Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಾಜ್ಯ ಸರ್ಕಾರದ 2 ವರ್ಷದ ಸಂಭ್ರಮಾಚರಣೆ ಹಾಸ್ಯಾಸ್ಪದ, ನಾಚಿಕೆಗೇಡು

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಸಿಎಂ ಸಿದ್ದರಾಮಯ್ಯನವರೇ ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್ ಅವರೇ. ಯಾವ ಸಾಧನೆಗೆ ಈ ಎರಡು ವರ್ಷದ ಸಂಭ್ರಮ? ಆಚರಣೆ ಮಾಡುತ್ತೀರಿ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಟೀಕಿಸಿದ್ದಾರೆ.

ಕಾಂಗ್ರೆಸ್ ಸರ್ಕಾರ ಎರಡು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಸಂಭ್ರಮಾಚರಣೆ ಮಾಡಲು ಹೊರಟಿದ್ದೀರಿ ಎಂಬುದು ಹಾಸ್ಯಾಸ್ಪದ, ನಾಚಿಕೆಗೇಡು ಸುದ್ದಿ. ಕಣ್ಣಿಗೆ ಬಿತ್ತು. ನಿಮ್ಮ ಸರ್ಕಾರದ ಕಳೆದ ಎರಡು ವರ್ಷಗಳಲ್ಲಿ ಏನು ಸಾಧನೆ ಮಾಡಿದೆ ಎಂದು ಈ ಸಂಭ್ರಮಾಚರಣೆ ಮಾಡಲು ಹೊರಟಿದ್ದೀರಿ? ಕಟುವಾಗಿ ಅಶೋಕ್ ಪ್ರಶ್ನಿಸಿದ್ದಾರೆ.

ಹಾಲು, ನೀರು, ಕರೆಂಟು, ಪೆಟ್ರೋಲು, ಡಿಸೇಲ್, ಆಸ್ತಿ ತೆರಿಗೆ, ಹೀಗೆ ಎಲ್ಲ ದಿನಬಳಕೆ ವಸ್ತುಗಳು ಮತ್ತು ಸೇವೆಗಳ ಬೆಲೆ ಏರಿಕೆ ಮಾಡಿ ಬಡವರು ಮಧ್ಯಮ ವರ್ಗದ ಜೇಬಿಗೆ ಕತ್ತರಿ ಹಾಕಿದ್ದಕ್ಕೆ ಈ ಸಂಭ್ರಮಾಚರಣೆನಾ?

ಪರಿಶಿಷ್ಟ ಸಮುದಾಯಗಳಿಗೆ ಸೇರಬೇಕಾದ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣವನ್ನ ಲೂಟಿ ಹೊಡೆದಿರುವ ಖುಷಿಗೆ ಸಂಭ್ರಮಾಚರಣೆನಾ?

ಮುಡಾ ಹಗರಣದಲ್ಲಿ ಲೋಕಾಯುಕ್ತ ಪೊಲೀಸರಿಂದ ನಾಮಕಾವಸ್ತೆ ತನಿಖೆ ಮಾಡಿಸಿ ಬಿ-ರಿಪೋರ್ಟ್ ಹಾಕಿಸಿಕೊಂಡು ಕ್ಲೀನ್ ಪಡೆದ ಸಾಧನೆಗೆ ಈ ಸಂಭ್ರಮಾಚರಣೆನಾ?

ಕಾಂಗ್ರೆಸ್ ಸರ್ಕಾರದ ಕಿರುಕುಳ, ಕಮಿಷನ್ ದಾಹಕ್ಕೆ ಬಲಿಯಾದ ಪ್ರಾಮಾಣಿಕ ಅಧಿಕಾರಿಗಳು ಹಾಗು ಗುತ್ತಿಗೆದಾರರ ಸಾವನ್ನ ಸಂಭ್ರಮಿಸಲು ಸಂಭ್ರಮಾಚರಣೆನಾ? ಎಂದು ಅಶೋಕ್ ತೀಕ್ಷ್ಣವಾಗಿ ಪ್ರಶ್ನಿಸಿದ್ದಾರೆ.

ಕಳಪೆ ಔಷಧಿ ಪೂರೈಕೆಯಿಂದ 460ಕ್ಕೂ ಹೆಚ್ಚು ಬಾಣಂತಿಯರು ಆಸ್ಪತ್ರೆಯಲ್ಲೇ ತೀರಿಕೊಂಡರಲ್ಲ ಅದಕ್ಕೆ ಸಂಭ್ರಮಾಚರಣೆನಾ?
ಕಳೆದ 24 ತಿಂಗಳಲ್ಲಿ 1600ಕ್ಕು ಹೆಚ್ಚು ರೈತರು ಆತ್ಮಹತ್ಯೆಗೆ ಶರಣಾಗಿದ್ದಾರಲ್ಲ ಅದಕ್ಕೆ ಸಂಭ್ರಮಾಚರಣೆನಾ
?
ವಕ್ಫ್ ಮಂಡಳಿ ಹೆಸರಿನಲ್ಲಿ ಮಠ
, ಮಂದಿರಗಳು, ರೈತರ ಜಮೀನು ಕಬಳಿಸಿದ ಸಾಧನೆಗೆ ಸಂಭ್ರಮಾಚರಣೆನಾ?

ಕೆಪಿಎಸ್ಸಿ ಪರೀಕ್ಷೆಯಲ್ಲಿ ಎಡವಟ್ಟುಗಳು ಮೇಲೆ ಎಡವಟ್ಟುಗಳು ಮಾಡಿ ಲಕ್ಷಾಂತರ ಯುವಕರ ಕನಸು ನುಚ್ಚು ನೂರು ಮಾಡಿ ಅವರ ಭವಿಷ್ಯ ಹಾಳು ಮಾಡಿದ್ದಕ್ಕೆ ಸಂಭ್ರಮಾಚರಣೆನಾ?

ಹುಬ್ಬಳ್ಳಿಯಲ್ಲಿ ಲವ್ ಜಿಹಾದ್ ಕಾರಣದಿಂದ ನೇಹಾ ಕೊಲೆ ಪ್ರಕರಣದಿಂದ ಹಿಡಿದು, ಮಂಗಳೂರಿನಲ್ಲಿ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದವರೆಗೆ ರಾಜ್ಯದಲ್ಲಿ ಹದಗೆಟ್ಟಿರುವ ಕಾನೂನು ಸುವ್ಯವಸ್ಥೆ, ಹಿಂದೂಗಳ ಸರಣಿ ಕೊಲೆ ಬಗ್ಗೆ ಸಂಭ್ರಮಾಚರಣೆನಾ?

ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ಸಂದರ್ಭದಲ್ಲಿ ಗಣೇಶನ ಮೂರ್ತಿಯನ್ನು ಪೊಲೀಸ್ ವ್ಯಾನ್ ಹತ್ತಿಸಿದ್ದಕ್ಕೆ ಸಂಭ್ರಮಾಚರಣೆನಾಪಾಕಿಸ್ತಾನದ ವಿರುದ್ಧ ಯುದ್ಧ ಬೇಡ ಎಂದು ಹೇಳಿ ಪಾಕಿಸ್ತಾನದ ಟಿವಿಗಳಲ್ಲಿ ಮಿಂಚಿದ್ದಕ್ಕೆ ಈ ಸಂಭ್ರಮಾಚರಣೆನಾ?

ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಭುಗಿಲೆದ್ದಿರುವ ಜನಾಕ್ರೋಶವನ್ನ ಅಣಕಿಸುವ ರೀತಿಯಲ್ಲಿ ಸಂಭ್ರಮಾಚಾರಣೆ ಮಾಡಲು ಹೊರಟಿರುವ ಕರ್ನಾಟಕ ಕಾಂಗ್ರೆಸ್ ಪಕ್ಷಕ್ಕೆ ನಿಜಕ್ಕೂ ನಾಚಿಕೆಯಾಗಬೇಕು ಎಂದು ಆರ್.ಅಶೋಕ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ