Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಎಲೆಕ್ಟ್ರಿಕಲ್, ಹಾರ್ಡ್‍ವೇರ್ ಮಳಿಗೆಗಳ ಮೇಲೆ ದಾಳಿ 2 ಕೋಟಿ ತೆರಿಗೆ ವಂಚನೆ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ವಾಣಿಜ್ಯ ತೆರಿಗೆ ಇಲಾಖೆಯ ಜಾರಿ, ದಕ್ಷಿಣ ವಲಯ, ಬೆಂಗಳೂರು ವಿಭಾಗದ 72 ಅಧಿಕಾರಿಗಳು ಮಾರ್ಚ್ 29 ರಂದು ಬೆಂಗಳೂರಿನ ಚಿಕ್ಕಪೇಟೆ ಹಾಗೂ ಸುತ್ತಮುತ್ತಲಿನ ವ್ಯಾಪ್ತಿಯಲ್ಲಿ ವ್ಯಾಪಾರ ವಹಿವಾಟು ನಡೆಸುತ್ತಿರುವ ಎಲೆಕ್ಟ್ರಿಕಲ್, ಮೊಬೈಲ್ ಹಾಗೂ ಬಿಡಿಭಾಗಗಳು ಮತ್ತು ಹಾರ್ಡ್ ವೇರ್ ಅಂಗಡಿಗಳ ಮೇಲೆ ಖಚಿತ ಮಾಹಿತಿಯನ್ನಾಧರಿಸಿ ದಾಳಿ ಮಾಡಿದ್ದಾರೆ.

ದಾಳಿಯ ಸಮಯದಲ್ಲಿ ವರ್ತಕರ ವಹಿವಾಟನ್ನು ಕೂಲಂಕುಷವಾಗಿ, ವಿಶೇಷವಾಗಿ ಅಂತರರಾಜ್ಯ ವಹಿವಾಟನ್ನು ಪರಿಶೀಲಿಸಲಾಗಿದೆ. ಇತ್ತೀಚಿನ ದಿನಗಳಲ್ಲಿ ಹಲವು ವರ್ತಕರು ಗ್ರಾಹಕರು ಖರೀದಿಸಿದ ವಸ್ತುಗಳಿಗೆ ತೆರಿಗೆ ಬಿಲ್ಲುಗಳನ್ನು ನೀಡುತ್ತಿಲ್ಲ ಹಾಗೂ ಅಂತರರಾಜ್ಯದಿಂದ ತೆರಿಗೆ ಪಾವತಿಸದೆ ಎಲೆಕ್ಟ್ರಿಕಲ್, ಹಾರ್ಡ್‍ವೇರ್ ವಸ್ತುಗಳನ್ನು ರಾಜ್ಯಕ್ಕೆ ತರಲಾಗುತ್ತಿದೆ ಎಂದು ಇಲಾಖೆಗೆ ದೂರುಗಳು ಬಂದ ಹಿನ್ನಲೆಯಲ್ಲಿ ಹಾಗೂ ಚಲಿಸುವ ಜಾಗೃತಿ ದಳದ ಅಧಿಕಾರಿಗಳು ಸಂಗ್ರಹಿಸಿದ ಮಾಹಿತಿಯ ಆಧಾರದಲ್ಲಿ ಈ ದಾಳಿ ನಡೆಸಲಾಗಿದೆ ಎಂದು ಜಾರಿ ವಿಭಾಗದ ಅಪರ ಆಯುಕ್ತ ಚಂದ್ರಶೇಖರ್ ನಾಯಕ್ ಎಲ್. ಅವರು ತಿಳಿಸಿದ್ದಾರೆ.

ದಾಳಿಯ ಸಮಯದಲ್ಲಿ ಅಧಿಕಾರಿಗಳು ಸುಮಾರು 3 ಕೋಟಿಯನ್ನು ಬಚ್ಚಿಟ್ಟ ತೆರಿಗೆಯನ್ನು ಪತ್ತೆ ಹಚ್ಚಿದ್ದು, 2 ಕೋಟಿಯಷ್ಟು ತೆರಿಗೆ ಮತ್ತು ದಂಡವನ್ನು ಸಂಗ್ರಹಿಸಿದ್ದು ಲೆಕ್ಕ ಪುಸ್ತಕಗಳ ಪರಿಶೀಲನೆ ಮುಂದುವರಿಸಿದ್ದಾರೆ.

ಗ್ರಾಹಕರು ಖರೀದಿಸುವ ಎಲ್ಲಾ ವಸ್ತುಗಳಿಗೂ ವರ್ತಕರು ಕಡ್ಡಾಯವಾಗಿ ರಸೀತಿಯನ್ನು ನೀಡಬೇಕೆಂದು, ಒಂದು ವೇಳೆ ರಸೀತಿಯನ್ನು ನೀಡದಿದ್ದ ಪಕ್ಷದಲ್ಲಿ ಗ್ರಾಹಕರು / ಸಾರ್ವಜನಿಕರು ವಾಣಿಜ್ಯ ತೆರಿಗೆಯ ಕಂಟ್ರೋಲ್ ರೂಮ್ ಸಂಖ್ಯೆ 080 25704970 ಗೆ ಮಾಹಿತಿ ನೀಡಬಹುದಾಗಿದೆ ಎಂದು ಅಪರ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ