Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಡಿಜಿಟಲ್ ಅರೆಸ್ಟ್ ಮಾಡಿ ಸಾಫ್ಟ್‌ವೇರ್ ಉದ್ಯೋಗಿಯಿಂದ 11.83 ಕೋಟಿ ವಂಚನೆ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬೆಂಗಳೂರು ನಗರದ ಸಾಫ್ಟ್‌ವೇರ್ ಉದ್ಯೋಗಿ ಒಬ್ಬರನ್ನು ಒಂದು ತಿಂಗಳ ಕಾಲ ಡಿಜಿಟಲ್ ಅರೆಸ್ಟ್ ಮಾಡಿ 11.83 ಕೋಟಿ ರೂ. ದೋಚಿರುವ ಘಟನೆ ನಡೆದಿದೆ.


ರಾಜ್ಯದಲ್ಲಿ ಅತ್ಯಧಿಕ ಮೊತ್ತ ಕಳೆದುಕೊಂಡ ಡಿಜಿಟಲ್ ಅರೆಸ್ಟ್ ಪ್ರಕರಣ ಇದಾಗಿದೆ ಎನ್ನಲಾಗಿದೆ. ಹಣ ಕಳೆದುಕೊಂಡಿರುವ ವಿಜಯ್ ಕುಮಾರ್ ನೀಡಿರುವ ದೂರಿನನ್ವಯ ಬೆಂಗಳೂರು ಈಶಾನ್ಯ ವಿಭಾಗದ ಸಿಇಎನ್ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.

ಯಾವ ರೀತಿ ಮೋಸ ಮಾಡುತ್ತಾರೆ ವಂಚಕರು?
ಬೆಂಗಳೂರಿನ ಸಾಫ್ಟ್‌ವೇರ್‌ಕಂಪನಿಯಲ್ಲಿ ಸಾಫ್ಟ್‌ವೇರ್‌ ಇಂಜಿನಿಯರ್‌ ವಿಜಯ್‌ಕುಮಾರ್‌ಅವರಿಗೆ ನವೆಂಬರ್ 11ರಂದು ಬೆಳಗ್ಗೆ ಕರೆ ಮಾಡಿದ್ದ ಅಪರಿಚಿತ ವ್ಯಕ್ತಿಯೊಬ್ಬ ತನ್ನನ್ನು ಟೆಲಿಕಾಂ ರೆಗ್ಯುಲೇಟರಿ ಅಥಾರಿಟಿ ಆಫ್‌ಇಂಡಿಯಾ(ಟ್ರಾಯ್‌) ಪ್ರತಿನಿಧಿ ಎಂದು ಪರಿಚಯಿಸಿಕೊಂಡಿದ್ದ ಎನ್ನಲಾಗಿದೆ.


ನಿಮ್ಮ ಆಧಾರ್‌ಕಾರ್ಡ್‌ಗೆ ಲಿಂಕ್ ಆಗಿರುವ ಮೊಬೈಲ್‌ನಂಬರ್‌ನ್ನು ಕಾನೂನು ಬಾಹಿರ ಜಾಹೀರಾತು ಹಾಗೂ ಸಂದೇಶಗಳ ರವಾನೆಗೆ ಬಳಸಲಾಗಿದೆ. ಆ ನಂಬರ್‌ನಲ್ಲಿ ಸೇವೆಯನ್ನ ಸ್ಥಗಿತಗೊಳಿಸಲಾಗುತ್ತಿದೆ. ಹಾಗೂ ಮುಂಬೈನ ಕೊಲಾಬಾದ ಸೈಬರ್‌ಕ್ರೈಂ ಠಾಣೆಯಲ್ಲಿ ನಿಮ್ಮ ವಿರುದ್ಧ ಪ್ರಕರಣ ದಾಖಲಾಗಿದ್ದು, ನೀವು ವಿಚಾರಣೆ ಎದುರಿಸಬೇಕಾಗುತ್ತದೆ ಎಂದು ವಂಚಕ ಬೆದರಿಕೆ ಹಾಕಿದ್ದಾನೆ.

 ಈ ಕರೆ ಬಂದ ಕೆಲ ನಿಮಿಷಗಳಲ್ಲೇ ಮತ್ತೊರ್ವ ಅಪರಿಚಿತ ವ್ಯಕ್ತಿ ಕರೆ ಮಾಡಿ ಸ್ಕೈಪ್‌ವಿಡಿಯೋ ಕಾಲಿಂಗ್ ಆ್ಯಪ್‌ಡೌನ್‌ಲೋಡ್‌ಮಾಡಿಕೊಳ್ಳುವಂತೆ ಸೂಚಿಸಿದ್ದಾನೆ. ಅದರಂತೆ ವಿಜಯ್‌ಕುಮಾರ್‌ಅವರು ಆ್ಯಪ್‌ಡೌನ್‌ಲೋಡ್‌ಮಾಡಿಕೊಂಡಿದ್ದಾರೆ. ಬಳಿಕ ಪೊಲೀಸ್‌ಧಿರಿಸಿನಲ್ಲಿದ್ದ ವ್ಯಕ್ತಿಯೊಬ್ಬ ವಿಡಿಯೋ ಕರೆ ಮಾಡಿ, ನಾನು ಮುಂಬೈ ಪೊಲೀಸ್‌ಅಧಿಕಾರಿ ಎಂದು ಹೇಳಿದ್ದಾನೆ.

ಉದ್ಯಮಿ ನರೇಶ್‌ಗೋಯಲ್‌ಎಂಬುವರು ನಿಮ್ಮ ಆಧಾರ್‌ಕಾರ್ಡ್‌ಬಳಸಿ ಕೆನರಾ ಬ್ಯಾಂಕ್‌ನಲ್ಲಿ ಖಾತೆ ತೆರೆದು 6 ಕೋಟಿ ರೂ. ವಹಿವಾಟು ನಡೆಸಿದ್ದಾರೆ. ಆದ್ದರಿಂದ ಅಕ್ರಮ ಹಣ ವರ್ಗಾವಣೆ ಆರೋಪದಡಿ ಡಿಜಿಟಲ್‌ಅರೆಸ್ಟ್‌ಮಾಡುತ್ತಿರುವುದಾಗಿ ಬೆದರಿಸಿದ್ದಾನೆ. ಪ್ರಕರಣದ ತನಿಖೆ ಕುರಿತಂತೆ ಯಾರಿಗೂ ಮಾಹಿತಿ ನೀಡಬಾರದೆಂದು ವಿಜಯ್ ಕುಮಾರ್ ಸೂಚಿಸಿದ್ದಾನೆ.

ಪುನಃ ನವೆಂಬರ್ 25 ರಂದು ಸ್ಕೈಪ್‌ಮೂಲಕ ವಿಡಿಯೋ ಕರೆ ಮಾಡಿದ್ದ ವಂಚಕ, ಸುಪ್ರೀಂ ಕೋರ್ಟ್‌ನಲ್ಲಿ ನಿಮ್ಮ ವಿರುದ್ಧದ ಪ್ರಕರಣ ವಿಚಾರಣೆ ನಡೆಯುತ್ತಿದೆ. ನಾವು ಹೇಳಿದಂತೆ ಕೇಳದಿದ್ದರೆ ನಿಮ್ಮ ಕುಟುಂಬ ಸದಸ್ಯರನ್ನ ಸಹ ಬಂಧಿಸಬೇಕಾಗುತ್ತದೆ. ತನಿಖೆಯ ಭಾಗವಾಗಿ ನಿಮ್ಮ ಬ್ಯಾಂಕ್‌ಖಾತೆಯನ್ನ ಪರಿಶೀಲಿಸಬೇಕಿದ್ದು, ಹಣ ವರ್ಗಾವಣೆ ಮಾಡಬೇಕು ಎಂದು ಸೂಚಿಸಿದ್ದಾನೆ.

ವಂಚಕನ ಸೂಚನೆಯಂತೆ ವಂಚಕರು ನೀಡಿದ್ದ ಬ್ಯಾಂಕ್‌ಖಾತೆಗೆ ವಿಜಯ್ ಕುಮಾರ್ 75 ಲಕ್ಷ ರೂ. ಬಳಿಕ ಮತ್ತೊಂದು ಖಾತೆಗೆ 3.41 ಕೋಟಿ ರೂ. ವರ್ಗಾಯಿಸಿದ್ದಾರೆ. ಇದೇ ರೀತಿ ಡಿಸೆಂಬರ್ 12ರ ವರೆಗೂ ಪ್ರತಿನಿತ್ಯ ವಿಜಯ್‌ಕುಮಾರ್‌ಗೆ ಕರೆ ಮಾಡಿ ಬಂಧನದ ಬೆದರಿಕೆಯೊಡ್ಡಿರುವ ಆರೋಪಿಗಳು ಒಟ್ಟು 11.83 ಕೋಟಿ ರೂ.ಗಳನ್ನು ಬೇರೆ ಬೇರೆ ಖಾತೆಗಳಿಗೆ ವರ್ಗಾಯಿಸಿಕೊಂಡು ದೊಡ್ಡ ಮಟ್ಟದಲ್ಲಿ ವಂಚಿಸಿದ್ದಾರೆ.

ಬ್ಯಾಂಕ್‌ಖಾತೆಯಲ್ಲಿದ್ದ ಪೂರಾ ಹಣ ಖಾಲಿಯಾದ ಬಳಿಕ ವಂಚಕರು ಕಿರುಕುಳ ನೀಡುವುದನ್ನು ಮುಂದುವರೆಸಿದ್ದು ಸೈಬರ್‌ವಂಚಕರ ಕೃತ್ಯವೆಂಬುದು ವಿಜಯ್ ಕುಮಾರ್ ಅವರಿಗೆ ಅರಿವಾಗಿದೆ. ನಂತರ ಈಶಾನ್ಯ ವಿಭಾಗದ ಸಿಇಎನ್ ಠಾಣೆಗೆ ವಿಜಯ್ ಕುಮಾರ್ ದೂರು ನೀಡಿದ್ದಾರೆ. ವಂಚಕರು ಹಣ ವರ್ಗಾಯಿಸಿಕೊಂಡಿರುವ ಖಾತೆಗಳ ವಿವರ ಸಂಗ್ರಹಿಸಲಾಗುತ್ತಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

11 ತಿಂಗಳಲ್ಲಿ 491 ಡಿಜಿಟಲ್‌ಅರೆಸ್ಟ್‌ಪ್ರಕರಣ: ಡಿಜಿಟಲ್‌ಅರೆಸ್ಟ್‌ಪ್ರಕರಣಗಳು ದಾಖಲಾಗಿರುವ ಪಟ್ಟಿಯಲ್ಲಿ ಕರ್ನಾಟಕವು ದೇಶದಲ್ಲೇ 2ನೇ ಸ್ಥಾನ ಪಡೆದಿದೆ. 2024ರ ನವೆಂಬರ್‌ಅಂತ್ಯಕ್ಕೆ ರಾಜ್ಯದಲ್ಲಿ 641 ಡಿಜಿಟಲ್‌ಅರೆಸ್ಟ್‌ಪ್ರಕರಣಗಳು ವರದಿಯಾಗಿದ್ದು, 109 ಕೋಟಿ ರೂ. ವಂಚಕರ ಪಾಲಾಗಿದೆ. ಆ ಪೈಕಿ ಬೆಂಗಳೂರಿನಲ್ಲಿ 480 ಪ್ರಕರಣಗಳು ವರದಿಯಾಗಿದ್ದು 42.4 ಕೊಟಿ ರೂ. ವಂಚಿಸಲಾಗಿದೆ. ಕೇವಲ 9 ಕೋಟಿ ರೂ. ಮಾತ್ರ ವಾಪಸ್ ಜಪ್ತಿ ಮಾಡುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ