Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನ

Advertisement
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಚಿತ್ರದುರ್ಗ ತೋಟಗಾರಿಕೆ ಇಲಾಖೆ ವ್ಯಾಪ್ತಿಯ ಹಿರೇಗುಂಟನೂರು ಹೋಬಳಿಯ ಐಯ್ಯನಹಳ್ಳಿ ಗ್ರಾಮದಲ್ಲಿನ ಐಯ್ಯನಹಳ್ಳಿ ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಇದ್ದ ಕೊನೆಯ ದಿನವನ್ನು ಏಪ್ರಿಲ್ 28 ವರೆಗೆ ವಿಸ್ತರಿಸಲಾಗಿದೆ.

ಚಿತ್ರದುರ್ಗ ತಾಲ್ಲೂಕು ಹಿರೇಗುಂಟನೂರು ಹೋಬಳಿ ವ್ಯಾಪ್ತಿಯ ಐಯ್ಯನಹಳ್ಳಿ ಗ್ರಾಮದಲ್ಲಿನ ಐಯ್ಯನಹಳ್ಳಿ ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ 2025-26ನೇ ಸಾಲಿನಲ್ಲಿ 2025 ಮೇ 02 ರಿಂದ 2026 ಫೆ.28 ಅವಧಿಯವರೆಗೆ ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.

ತರಬೇತಿ ಅರ್ಜಿಗಳನ್ನು ಮಾರ್ಚ್ 01 ರಿಂದ 31 ರವರೆಗೆ ತೋಟಗಾರಿಕೆ ಉಪನಿರ್ದೇಶಕರು, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ಚಿತ್ರದುರ್ಗ ಕಚೇರಿಯಲ್ಲಿ ಅಥವಾ ಇಲಾಖೆಯ ವೆಬ್ಸೈಟ್  https://horticulturedir.karnataka.gov.in     ನಲ್ಲಿ ಅಥವಾ ಕಚೇರಿ ವೇಳೆಯಲ್ಲಿ ಪಡೆಯಬಹುದಾಗಿದೆ.

ಆಯ್ಕೆಯಾದ ಶಿಬಿರಾರ್ಥಿಗಳಿಗೆ ಜಿಲ್ಲೆಯ ಐಯ್ಯನಹಳ್ಳಿ ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ ವಸತಿ ಸಹಿತ ತರಬೇತಿ ನೀಡಲಾಗುವುದು. ಮಾಜಿ ಸೈನಿಕ ಅಭ್ಯರ್ಥಿಗಳು ಆಯ್ಕೆಗೊಂಡಲ್ಲಿ ಅಭ್ಯರ್ಥಿಗಳಿಗೆ ಉಚಿತವಾಗಿ ಕಲಿಕೆಯ ಎಲ್ಲಾ ತರಹದ ಅವಕಾಶಗಳನ್ನು ಕಲ್ಪಿಸಲಾಗುವುದು. ಆದರೆ ವಸತಿ ನಿಲಯದಲ್ಲಿ ವಾಸ್ತವ್ಯದ ವ್ಯವಸ್ಥೆ ಕಡ್ಡಾಯ ಇರುವುದಿಲ್ಲ ಹಾಗೂ ಶಿಷ್ಯವೇತನಕ್ಕೆ ಅವಕಾಶವಿರುವುದಿಲ್ಲ. ತರಬೇತಿಗೆ ಒಟ್ಟು 15 ಅಭ್ಯರ್ಥಿಗಳಿಗೆ ಅವಕಾಶವಿದ್ದು, ಮೆರಿಟ್ ಆಧಾರದ ಮೇಲೆ ಸರ್ಕಾರದ ಮೀಸಲಾತಿ ನಿಯಮಗಳನುಸಾರ ಆಯ್ಕೆ ಮಾಡಲಾಗುತ್ತದೆ.

ಅಭ್ಯರ್ಥಿಗಳು ಕನಿಷ್ಠ ಎಸ್.ಎಸ್.ಎಲ್.ಸಿ. ಉತ್ತೀರ್ಣವಾಗಿರಬೇಕು. ತರಬೇತಿ ಬಯಸುವ ಅಭ್ಯರ್ಥಿಯ ಪೋಷಕರು ಕಡ್ಡಾಯವಾಗಿ ಜಮೀನು ಹೊಂದಿರಬೇಕು ಹಾಗೂ ಸ್ವಂತ ಜಮೀನನ್ನು ಸಾಗುವಳಿ ಮಾಡುತ್ತಿರಬೇಕು. ಮಾಜಿ ಸೈನಿಕರ ತರಬೇತಿಯನ್ನು ಪಡೆಯಲು ಇಚ್ಚಿಸಿದ್ದಲ್ಲಿ ಡಿಸ್ಜಾರ್ಜ್ ಬುಕ್, ಪರ್ಸನಲ್ ಪೆನ್ಶೆನ್ ಆರ್ಡರ್ ಕಾಪಿ, ಎಕ್ಸ್ ಸರ್ವಿಸ್ ಮ್ಯಾನ್ ಐಡಿ ಕಾರ್ಡ್ ಕಾಪಿ, ಇತ್ಯಾದಿಗಳನ್ನ ಸಲ್ಲಿಸಬೇಕು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಹಾಗೂ ಅಂಗವಿಕಲದವರಿಗೆ ಕನಿಷ್ಟ 18 ವರ್ಷ ಮತ್ತು ಗರಿಷ್ಟ 33 ವರ್ಷ ವಯಸ್ಸಿನವರಾಗಿರಬೇಕು. ಇತರರಿಗೆ ಕನಿಷ್ಟ 18 ವರ್ಷ ಮತ್ತು ಗರಿಷ್ಟ 30 ವರ್ಷ, ಮಾಜಿ ಸೈನಿಕರಿಗೆ 33 ರಿಂದ 65 ವರ್ಷ ವಯಸ್ಸಿನವರಾಗಿರಬೇಕು. ತರಬೇತಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ರೂ.1,750 ಗಳ ಮಾಸಿಕ ಶಿಷ್ಯವೇತನ ನೀಡಲಾಗುವುದು.

ಸಾಮ್ಯಾನ ಅಭ್ಯರ್ಥಿಗಳು ಅರ್ಜಿ ಶುಲ್ಕ ರೂ.30, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ, ಅಂಗವಿಕಲ ಅಭ್ಯರ್ಥಿಗಳು, ಮಾಜಿ ಸೈನಿಕ ಅಭ್ಯರ್ಥಿಗಳು ಅರ್ಜಿ ಶುಲ್ಕ ರೂ.15 ಮೌಲ್ಯದ ಇಂಡಿಯನ್ ಪೋಸ್ಟಲ್ ಆರ್ಡರ್ ಅಥವಾ ಡಿಮ್ಯಾಂಡ್ ಡ್ರಾಫ್ಟ್  (DD)   ಮೂಲಕ Deputy Director of  Horticulture (ZP) Chitradurga      ಹೆಸರಿನಲ್ಲಿ ಪಡೆದು, ಅಗತ್ಯ ದಾಖಲೆಗಳೊಂದಿಗೆ ತೋಟಗಾರಿಕೆ ಉಪನಿರ್ದೇಶಕರು, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಚಿತ್ರದುರ್ಗ ಕಚೇರಿಗೆ ಏಪ್ರಿಲ್ 01 ಸಂಜೆ 5.30 ರೊಳಗೆ ಅರ್ಜಿ ಸಲ್ಲಿಸಬೇಕು. ಏಪ್ರಿಲ್ 08 ರಂದು ಬೆಳಿಗ್ಗೆ 10 ಗಂಟೆಗೆ ಚಿತ್ರದುರ್ಗ ತೋಟಗಾರಿಗೆ ಉಪ ನಿರ್ದೇಶಕರರ ಕಚೇರಿಯಲ್ಲಿ ಸಂದರ್ಶವನ್ನು ನೆಡೆಸಲಾಗುವುದು.

ಹೆಚ್ಚಿನ ಮಾಹಿತಿಗಾಗಿ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ಚಿತ್ರದುರ್ಗ ಕಚೇರಿಯನ್ನು ಅಥವಾ ದೂರವಾಣಿ ಸಂಖ್ಯೆ 08194-230895, 9980991048 ಅನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ತೋಟಗಾರಿಕೆ ಉಪನಿರ್ದೇಶಕರು ತಿಳಿಸಿದ್ದಾರೆ.
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ