ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜಧಾನಿ ಬೆಂಗಳೂರಿನಲ್ಲಿ ಮಳೆಗಾಲದ ಪ್ರವಾಹ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಇಂದು ₹2,000 ಕೋಟಿ ವೆಚ್ಚದ ಮಳೆನೀರುಗಾಲುವೆ ಮತ್ತು ಪ್ರವಾಹ ನಿರ್ವಹಣಾ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು.
ಮಹದೇವಪುರ ವಿಧಾನಸಭಾ ಕ್ಷೇತ್ರದ ಗುಂಜೂರಿನ ಅಟಲ್ಬಿಹಾರಿ ವಾಜಪೇಯಿ ಮೈದಾನದಲ್ಲಿ ಆಯೋಜಿಸಲಾಗಿದ್ದ ಸಮಾರಂಭದಲ್ಲಿ, ವಿಶ್ವಬ್ಯಾಂಕ್ನೆರವಿನ 'ಕರ್ನಾಟಕ ಜಲಭದ್ರತೆ ಮತ್ತು ವಿಪತ್ತು ಸ್ಥಿತಿಸ್ಥಾಪಕತ್ವ ಕಾರ್ಯಕ್ರಮ'ದಡಿ ಗ್ರೇಟರ್ಬೆಂಗಳೂರು ಪ್ರಾಧಿಕಾರದ (ಜಿಬಿಎ) ವ್ಯಾಪ್ತಿಯಲ್ಲಿ ಈ ಬೃಹತ್ ಯೋಜನೆಗೆ ಚಾಲನೆ ನೀಡಲಾಯಿತು.
ಈ ಕಾಮಗಾರಿಗಳು ಪೂರ್ಣಗೊಂಡ ಬಳಿಕ ನಗರದ ಪ್ರವಾಹ ಪೀಡಿತ ಪ್ರದೇಶಗಳ ಸಮಸ್ಯೆಗೆ ಮುಕ್ತಿ ಸಿಗಲಿದ್ದು, ಬೆಂಗಳೂರಿನ ನಾಗರಿಕರ ಸುರಕ್ಷತೆ ಮತ್ತು ಸುಗಮ ಜೀವನಕ್ಕೆ ಅಗತ್ಯವಾದ ಮೂಲಸೌಕರ್ಯವನ್ನು ಒದಗಿಸಲಿದೆ ಎಂದು ಸರ್ಕಾರ ತಿಳಿಸಿದೆ.
ಕಾರ್ಯಕ್ರಮದಲ್ಲಿ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ, ರಾಜ್ಯಸಭಾ ಸದಸ್ಯ ಮನ್ಸೂರ್ ಅಲಿ ಖಾನ್, ಶಾಸಕಿ ಮಂಜುಳಾ ಅರವಿಂದ ಲಿಂಬಾವಳಿ, ವಿಧಾನಪರಿಷತ್ ಸದಸ್ಯ ಎ.ಪಿ. ರಂಗನಾಥ್, ಮಾಜಿ ಸಚಿವ ಹೆಚ್. ನಾಗೇಶ್, ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಸೇರಿದಂತೆ ಹಲವು ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.




