಗೂ ಮೀರಿ ಜನ, ಅಭಿಮಾನಿಗಳು ಸೇರಿದ್ದರು. ವಿಧಾನಸೌಧ ಎದುರು ಸುಮಾರು 1 ಲಕ್ಷಕ್ಕೂ ಹೆಚ್ಚು ಜನ ಸೇರಿದ್ದರು. ಆದರೂ ಸರ್ಕಾರ ಆಯೋಜಿಸಿದ್ದ ಸಮಾರಂಭದಲ್ಲಿ ಯಾವುದೇ ಅನಿರೀಕ್ಷಿತ ಘಟನೆಗಳು, ದುರಂತ ನಡೆದಿಲ್ಲ.

ಆದರೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ದುರಂತ ಸಂಭವಿಸಿದೆ. ಯಾರೂ ಇದನ್ನು ನಿರೀಕ್ಷಿಸಲು ಸಾಧ್ಯವಿಲ್ಲ. ಕ್ರಿಕೆಟ್ ಅಸೋಸಿಯೇಶನ್ ಅಥವಾ ನಾವು ನಿರೀಕ್ಷಿಸಿರಲಿಲ್ಲ. ಕ್ರಿಕೆಟ್ ಸ್ಟೇಡಿಯಂನಲ್ಲಿ 35 ಸಾವಿರ ಜನರು ಕುಳಿತುಕೊಳ್ಳುವ ಆಸನ ವ್ಯವಸ್ಥೆಯಿದೆ. ಆದರೆ 2-3 ಲಕ್ಷ ಜನರು ಆಗಮಿಸಿದ್ದಾರೆ. ಇಷ್ಟೊಂದು ಪ್ರಮಾಣದಲ್ಲಿ ಜನರು ಬರುವ ನಿರೀಕ್ಷೆ ಮಾಡಿರಲಿಲ್ಲ. ಸ್ಟೇಡಿಯಂ ಸಾಮರ್ಥ್ಯದಷ್ಟು ಜನರ ನಿರೀಕ್ಷೆಯಿತ್ತು. ಕ್ರಿಕೆಟ್ ಅಸೋಸಿಯೇಷನ್ ನಡೆಸುವ ಕಾರ್ಯಕ್ರಮಗಳಿಗೆ ಭದ್ರತೆ ಒದಗಿಸುವ ಕೆಲಸ ಸರ್ಕಾರ ಮಾಡುತ್ತದೆಯಷ್ಟೇ.

ಗಾಯಗೊಂಡವರಿಗೆ ಸಾರಿಗೆ ವ್ಯವಸ್ಥೆ ಸೇರಿದಂತೆ ಎಲ್ಲಾ ನೆರವು ಸರ್ಕಾರ ಒದಗಿಸಲಿದೆ. ಈ ವಿಷಯದಲ್ಲಿ ರಾಜಕೀಯ ನಡೆಸುವುದು ಸರಿಯಲ್ಲ. ಈ ದುರಂತ ನಡೆಯಬಾರದಿತ್ತು, ನಡೆದು ಹೋಗಿದೆ. ಇದಕ್ಕಾಗಿ ಸರ್ಕಾರ ಅತ್ಯಂತ ಹೆಚ್ಚಿನ ದುಃಖ ವ್ಯಕ್ತಪಡಿಸುತ್ತದೆ.

ಕಾಲ್ತುಳಿತದಲ್ಲಿ ಪ್ರಾಣ ಕಳೆದುಕೊಂಡವರ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಕುಟುಂಬ ವರ್ಗ, ಪೋಷಕರಿಗೆ ಸಾವಿನ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಾರ್ಥಿಸಿದ್ದಾರೆ.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ