Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಮತದಾರರ ಪಟ್ಟಿ ಗಣಕೀಕರಣದಲ್ಲಿ ಶೇ.100ರಷ್ಟು ಪ್ರಗತಿ ಬಿಎಲ್‍ಓಗೆ ಸನ್ಮಾನ

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಗಣತಿ ನಮೂನೆಗಳ ಗಣಕೀಕರಣ ಪ್ರಕ್ರಿಯೆಯಲ್ಲಿ ಶೇ.
100ರಷ್ಟು ಸಾಧನೆ ಮಾಡಿದ ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ ಕಲ್ಕುಂಟೆ ಮತಗಟ್ಟೆಯ ಬಿಎಲ್‍ಒ ಕೆ.ಹೆಚ್. ಇಮಾಮ್ ಹುಸೇನ್ ಸಾಹೇಬ್ ಅವರನ್ನು ಚಿತ್ರದುರ್ಗ ನಗರಸಭೆ ಸಭಾಂಗಣದಲ್ಲಿ ಮಂಗಳವಾರ ಸನ್ಮಾನಿಸಲಾಯಿತು. 

ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ ಮತಗಟ್ಟೆ ಸಂಖ್ಯೆ 01ರ ಕಲ್ಕುಂಟೆ ಬಿಎಲ್‍ಓ ಆಗಿ ಕಾರ್ಯನಿರ್ವಹಿಸುತ್ತಿರುವ ಕೆ.ಹೆಚ್.ಇಮಾಮ್ ಹುಸೇನ್ ಸಾಹೇಬ್ ಅವರು ಗಣತಿ ನಮೂನೆಗಳ ಗಣಕೀಕರಣ ಕಾರ್ಯದಲ್ಲಿ ಶೇ.100ರಷ್ಟು ಪ್ರಗತಿ ಸಾಧಿಸಿದ್ದಾರೆ. ಅವರ ಈ ಅಪೂರ್ವ ಕರ್ತವ್ಯ ನಿಷ್ಠೆ ಗುರುತಿಸಿ ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ ಮತದಾರರ ನೊಂದಣಾಧಿಕಾರಿ ಹಾಗೂ ಉಪವಿಭಾಗಾಧಿಕಾರಿ ಡಾ.ಕೆ.ಜೆ.ಕಾಂತರಾಜ್ ಅವರು ಬಿಎಲ್‍ಓ ಇಮಾಮ್ ಹುಸೇನ್ ಅವರನ್ನು ಆತ್ಮೀಯವಾಗಿ ಸನ್ಮಾನಿಸಲಾಯಿತು.

Advertisement

ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ ಅತ್ಯಂತ ಜವಾಬ್ದಾರಿಯುತವಾದ ಕೆಲಸವಾಗಿದೆ. ಇಮಾಮ್ ಹುಸೇನ್ ಅವರು ನಿಗದಿತ ಅವಧಿಯೊಳಗೆ ಶೇ.100ರಷ್ಟು ಗಣಕೀಕರಣ ಕಾರ್ಯವನ್ನು ಯಶಸ್ವಿಯಾಗಿ ಪೂರ್ಣಗೊಳಿಸುವ ಮೂಲಕ ಮಾದರಿಯಾಗಿದ್ದಾರೆ ಎಂದು ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ ಮತದಾರರ ನೊಂದಣಾಧಿಕಾರಿ ಹಾಗೂ ಉಪವಿಭಾಗಾಧಿಕಾರಿ ಡಾ.ಕೆ.ಜೆ.ಕಾಂತರಾಜ್ ಮೆಚ್ಚುಗೆ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ತಹಶೀಲ್ದಾರ್ ಬಿ.ಎಂ.ಗೋವಿಂದರಾಜ್, ನಗರಸಭೆ ಪೌರಾಯುಕ್ತೆ ಲಕ್ಷ್ಮೀ, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಗಿರೀಶ್, ಬಿಆರ್‍ಸಿ ಸಂಪತ್ ಕುಮಾರ್ ಸೇರಿದಂತೆ ಮತ್ತಿತರರು ಇದ್ದರು.

 

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಸಾಪ ಮಾಜಿ ಜಿಲ್ಲಾಧ್ಯಕ್ಷ, ಶಿಕ್ಷಣತಜ್ಞ ಡಾ. ಕೆ.ಎಂ. ವೀರೇಶ್ ಹೃದಯಾಘಾತದಿಂದ ನಿಧನದುರ್ಗಕ್ಕೆ ಹರಿದು ಬಂದ ಭದ್ರೆ- ಸೆ.24ರಂದು ಮುಖ್ಯಮಂತ್ರಿಗಳಿಂದ ಗಂಗಾಪೂಜೆ,  ಬೃಹತ್ ಸಾರ್ವಜನಿಕ ಸಮಾರಂಭಆರ್.ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ 22ನೇ ಘಟಿಕೋತ್ಸವ ಮತ್ತು ಪದವಿ ಪ್ರದಾನ ಕಾರ್ಯಕ್ರಮನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಬೈಕ್ ಸವಾರ ಸಾವುಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಸಭೆ ಹೋರಾಟಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಾತಿನಿಧ್ಯ ಕಡಿಮೆ- ಚಿಕ್ಕಪ್ಪನಹಳ್ಳಿ ಷಣ್ಮುಖಕುಂಚಿಟಿಗ ನೌಕರರ ಸಂಘಕ್ಕೆ ಸದಸ್ಯರಾಗಿ: ಎಸ್.ಕೆ ಲಕ್ಷ್ಮಣ್ಚಳವಳಿ ನೆನಪಾಗಿ ಉಳಿದ ‘ತೆಂಕ-ಬಡಗ’ಅಂತಾರಾಷ್ಟ್ರೀಯ ಶಾಂತಿ ದಿನ – ಮನದ ದ್ವೇಷ ಕರಗಿದಾಗಲೇ ಜಗದ ಶಾಂತಿ ಅರಳುವುದು!ಗಣಪತಿ ಮೆರವಣಿಗೆ ವೇಳೆ ಗಲಾಟೆ 7 ಯುವಕರ ವಿರುದ್ಧ ಸುಮೋಟೋ ಪ್ರಕರಣ ದಾಖಲು