Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಿಎಂ ಮತ್ತು ಸರ್ಕಾರದ ಹೊಣೆಗೇಡಿತನದ ನಿರ್ಧಾರದಿಂದ 11 ಮಂದಿ ಸಾವು

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು :
ಕಳೆದ ಜೂನ್
4 ಕರ್ನಾಟಕದ ಇತಿಹಾಸದಲ್ಲಿ ಕರಾಳ ಅಧ್ಯಾಯದ ದಿನ. ಕ್ರಿಕೆಟ್ ಅಭಿಮಾನದ ಲಾಭ ಗಳಿಸುವ ಸ್ವಾರ್ಥದ ದುರಾಲೋಚನೆಯಿಂದ ಮುಖ್ಯಮಂತ್ರಿಗಳು ಮತ್ತು ಕರ್ನಾಟಕ ಕಾಂಗ್ರೆಸ್ ಸರ್ಕಾರ ತೆಗೆದುಕೊಂಡ ಬೇಜವಾಬ್ದಾರಿ ಹಾಗೂ ಹೊಣೆಗೇಡಿತನದ ನಿರ್ಧಾರದಿಂದಾಗಿ ಅಮಾಯಕ ಯುವಜೀವಗಳು ಬಲಿಯಾಗಿವೆ, ಜಮಾವಣೆಗೊಂಡಿದ್ದ ಸಾವಿರಾರು ಜನರು ನೋವು-ಸಂಕಷ್ಟವನ್ನು ಅನುಭವಿಸಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ತರಾಟೆ ತೆಗೆದುಕೊಂಡಿದ್ದಾರೆ.

ಕುಟುಂಬ ಬೆಳಗಬೇಕಿದ್ದ, ಉಜ್ವಲ ಭವಿಷ್ಯದ ಕನಸು ಕಂಡಿದ್ದ 11 ಯುವ ಜನರ ಸಾವು ಆ ಕುಟುಂಬಗಳ ನೆಮ್ಮದಿಯನ್ನು ಕಿತ್ತುಕೊಂಡು ಹೆತ್ತವರು ನಿತ್ಯ ಕಣ್ಣೀರಿಡುವಂತಾಗಿದೆ. ಇಡೀ ಘಟನೆಯಿಂದಾಗಿ ಈ ಕ್ಷಣಕ್ಕೂ ಇಡೀ ರಾಜ್ಯ ಮಮ್ಮಲ ಮರುಗುತ್ತಿದೆ. ಸಾವಿಗೀಡಾದ ಹನ್ನೊಂದು ಜನರ ಪೈಕಿ ಮನೋಜ್ ಎಂಬ ಯುವಕನ ಸಾವಿನ ಸುದ್ದಿ ಅರಗಿಸಿಕೊಳ್ಳಲಾಗದ ಆತನ ಅಜ್ಜಿ ಆಹಾರ ತ್ಯಜಿಸಿ ಪ್ರಾಣ ಬಿಟ್ಟಿರುವ ಸುದ್ದಿ ನೋವು ತರಿಸಿದೆ. ದುರಂತದಲ್ಲಿ ಅಮೂಲ್ಯ ಜೀವಗಳನ್ನು ಕಳೆದುಕೊಂಡ ಕುಟುಂಬ ಯಾವ ಪರಿಯಲ್ಲಿ ರೋದಿಸುತ್ತಿದೆ ಎಂಬುದನ್ನು ಮೃತ ದೇವೀರಮ್ಮನವರ ಸಾವು ಸಾಕ್ಷೀಕರಿಸುತ್ತಿದೆ.

ರಾಷ್ಟ್ರ- ಅಂತರಾಷ್ಟ್ರೀಯ ಮಟ್ಟದಲ್ಲಿ ಬೆಂಗಳೂರಿನ ಘಟನೆ ಕರ್ನಾಟಕದ ಘನತೆಗೆ ಕಪ್ಪು ಮಸಿ ಬಳಿದಿದೆ, ನಮ್ಮ ರಾಜ್ಯ ಅಸುರಕ್ಷತೆಯ ತಾಣ ಎಂಬ ಸಂದೇಶ ರವಾನೆಯಾಗಿದೆ. ಇಷ್ಟಾಗಿಯೂ ಸರ್ಕಾರಕ್ಕೂ ಈ ಘಟನೆಗೂ ಸಂಬಂಧವಿಲ್ಲ, ಸರ್ಕಾರ

ಈ ಘಟನೆಯ ಜವಾಬ್ದಾರಿಯನ್ನು ಹೊರಲಾಗದು ಎಂಬ ಮುಖ್ಯಮಂತ್ರಿಗಳ ಹೇಳಿಕೆ ಪಲಾಯನವಾದ ಹಾಗೂ ನಿರ್ಲಜ್ಜತನದ ಹೊಣೆಗೇಡಿತನವನ್ನು ಪ್ರತಿಬಿಂಬಿಸುತ್ತಿದೆ. ಅಧಿಕಾರಕ್ಕೆ ಅಂಟಿಕೊಳ್ಳುವ ಭಂಡತನದ ನಡೆ ಪರಂಪರೆಯ ಕರ್ನಾಟಕದ ನೈತಿಕ ರಾಜಕಾರಣವನ್ನು ಅವಮಾನಿಸುತ್ತಿರುವ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬಹಿರಂಗ ಪತ್ರ ಬರೆಯಲಾಗಿದೆ ಎಂದು ವಿಜಯೇಂದ್ರ ತಿಳಿಸಿದ್ದಾರೆ.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ