Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನ.15 ರಿಂದ 19 ರವರೆಗೆ ಧರ್ಮಸ್ಥಳದ ಲಕ್ಷದೀಪೋತ್ಸವ

Advertisement
ಚಂದ್ರವಳ್ಳಿ ನ್ಯೂಸ್, ಬೆಳ್ತಂಗಡಿ:
ಕಾರ್ತಿಕಮಾಸದ ವೇಳೆ ಧರ್ಮಸ್ಥಳದಲ್ಲಿ ನಡೆಯುವ ಲಕ್ಷದೀಪೋತ್ಸವ ಕಾರ್ಯಕ್ರಮ ಇದೇ ತಿಂಗಳ ನವೆಂಬರ್.15 ರಿಂದ 19 ರವರೆಗೆ ನಡೆಯಲಿವೆ.


ಅಲ್ಲದೆ ನವೆಂಬರ್-18ರಂದು ಮಂಗಳವಾರ ಸಂಜೆ 5ರಿಂದ ಸರ್ವಧರ್ಮ ಸಮ್ಮೇಳನದ 93ನೇ ಅಧಿವೇಶನ ನಡೆಯಲಿದೆ.
ಕರ್ನಾಟಕ ಸರ್ಕಾರದ ಬೃಹತ್​​​​​ ಮತ್ತು ಮಧ್ಯಮ ಕೈಗಾರಿಕೆಗಳು ಹಾಗೂ ಮೂಲಸೌಕರ್ಯಾಭಿವೃದ್ಧಿ ಇಲಾಖೆ ಸಚಿವ ಡಾ. ಬಿ.ಎಂ. ಪಾಟೀಲ್​ ಸರ್ವಧರ್ಮ ಸಮ್ಮೇಳನದ
93ನೇ ಅಧೀವೇಶನ ಉದ್ಘಾಟಿಸಲಿದ್ದಾರೆ.

ಹರಿಹರಪುರದ ಪೂಜ್ಯ ಸ್ವಯಂಪ್ರಕಾಶ್​ ಸಚ್ಚಿದಾನಂದ ಸರಸ್ವತೀ ಸ್ವಾಮೀಜಿ ಅಧ್ಯಕ್ಷತೆ ವಹಿಸುವರು. ಪ್ರಜಾವಾಣಿ ಪತ್ರಿಕೆ ಮುಖ್ಯ ಉಪಸಂಪಾದಕ ಎ. ಸೂರ್ಯಪ್ರಕಾಶ್ ಪಂಡಿತ್ ಮತ್ತು ಖ್ಯಾತ ಅಂಕಣಕಾರ ತನ್ವೀರ್ ಅಹಮ್ಮದ್ ಉಲ್ಲಾ ಉಪನ್ಯಾಸ ನೀಡುವರು.


ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ರಾತ್ರಿ ಗಂಟೆ 8.30 ರಿಂದ ಚೆನೈನ ಶ್ರೀದೇವಿ ನೃತ್ಯಾಲಯದ ಕಲಾವಿದರಿಂದ ವಿದುಷಿ ಡಾ. ಶೀಲಾ ಉನ್ನಿಕೃಷ್ಣನ್ ನಿರ್ದೇಶನದಲ್ಲಿ ಭರತನಾಟ್ಯ ನೃತ್ಯ ಪ್ರದರ್ಶನವಿದೆ.

ರಾತ್ರಿ ಕಂಚಿಮಾರು ಕಟ್ಟೆ ಉತ್ಸವ ನಡೆಯಲಿದೆ. ನ. 19 ರಂದು ಬುಧವಾರ ಸಂಜೆ 5ಗಂಟೆಗೆ ಸಾಹಿತ್ಯ ಸಮ್ಮೇಳನದ 93ನೇ ಅಧೀವೇಶನವನ್ನು ಹಿರಿಯ ಸಾಹಿತಿ ಮತ್ತು ಅಂಕಣಕಾರ ಪ್ರೊ. ಪ್ರೇಮಶೇಖರ ಉದ್ಘಾಟಿಸುವರು. ವಿಶ್ವವಾಣಿ ಪತ್ರಿಕೆ ಮುಖ್ಯ ಸಂಪಾದಕ ವಿಶ್ವೇಶ್ವರ ಭಟ್​ ಅಧ್ಯಕ್ಷತೆ ವಹಿಸುವರು.

ಸಂಗೀತ ಕಾರ್ಯಕ್ರಮ:
ಖ್ಯಾತ ಲೇಖಕಿ ಶಾಂತಾ ನಾಗಮಂಗಲ
, ವಿವೇಕಹಂಸ ಮಾಸ ಪತ್ರಿಕೆಯ ಸಂಪಾದಕ ಡಾ. ರಘು ವಿ. ಮತ್ತು ಧಾರವಾಡದ ಖ್ಯಾತ ಸಾಹಿತಿ ಡಾ. ಬಿ.ಎಂ. ಶರಭೇಂದ್ರ ಸ್ವಾಮಿ ಉಪನ್ಯಾಸ ನೀಡುವರು.

ಸಾಂಸ್ಕೃತಿಕ ಕಾರ್ಯಕ್ರಮದ ನಿಮಿತ್ತ ರಾತ್ರಿ ಗಂಟೆ 8.30 ರಿಂದ ಬೆಂಗಳೂರಿನ ರಾಹುಲ್ ವೆಲ್ಲಾಲ್ ಮತ್ತು ಬಳಗದವರಿಂದ ಸಂಗೀತ ಕಾರ್ಯಕ್ರಮ ನಡೆಯಲಿದೆ.

ವಿಶೇಷ ಬಸ್​ ವ್ಯವಸ್ಥೆ:
ರಾತ್ರಿ ಗಂಟೆ
9.45 ರಿಂದ ದಕ್ಷಯಜ್ಞ ಯಕ್ಷಗಾನ ಪ್ರದರ್ಶನ ಆಯೋಜಿಸಲಾಗಿದೆ. ರಾತ್ರಿ 12 ಗಂಟೆ ಬಳಿಕ ಗೌರಿಮಾರುಕಟ್ಟೆ ಉತ್ಸವದೊಂದಿಗೆ ಲಕ್ಷದೀಪೋತ್ಸವ ನಡೆಯಲಿದೆ.

ನಾಡಿನೆಲ್ಲೆಡೆಯಿಂದ ಲಕ್ಷಕ್ಕೂ ಮಿಕ್ಕಿ ಭಕ್ತಾದಿಗಳು ಆಗಮಿಸಲಿದ್ದು, ನ. 20 ರ ಗುರುವಾರ ಬೆಳಗಿನ ಜಾವ ಲಕ್ಷದೀಪೋತ್ಸವ ಸಮಾಪನಗೊಳ್ಳುತ್ತದೆ. ರಾಜ್ಯದ ವಿವಿಧ ಭಾಗಗಳಿಂದ ಚೆಂಡೆ, ಕೊಂಬು, ಕಹಳೆ, ವಾಲಗ, ನಾಗಸ್ವರ ಮೊದಲಾದ ಸಾವಿರಾರು ಕಲಾವಿದರು ರಾತ್ರಿ ಇಡೀ ಕಲಾಸೇವೆ ಮಾಡುವರು. ರಾಜ್ಯದ ವಿವಿಧ ಊರುಗಳಿಂದ ಧರ್ಮಸ್ಥಳಕ್ಕೆ ಕೆ.ಎಸ್.ಆರ್.ಟಿ.ಸಿ. ವಿಶೇಷ ಬಸ್ ಸೌಲಭ್ಯ ಕಲ್ಪಿಸಿದೆ.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ