Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪಾಕಿಸ್ತಾನದ ಗುಂಡಿನ ದಾಳಿಗೆ 15 ಮಂದಿ ಸಾವು, 43 ಮಂದಿಗೆ ಗಾಯ

Advertisement
ಚಂದ್ರವಳ್ಳಿ ನ್ಯೂಸ್, ನವದೆಹಲಿ:
ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿನ ಒಂಬತ್ತು ಭಯೋತ್ಪಾದಕ ನೆಲೆಗಳ ಮೇಲೆ ಭಾರತ ಕ್ಷಿಪಣಿ ದಾಳಿ ನಡೆಸಿದ ನಂತರ ಪಾಕಿಸ್ತಾನ ಪಡೆಗಳು ಕದನ ವಿರಾಮ ಉಲ್ಲಂಘಿಸಿ ಭಾರತೀಯ ಗಡಿ ಗ್ರಾಮಗಳ ಮೇಲೆ ದಾಳಿ ಮಾಡುತ್ತಿದ್ದು ಭಾರತೀಯ ಸೇನೆಯು ಸಮಾನ ಪ್ರಮಾಣದಲ್ಲಿ ಶೆಲ್ ದಾಳಿ ಮಾಡುತ್ತಿದೆ.


ಗಡಿ ನಿಯಂತ್ರಣ ರೇಖೆ ಮತ್ತು ಜಮ್ಮು-ಕಾಶ್ಮೀರದ ಅಂತಾರಾಷ್ಟ್ರೀಯ ಗಡಿಗಳಲ್ಲಿ ಪಾಕಿಸ್ತಾನ ಸೈನಿಕರು ಮಾಡುತ್ತಿರುವ ಫಿರಂಗಿ ದಾಳಿ ಹಾಗೂ ಗುಂಡಿನ ಚಕಮಕಿಯಲ್ಲಿ ಭಾರತ ದೇಶದ ನಾಲ್ವರು ಮಕ್ಕಳು ಮತ್ತು ಒಬ್ಬರು ಯೋಧರು ಸೇರಿದಂತೆ ಕನಿಷ್ಠ 15 ಜನರು ಮೃತಪಟ್ಟು 43 ಜನರು ಗಾಯಗೊಂಡಿದ್ದಾರೆ ಎನ್ನಲಾಗಿದೆ.

ಪಾಕಿಸ್ತಾನದ ಅನಿಯಂತ್ರಿತ ಶೆಲ್ ದಾಳಿಯು ಗುರುದ್ವಾರ ಸೇರಿದಂತೆ ಮನೆಗಳು, ವಾಹನಗಳು ಮತ್ತು ವಿವಿಧ ಕಟ್ಟಡಗಳನ್ನು ನಾಶಪಡಿಸಿದೆ. ಗಡಿ ನಿವಾಸಿಗಳಲ್ಲಿ ಭೀತಿಯನ್ನು ಸೃಷ್ಟಿಸಿದೆ, ನೂರಾರು ನಿವಾಸಿಗಳು ಭೂಗತ ಬಂಕರ್‌ಗಳಲ್ಲಿ ಆಶ್ರಯ ಪಡೆಯಬೇಕಾಗಿದೆ ಅಥವಾ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಗೊಳ್ಳಬೇಕಾಗಿದೆ.
ಜಮ್ಮು ಪ್ರದೇಶದ ರಾಜೌರಿ ಮತ್ತು ಉತ್ತರ ಕಾಶ್ಮೀರದ ಬಾರಾಮುಲ್ಲಾ ಮತ್ತು ಕುಪ್ವಾರಾ ಸೇರಿದಂತೆ ತೀವ್ರ ಹಾನಿಗೊಳಗಾದ ಜಿಲ್ಲೆ ಪೂಂಚ್ ಗಳಲ್ಲಿ
13 ಮಂದಿ ಮೃತಪಟ್ಟು 42 ಮಂದಿ ಗಾಯಗೊಂಡಿದ್ದಾರೆ. ಶೆಲ್ ದಾಳಿಯ ಸಮಯದಲ್ಲಿ ಭಾರತೀಯ ಸೇನಾ ಸೈನಿಕನೊಬ್ಬರು ಹುತಾತ್ಮರಾಗಿದ್ದಾರೆ. ಯೋಧರನ್ನು 5 ಫೀಲ್ಡ್ ರೆಜಿಮೆಂಟ್‌ನ ಲ್ಯಾನ್ಸ್ ನಾಯಕ್ ದಿನೇಶ್ ಕುಮಾರ್ ಎಂದು ಗುರುತಿಸಲಾಗಿದೆ.

ಬಾಲಕೋಟ್, ಮೆಂಧರ್, ಮಂಕೋಟ್, ಕೃಷ್ಣ ಘಾಟಿ, ಗುಲ್ಪುರ್, ಕೆರ್ನಿ ಮತ್ತು ಪೂಂಚ್ ಜಿಲ್ಲಾ ಕೇಂದ್ರಗಳು ಸೇರಿದಂತೆ ಪೂಂಚ್‌ನ ಎಲ್‌ಒಸಿ ಉದ್ದಕ್ಕೂ ಶೆಲ್ ದಾಳಿ ವರದಿಯಾಗಿದ್ದು ಇದರ ಪರಿಣಾಮವಾಗಿ ಡಜನ್ ಗಟ್ಟಲೆ ಮನೆಗಳು ಮತ್ತು ವಾಹನಗಳು ಹಾನಿಗೊಳಗಾಗಿವೆ.

ಬಾರಾಮುಲ್ಲಾ ಜಿಲ್ಲೆಯ ಉರಿ ಸೆಕ್ಟರ್‌ನಲ್ಲಿ ಹತ್ತು ಜನರು ಗಾಯಗೊಂಡಿದ್ದಾರೆ ಮತ್ತು ರಾಜೌರಿ ಜಿಲ್ಲೆಯಲ್ಲಿ ಮೂವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅನಿಯಂತ್ರಿತ ಗುಂಡಿನ ದಾಳಿ ಮತ್ತು ಶೆಲ್ ದಾಳಿಯಲ್ಲಿ ಮೂವರು ಅಮಾಯಕ ನಾಗರಿಕರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ಅವರು ಹೇಳಿದರು.
ಪಾಕಿಸ್ತಾನದ ಶೆಲ್ ದಾಳಿಯಲ್ಲಿ ಗಾಯಗೊಂಡ ನಾಗರಿಕರು ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಉರಿಯಲ್ಲಿರುವ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.


ಬಾರಾಮುಲ್ಲಾ ಜಿಲ್ಲೆಯ ಉರಿ ಸೆಕ್ಟರ್‌ನಲ್ಲಿ ಗಡಿಯಾಚೆಗಿನ ಶೆಲ್ ದಾಳಿಯಲ್ಲಿ ಐವರು ಮಕ್ಕಳು ಸೇರಿದಂತೆ ಹತ್ತು ಜನರು ಗಾಯಗೊಂಡಿದ್ದಾರೆ. ರಾಜೌರಿ ಜಿಲ್ಲೆಯಲ್ಲಿ ಮೂವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ, ಕುಪ್ವಾರಾ ಜಿಲ್ಲೆಯ ಕರ್ನಾ ಸೆಕ್ಟರ್‌ನಲ್ಲಿ ಶೆಲ್ ದಾಳಿಯಿಂದಾಗಿ ಹಲವಾರು ಮನೆಗಳು ಬೆಂಕಿಗೆ ಆಹುತಿಯಾಗಿವೆ.

 ಮೃತರನ್ನು ಬಲ್ವಿಂದರ್ ಕೌರ್ ಅಲಿಯಾಸ್ ರುಬಿ (33), ಮೊಹಮ್ಮದ್ ಜೈನ್ ಖಾನ್ (10), ಅವರ ಅಕ್ಕ ಜೋಯಾ ಖಾನ್ (12), ಮೊಹಮ್ಮದ್ ಅಕ್ರಮ್ (40), ಅಮ್ರಿಕ್ ಸಿಂಗ್ (55), ಮೊಹಮ್ಮದ್ ಇಕ್ಬಾಲ್ (45), ರಂಜೀತ್ ಸಿಂಗ್ (48), ಶಕೀಲಾ ಬಿ (40), ಅಮರ್‌ಜೀತ್ ಸಿಂಗ್ (47), ಮರಿಯಮ್ ಖಾಟೂನ್ (7), ವಿಹಾನ್ ಭಾರ್ಗವ್ (13) ಮತ್ತು ಮೊಹಮ್ಮದ್ ರಫಿ (40) ಮತ್ತು ಸೇನೆಯ ಲ್ಯಾನ್ಸ್ ನಾಯಕ್ ಎಂದು ಅಧಿಕಾರಿಗಳು ಮೃತರ ಗುರುತು ಪತ್ತೆ ಮಾಡಿದ್ದಾರೆ.

ಭಯೋತ್ಪಾದಕ ಮೂಲ ಸೌಕರ್ಯದ ಮೇಲೆ ಈ ನಿಖರ ದಾಳಿಗಳಲ್ಲಿ ಕ್ಷಿಪಣಿಗಳನ್ನು ಬಳಸಲಾಗಿದೆ. ಪಾಕಿಸ್ತಾನದ ಸೇನೆಯು ಆರು ಸ್ಥಳಗಳನ್ನು ಗುರಿಯಾಗಿಸಿಕೊಂಡಿದೆ. ಇವುಗಳಲ್ಲಿ ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ಬಹಾವಲ್ಪುರ, ಜೈಶ್-ಎ-ಮೊಹಮ್ಮದ್ ಭಯೋತ್ಪಾದಕ ಕೇಂದ್ರ ಮತ್ತು ಲಷ್ಕರ್-ಎ-ತೈಬಾದ ಪ್ರಧಾನ ಕಚೇರಿ ಮುರಿಡ್ಕೆ ಸೇರಿವೆ.

 

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ