Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬೆಂಗಳೂರಿನಲ್ಲಿ 17ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ-ಸಿಎಂ

Advertisement
 ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬೆಂಗಳೂರಿನಲ್ಲಿ 17ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವವನ್ನು ಜನವರಿ 29ರಿಂದ ಫೆಬ್ರವರಿ 6ರ ವರೆಗೆ ನಡೆಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ಪೂರ್ವ ಭಾವಿ ಸಭೆಯ ಬಳಿಕ ನಡೆದ ಪತ್ರಿಕಾಗೋಷ್ಠಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾತನಾಡಿದರು.


ಪ್ರಕಾಶ್ ರಾಜ್ ರಾಯಭಾರಿ-
17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ರಾಯಭಾರಿಯಾಗಿ ಹಿರಿಯ ಚಲನಚಿತ್ರ ಕಲಾವಿದರು, ನಿರ್ದೇಶಕರು ನಿರ್ಮಾಪಕರಾದ ಪ್ರಕಾಶ್ ರಾಜ್ ಅವರನ್ನು ನೇಮಿಸಲಾಗಿದೆ ಎಂದು ಸಿಎಂ ತಿಳಿಸಿದರು.

ಅಂತರಾಷ್ಟ್ರೀಯ ಚಲನಚಿತ್ರೋತ್ಸವದ ಉದ್ಘಾಟನೆ ವಿಧಾನಸೌಧದ ಮುಂಭಾಗದಲ್ಲಿ ಭವ್ಯ ಮೆಟ್ಟಿಲುಗಳ ಮೇಲೆ ನಡೆಯಲಿದೆ. ಈ ಬಾರಿಯ  ಚಲನಚಿತ್ರೋತ್ಸವದಲ್ಲಿ ಮಹಿಳಾ ಸಬಲೀಕರಣ ಕುರಿತಾದ ಥೀಮ್ ಇರಲಿದೆ.

ರಾಜಾಜಿನಗರದ ಲುಲುಮಾಲ್‌ನಲ್ಲಿರುವ ಸಿನಿ ಪೊಲಿಸ್‌ನ 11 ಸ್ಕ್ರೀನ್‌ಗಳಲ್ಲಿ ಚಿತ್ರೋತ್ಸವದ ಚಲನಚಿತ್ರಗಳ ಪ್ರದರ್ಶನ ನಡೆಯಲಿದೆ ಎಂದು ಸಿಎಂ ಮಾಹಿತಿ ನೀಡಿದರು.

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಏಷಿಯನ್, ಭಾರತೀಯ ಮತ್ತು ಕನ್ನಡ ಸಿನಿಮಾ ಸ್ಪರ್ಧಾತ್ಮಕ ವಿಭಾಗಗಳಿಗೆ ಚಲನಚಿತ್ರಗಳ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಇದಕ್ಕೆ ಉತ್ತಮ ಸ್ಪಂದನೆ ದೊರಕಿದೆ. ಈ ಮೂರು ಸ್ಪರ್ಧಾ ವಿಭಾಗಗಳಿಗೆ ಇದುವರೆಗೆ 110ಕ್ಕೂ ಹೆಚ್ಚು ಚಲನಚಿತ್ರಗಳು ಸಲ್ಲಿಕೆಯಾಗಿವೆ.

ಚಲನಚಿತ್ರಗಳ ಸ್ಪರ್ಧಾತ್ಮಕ ವಿಭಾಗಗಳ ಅರ್ಜಿ ಸಲ್ಲಿಕೆಗೆ ಡಿಸೆಂಬರ್ 31, 2025 ಕಡೆಯ ದಿನಾಂಕವಾಗಿರುತ್ತದೆ.  17ನೇ ಅಂತರ ರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ರಾಜಾಜಿನಗರದ ಲುಲು ಮಾಲ್, ಜೊತೆಗೆ ಡಾ. ರಾಜ್ ಕುಮಾರ್ ಭವನ, ಕಲಾವಿದರ ಸಂಘ, ಚಾಮರಾಜಪೇಟೆ ಹಾಗೂ ಬನಶಂಕರಿಯಲ್ಲಿರುವ ಸುಚಿತ್ರ ಫಿಲಂ ಸೊಸೈಟಿ ಚಿತ್ರಮಂದಿರಗಳಲ್ಲೂ ಚಲನಚಿತ್ರಗಳ ಪ್ರದರ್ಶನವಿರಲಿದೆ.

ಕನ್ನಡ ಮತ್ತು ಭಾರತೀಯ ಚಿತ್ರಗಳು ಸೇರಿದಂತೆ ಒಟ್ಟಾರೆ 60ಕ್ಕೂ ಹೆಚ್ಚು ದೇಶಗಳ 200 ಚಲನಚಿತ್ರಗಳ, 400ಕ್ಕೂ ಹೆಚ್ಚು ಪ್ರದರ್ಶನಗಳಿರಲಿವೆ ಎಂದು ಸಿದ್ದರಾಮಯ್ಯ ಹೇಳಿದರು.

ವಿಶ್ವದ ಪ್ರತಿಷ್ಠಿತ ಚಲನಚಿತ್ರೋತ್ಸವಗಳಲ್ಲಿ ಪಾಲ್ಗೊಂಡು ವಿವಿಧ ಪ್ರಶಸ್ತಿಗಳನ್ನು ಪಡೆದ ಮತ್ತು ಜನಮನ್ನಣೆಗಳಿಸಿದ ದೇಶ-ವಿದೇಶದ ಅತ್ಯುತ್ತಮ ಚಲನಚಿತ್ರಗಳು 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಭಾಗವಹಿಸುತ್ತಿವೆ.

ಕಾನ್ಸ್ (ಫ್ರಾನ್ಸ್), ಬರ್ಲಿನ್ (ಜರ್ಮನಿ, ವೆನಿಸ್ (ಇಟಲಿ), ಕಾರ್ಲೋವಿ ವೇರಿ (ಜೆಕ್‌ರಿಪಬ್ಲಿಕ್, ಲೊಕಾರ್ನೂ (ಸಿಟ್ಟರ್ಲೆಂಡ್), ರಾಟರ್‌ಡ್ಯಾಮ್ (ನೆದರ್ ಲ್ಯಾಂಡ್), ಬೂಸಾನ್ (ದಕ್ಷಿಣ ಕೂರಿಯಾ), ಟೊರಂಟೋ (ಕೆನಡಾ) ದೇಶಗಳ ಚಿತ್ರೋತ್ಸವದಲ್ಲಿ ಭಾಗವಹಿಸಿ ಪ್ರಶಸ್ತಿ, ಮೆಚ್ಚುಗೆ ಪಡೆದ ಚಲನಚಿತ್ರಗಳು ಬೆಂಗಳೂರು ಚಿತ್ರೋತ್ಸವದಲ್ಲಿ ಒಂದೇ ಕಡೆ ಸಿನಿಮಾ ಪ್ರಿಯರಿಗೆ ವೀಕ್ಷಿಸಲು ದೊರೆಯಲಿವೆ ಎಂದರು.



ಜೊತೆಗೆ ಈ ಬಾರಿಯ ಆಸ್ಕರ್ ಪ್ರಶಸ್ತಿಗೆ ಶಾರ್ಟ್ ಲಿಸ್ಟ್ ಆಗಿರುವ ವಿವಿಧ ದೇಶದ ಅತ್ಯುತ್ತಮ ಚಲನಚಿತ್ರಗಳು ಸಹ ನಮ್ಮ ಚಿತ್ರೋತ್ಸವದಲ್ಲಿ ಪ್ರದರ್ಶನಗೊಳ್ಳಲಿವೆ.

ಪೋಲಿಷ್ ಕಲ್ಪರಲ್ ಸೆಂಟರ್, ನವದೆಹಲಿ, ಗೋಥೆ ಇನ್ಸಿಟ್ಯೂಟ್ - ಮ್ಯಾಕ್ಸ್ ಮುಲ್ಲರ್ ಭವನ, ಬೆಂಗಳೂರು, ಅಲಿಯಾನ್ಸ್ ಫ್ರಾಂಸೇ - ಫ್ರೆಂಚ್ ಇನ್ಸಿಟ್ಯೂಟ್ ಹಾಗೂ ರಾಯಲ್ ಥೈಲ್ಯಾಂಡ್ ಕಾನ್ಸುಲೇಟ್‌ನವರು ಅವರ ದೇಶಗಳ ಅತ್ಯುತ್ತಮ ಚಲನಚಿತ್ರಗಳನ್ನು ಚಿತ್ರೋತ್ಸವದಲ್ಲಿ ಪ್ರದರ್ಶನಕ್ಕೆ ನೀಡುತ್ತಿದ್ದಾರೆ.

ಹಾಗೆಯೇ ಪೋಲಿಷ್ ಕಲ್ಬರಲ್ ಸೆಂಟರ್ ಸಹಯೋಗದಲ್ಲಿ ಪೊಲೆಂಡ್‌ನ ಖ್ಯಾತ ನಿರ್ದೇಶಕರಾದ ಅಂದ್ರೆ ವಾಜ್ಞಾ ಅವರ ಶತಮಾನೋತ್ಸವ ಸ್ಮರಣಾರ್ಥವಾಗಿ ಅವರ ಆಯ್ದ ಚಲನಚಿತ್ರಗಳ ವಿಶೇಷ ಪುನರಾವಲೋಕನ ಈ ಬಾರಿ ಚಿತ್ರೋತ್ಸವದಲ್ಲಿ ಆಯೋಜಿಸಲಾಗಿದೆ. ಇದರೊಂದಿಗೆ ಅಲಿಯಾನ್ಸ್ ಫ್ರಾಂಸೇ ಬೆಂಗಳೂರು ಹಾಗೂ ಫ್ರೆಂಚ್ ಇನ್ಸಿಟ್ಯೂಟ್ ಇನ್ ಇಂಡಿಯಾ ಸಹಯೋಗದಲ್ಲಿ ಆಫ್ರಿಕಾ ಸಿನಿಮಾಗಳ ಇತಿಹಾಸವನ್ನು ದಾಖಲಿಸುವ ವಿಶೇಷ ಚಲನಚಿತ್ರಗಳ ಸರಣಿಯನ್ನೂ ಈ ವರ್ಷದ ಚಿತ್ರೋತ್ಸವದಲ್ಲಿ ಪ್ರದರ್ಶಿಸಲಾಗುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ಈ ಬಾರಿ ಚಿತ್ರೋತ್ಸವದ ಫಿಲಂ ಅಕಾಡೆಮಿಕ್ ಕಾರ್ಯಕ್ರಮಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ನೋಂದಾಯಿತ ಪ್ರತಿನಿಧಿಗಳು ಭಾಗವಹಿಸಲು ಅನುಕೂಲವಾಗುವಂತೆ ಚಿತ್ರೋತ್ಸವದ ಪ್ರಧಾನ ಕೇಂದ್ರದಲ್ಲಿ ವಿಶೇಷ ವೇದಿಕೆ ಇರಲಿದೆ.

ಇದೇ ವೇದಿಕೆಯ ಆವರಣದಲ್ಲಿ 91 ವರ್ಷಗಳ ವರ್ಣ ರಂಜಿತ, ಸ್ಮರಣೀಯ ಸಿನಿಮಾ ಸಂಸ್ಕೃತಿಯ ಇತಿಹಾಸವಿರುವ ಕನ್ನಡ ಚಿತ್ರರಂಗದ ಮೈಲಿಗಲ್ಲುಗಳನ್ನು ಬಿಂಬಿಸುವ ವೈವಿಧ್ಯಮಯ ಛಾಯಾಚಿತ್ರ ಪ್ರದರ್ಶನವನ್ನು ಸಹ ಏರ್ಪಡಿಸಲಾಗುತ್ತದೆ.


ಅನುದಾನ:
2025-26
ನೇರ ಸಾಲಿನ 17ನೇ ಅಂತರರಾಷ್ಟ್ರೀಯ ಚಲನ ಚಿತ್ರೋತ್ಸವ ಏರ್ಪಡಿಸಲು 7 ಕೋಟಿ ರೂಪಾಯಿಗಳ ಅಗತ್ಯವಿರುವ ಅನುದಾನ ಒದಗಿಸಲಾಗಿದೆ.
ಸಮಾರೋಪ ಸಮಾರಂಭ ಅತ್ಯುತ್ತಮ ಚಲನಚಿತ್ರಗಳಿಗೆ ಪ್ರಶಸ್ತಿ, ಜೀವಮಾನ ಸಾಧನೆ ಪ್ರಶಸ್ತಿ ನೀಡಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.


ಪೂರ್ವಭಾವಿ ಸಭೆಯಲ್ಲಿ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸಾಧು ಕೋಕಿಲ, ವಾರ್ತಾ ಇಲಾಖೆ ಕಾರ್ಯದರ್ಶಿ ಬಿ.ಬಿ.ಕಾವೇರಿ, ಆಯುಕ್ತರಾದ ಹೇಮಂತ್ ನಿಂಬಾಳ್ಕರ್, ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್, ಆರ್ಥಿಕ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಿತೇಶ್ ಕುಮಾರ್ ಸಿಂಗ್ ಹಾಗೂ ಅಕಾಡೆಮಿ ಸದಸ್ಯರು, ಸಂಘಟನಾ ಸಮಿತಿ ಸದಸ್ಯರು, ಚಲನಚಿತ್ರ ವಾಣಿಜ್ಯ ಮಂಡಳಿ ಪದಾಧಿಕಾರಿಗಳು ಉಪಸ್ಥಿತರಿದ್ದರು.

 

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ