Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Education News

2025-26 ನೇ ಸಾಲಿನ ಪ್ರವೇಶಾತಿಗೆ ಅರ್ಜಿ ಆಹ್ವಾನ

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು
2020-20ನೇ ಸಾಲಿನ ಜನವರಿ ಆವೃತ್ತಿಗೆ ಯುಜಿಸಿ ಅನುಮೋದಿತ ಶಿಕ್ಷಣಕ್ರಮಗಳ ಪ್ರವೇಶಾತಿಗಾಗಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.

ಬಿ.ಎ, ಬಿ.ಕಾಂ, ಬಿ.ಎಸ್ಸಿ./ ಬಿ.ಬಿ.ಎ./ ಬಿ.ಸಿ.ಎ./ ಬಿ.ಎಸ್.ಡಬ್ಲ್ಯೂ, ಬಿ.ಲಿಬ್.ಐಎಸ್ಸಿ/ ಬಿ.ಎಸ್.ಡಬ್ಲ್ಯೂ, ಸ್ನಾತಕೋತ್ತರ ಪಿಜಿ ಸರ್ಟಿಫಿಕೇಟ್/ ಡಿಪ್ಲೊಮಾ ಮತ್ತು ಸ್ನಾತಕೋತ್ತರ ಸರ್ಟಿಫಿಕೇಟ್ ಶಿಕ್ಷಣ ಕ್ರಮಗಳಿಗೆ ಕ.ರಾ.ಮು.ವಿ ಬೆಂಗಳೂರು ಪ್ರಾದೇಶಿಕ ಕೇಂದ್ರ – 06 ರಲ್ಲಿ ಜನವರಿ 9 ರಿಂದ ಪ್ರವೇಶಾತಿ ಆರಂಭವಾಗಿದೆ.

ವಿಶ್ವವಿದ್ಯಾನಿಲಯದ ಅಂತರ್ಜಾಲ www.ksoumysuru.ac.in ನಲ್ಲಿ ಲಭ್ಯವಿರುವ ವಿವರಣಾಪುಸ್ತಕದಲ್ಲಿ ಎಲ್ಲಾ ವಿವರಗಳು ಲಭ್ಯವಿದ್ದು, ವಿದ್ಯಾರ್ಥಿಗಳು ಅದರನ್ವಯ ಅರ್ಹ ಶಿಕ್ಷಣ ಕ್ರಮಗಳಿಗೆ ವಿ.ವಿಯ ವೆಬ್‍ಸೈಟ್ ನಲ್ಲಿ ಲಭ್ಯವಿರುವ ಆನ್‍ಲೈನ್ ಅಡ್ಮಿಷನ್ ಪೋರ್ಟಲ್ ಮೂಲಕ ಪ್ರವೇಶಾತಿ ಮಾಡಿಕೊಳ್ಳಬಹುದಾಗಿದೆ.

ಬಿಪಿಎಲ್ ಕಾರ್ಡ್ ಹೊಂದಿರುವ ಮಹಿಳಾ ವಿದ್ಯಾರ್ಥಿಗಳಿಗೆ, ಡಿಫೆನ್ಸ್/ ಮಾಜಿ ಸೈನಿಕ ವಿದ್ಯಾರ್ಥಿಗಳು, ಆಟೋ / ಕ್ಯಾಬ್ ಡ್ರೈವರ್ಸ್ ಮತ್ತು ಅವರ ಮಕ್ಕಳಿಗೆ ಬೋಧನಾ ಶುಲ್ಕದಲ್ಲಿ ವಿಶೇಷ ರಿಯಾಯಿತಿ ಸೌಲಭ್ಯ ಇರುತ್ತದೆ. ಕೋವಿಡ್ ನಿಂದಾಗಿ ಮೃತರಾದ ಮೋಷಕರ ಮಕ್ಕಳಿಗೆ ದೃಷ್ಟಿಹೀನ ವಿದ್ಯಾರ್ಥಿಗಳಿಗೆ (ಬಿ.ಎಡ್ ಮತ್ತು ಎಂ.ಬಿ.ಎ ಕೋರ್ಸ್ ಹೊರತು ಪಡಿಸಿ) ಹಾಗೂ ತೃತೀಯ ಲಿಂಗಿಗಳಿಗೆ ಪೂರ್ಣ ಶುಲ್ಕ ವಿನಾಯಿತಿ ಇರಲಿದೆ, ಇದರ ಸದುಪಯೋಗವನ್ನು ಪಡೆದುಕೊಳ್ಳಬಹುದಾಗಿದೆ.

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಜಾಲತಾಣ : www.ksoumysuru.ac.in  ಅಥವಾ ksou Admission portal ಮೂಲಕ ಆನ್‍ಲೈನ್‍ನಲ್ಲಿ ಅರ್ಜಿ ಭರ್ತಿ ಮಾಡಿ ನಂತರ ಪ್ರಾದೇಶಿಕ ಕೇಂದ್ರಕ್ಕೆ ಭೇಟಿ ನೀಡಿ ಅರ್ಜಿಯನ್ನು ಪರಿಶೀಲಿಸಿಕೊಂಡು ಪ್ರವೇಶಾತಿ ಶುಲ್ಕ ಪಾವತಿಸಿ ಪ್ರವೇಶಾತಿ ಪಡೆಯಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಪ್ರಾದೇಶಿಕ ನಿರ್ದೇಶಕರು, ಬೆಂಗಳೂರು ಪಾದೇಶಿಕ ಕೇಂದ್ರ-06, ನಂ.4 & 5, 1ನೇ ಮಹಡಿ, ಶ್ರೀ ಲಕ್ಷ್ಮಿ ಕಾಲೇಜ್ ಆಫ್ ಸೈನ್ಸ್ & ಮ್ಯಾನೇಜ್‍ಮೆಂಟ್ ಆವರಣ. ಶ್ರೀಗಂಧಕಾವಲ್, ಮಾಗಡಿ ಮುಖ್ಯ ರಸ್ತೆ, ಸುಂಕದಕಟ್ಟೆ, ಬೆಂಗಳೂರು-560091 ದೂರವಾಣಿ ಸಂಖ್ಯೆ:- 9632332265, 9741197921 ಮತ್ತು ಇ-ಮೇಲ್ [email protected] ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಾದೇಶಿಕ ನಿರ್ದೇಶಕಿ ಶಶಿಕಲಾ ಜೆ. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

 

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಸಾಪ ಮಾಜಿ ಜಿಲ್ಲಾಧ್ಯಕ್ಷ, ಶಿಕ್ಷಣತಜ್ಞ ಡಾ. ಕೆ.ಎಂ. ವೀರೇಶ್ ಹೃದಯಾಘಾತದಿಂದ ನಿಧನದುರ್ಗಕ್ಕೆ ಹರಿದು ಬಂದ ಭದ್ರೆ- ಸೆ.24ರಂದು ಮುಖ್ಯಮಂತ್ರಿಗಳಿಂದ ಗಂಗಾಪೂಜೆ,  ಬೃಹತ್ ಸಾರ್ವಜನಿಕ ಸಮಾರಂಭಆರ್.ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ 22ನೇ ಘಟಿಕೋತ್ಸವ ಮತ್ತು ಪದವಿ ಪ್ರದಾನ ಕಾರ್ಯಕ್ರಮನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಬೈಕ್ ಸವಾರ ಸಾವುಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಸಭೆ ಹೋರಾಟಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಾತಿನಿಧ್ಯ ಕಡಿಮೆ- ಚಿಕ್ಕಪ್ಪನಹಳ್ಳಿ ಷಣ್ಮುಖಕುಂಚಿಟಿಗ ನೌಕರರ ಸಂಘಕ್ಕೆ ಸದಸ್ಯರಾಗಿ: ಎಸ್.ಕೆ ಲಕ್ಷ್ಮಣ್ಚಳವಳಿ ನೆನಪಾಗಿ ಉಳಿದ ‘ತೆಂಕ-ಬಡಗ’ಅಂತಾರಾಷ್ಟ್ರೀಯ ಶಾಂತಿ ದಿನ – ಮನದ ದ್ವೇಷ ಕರಗಿದಾಗಲೇ ಜಗದ ಶಾಂತಿ ಅರಳುವುದು!ಗಣಪತಿ ಮೆರವಣಿಗೆ ವೇಳೆ ಗಲಾಟೆ 7 ಯುವಕರ ವಿರುದ್ಧ ಸುಮೋಟೋ ಪ್ರಕರಣ ದಾಖಲು