Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

1871 ಎಸ್‌ಐ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟ; ಅರ್ಜಿ ಆಹ್ವಾನ

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಸಿಬ್ಬಂದಿ ನೇಮಕಾತಿ ಆಯೋಗವು ಕೇಂದ್ರ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಸಬ್ ಇನ್ಸ್ಪೆಕ್ಟರ್ ಹುದ್ದೆಗಳ ಭರ್ತಿಗಾಗಿ ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದೆ. ದೆಹಲಿ ಪೊಲೀಸ್ ಇಲಾಖೆ ಹಾಗೂ ಸೆಂಟ್ರಲ್ ಆರ್ಮಡ್ ಪೊಲೀಸ್ ಫೋರ್ಸ್ ಅಡಿಯಲ್ಲಿ ಬರುವ ವಿವಿಧ ವಿಭಾಗಗಳಲ್ಲಿ ಈ ನೇಮಕಾತಿ ಪ್ರಕ್ರಿಯೆ ದೇಶಾದ್ಯಂತ ನಡೆಯಲಿದ್ದು, ಅರ್ಹ ಮತ್ತು ಆಸಕ್ತ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಹುದ್ದೆಗಳ ವಿವರ ಮತ್ತು ವಿಂಗಡಣೆ:
ಈ ಬೃಹತ್ ನೇಮಕಾತಿ ಅಭಿಯಾನದ ಮೂಲಕ ಒಟ್ಟು 1,871 ಸಬ್ ಇನ್ಸ್ಪೆಕ್ಟರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತದೆ. ವಿವಿಧ ಪಡೆಗಳವಾರು ಹುದ್ದೆಗಳ ವಿವರ ಈ ಕೆಳಗಿನಂತಿದೆ.

Advertisement

ಸಿಐಎಸ್‌ಎಫ್: 484 ಹುದ್ದೆಗಳು, ಬಿಎಸ್‌ಎಫ್: 457 ಹುದ್ದೆಗಳು, ದೆಹಲಿ ಪೊಲೀಸ್: 317 ಹುದ್ದೆಗಳು, ಸಿಆರ್‌ಪಿಎಫ್: 254 ಹುದ್ದೆಗಳು, ಐಟಿಬಿಪಿ: 187 ಹುದ್ದೆಗಳು, ಎಸ್‌ಎಸ್‌ಬಿ: 172 ಹುದ್ದೆಗಳು.

ವಿದ್ಯಾರ್ಹತೆ ಮತ್ತು ವಯೋಮಿತಿ:
ವಿದ್ಯಾರ್ಹತೆ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಿಯಿಂದ ಪದವಿ (Degree) ಪೂರ್ಣಗೊಳಿಸಿರಬೇಕು.

ವಯೋಮಿತಿ: ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ಹಾಗೂ ಗರಿಷ್ಠ 30 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ. ಸರ್ಕಾರದ ನಿಯಮಾನುಸಾರ ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಹಾಗೂ ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆ ಇರುತ್ತದೆ.

ಅರ್ಜಿ ಶುಲ್ಕ ವಿವರ: ಅಭ್ಯರ್ಥಿಗಳು ಆನ್‌ಲೈನ್ ಮೂಲಕವೇ ಅರ್ಜಿ ಸಲ್ಲಿಸಬೇಕು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಎಲ್ಲಾ ಮಹಿಳಾ ಅಭ್ಯರ್ಥಿಗಳಿಗೆ ಸಂಪೂರ್ಣ ಅರ್ಜಿ ಶುಲ್ಕ ವಿನಾಯಿತಿ ನೀಡಲಾಗಿದೆ. ಇತರೆ ವರ್ಗದ ಅಭ್ಯರ್ಥಿಗಳು 100 ರೂ. ಅರ್ಜಿ ಶುಲ್ಕವನ್ನು ಆನ್‌ಲೈನ್‌ನಲ್ಲಿ ಪಾವತಿಸಬೇಕಾಗುತ್ತದೆ.

ಆಯ್ಕೆ ಪ್ರಕ್ರಿಯೆ ಹೇಗಿರುತ್ತದೆ?: ಅರ್ಹ ಅಭ್ಯರ್ಥಿಗಳನ್ನು ವಿವಿಧ ಹಂತಗಳ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುತ್ತದೆ.

ಕಂಪ್ಯೂಟರ್ ಆಧಾರಿತ ಲಿಖಿತ ಪರೀಕ್ಷೆ, ದೈಹಿಕ ಪ್ರಮಾಣಿತ ಪರೀಕ್ಷೆ ಮತ್ತು ದೈಹಿಕ ಕಾರ್ಯಕ್ಷಮತೆ ಪರೀಕ್ಷೆ, ವಿವರವಾದ ವೈದ್ಯಕೀಯ ಪರೀಕ್ಷೆ, ಸಂದರ್ಶನ.

ಪ್ರಮುಖ ದಿನಾಂಕಗಳು: ಅರ್ಜಿ ಸಲ್ಲಿಕೆ ಆರಂಭ: ಸೆಪ್ಟೆಂಬರ್ 10, ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಸೆಪ್ಟೆಂಬರ್ 30.

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಎಸ್‌ಎಸ್‌ಸಿ ಅಧಿಕೃತ ಜಾಲತಾಣ ssc.nic.in ಗೆ ಭೇಟಿ ನೀಡಿ, ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿಕೊಂಡು, ಯಾವುದೇ ತಪ್ಪುಗಳಿಲ್ಲದೆ ಅಗತ್ಯ ಮಾಹಿತಿಯನ್ನು ಭರ್ತಿ ಮಾಡುವಂತೆ ಸೂಚಿಸಲಾಗಿದೆ.

 

Author
ಸಿ.ಹೆಂಜಾರಪ್ಪ
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಾವೇರಿ ನೀರು ಹರಿಸುವ ಕುರಿತ ಮೇಲ್ಮನವಿ ಅರ್ಜಿ ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆಇಡಿ ದಾಳಿಯಲ್ಲಿ ಸಿಕ್ಕ 2 ಕೋಟಿ ರೂ. ನಮಗೆ ದೊಡ್ಡ ಮೊತ್ತವಲ್ಲ; ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟನೆಚಹಾ ಕಪ್ ರಸ್ತೆ ಬದಿ ಎಸೆದಿದ್ದನ್ನು ಪ್ರಶ್ನಿಸಿದ ಪೌರಕಾರ್ಮಿಕನ ಮೇಲೆ ಹಲ್ಲೆನಕಲಿ ಔಷಧ ಜಾಲ; ಏಕಕಾಲಕ್ಕೆ ಎಸ್‌ಐಟಿ ದಾಳಿ, ಕೋಟ್ಯಂತರ ಮೌಲ್ಯದ ಔಷಧ ಜಪ್ತಿ2028ರ ಚುನಾವಣೆ ಸ್ಪರ್ಧೆ ನಿರಾಕರಣೆ ಹೇಳಿಕೆ: ಸಿದ್ದರಾಮಯ್ಯಗೆ ರಾಹುಲ್ ಗಾಂಧಿ ಕಿವಿಮಾತುರಸ್ತೆ ಗುಂಡಿ ಮುಚ್ಚಲು ಜೆಟ್ ಪ್ಯಾಚರ್: ಸಚಿವ ಕೃಷ್ಣಭೈರೇಗೌಡ ಚಾಲನೆಸಿಕ್ಕಿರುವುದು ನಮ್ಮದೇ ಹಣ, ಕಾನೂನು ಮೂಲಕ ವಾಪಸ್ ಪಡೆಯುತ್ತೇವೆ: ಸಚಿವ ಸತೀಶ್ ಜಾರಕಿಹೊಳಿನವೆಂಬರ್ 1ರೊಳಗೆ ಪರವಾನಗಿ ಇಲ್ಲದ ಅಕ್ರಮ ಬಂದೂಕು ಒಪ್ಪಿಸಿ: ಸಿಎಂ ಡಿ.ಕೆ ಶಿವಕುಮಾರ್ಇ.ಡಿ ದಾಳಿ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕೈವಾಡವಿಲ್ಲವಿದೇಶದಲ್ಲಿ ಹೂಡಿಕೆ ಸುಳ್ಳು, ಕುಟುಂಬದ ಹೆಸರು ಕೆಡಿಸಬೇಡಿ: ಬಾಲಚಂದ್ರ ಜಾರಕಿಹೊಳಿ