Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನರೇಗಾ ವಿಶೇಷ ಚರ್ಚೆಗಾಗಿ ಜ-22 ರಿಂದ 31ರವರೆಗೆ ಜಂಟಿ ಅಧಿವೇಶನ- ಸಿಎಂ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ನರೇಗಾ ಯೋಜನೆ ಬಗ್ಗೆ ವಿಶೇಷ ಚರ್ಚೆ ನಡೆಯಬೇಕಾಗಿರುವುದರಿಂದ ಜನವರಿ
22 ರಿಂದ ಜನವರಿ 31ರ ವರೆಗೆ ಜಂಟಿ ಅಧಿವೇಶನ ನಡೆಯಲಿದೆ. ಅಧಿವೇಶನದ ವೇಳೆ ನರೇಗಾ ಕುರಿತು ಸಾಕಷ್ಟು ಚರ್ಚೆ ನಡೆಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಬೆಂಗಳೂರಿನಲ್ಲಿ ಮಂಗಳವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜಂಟಿ ಅಧಿವೇಶನ ನಡೆಯಲಿದ್ದು, ರಾಜ್ಯಪಾಲರ ಭಾಷಣ ಮತ್ತು ಮನರೇಗಾ ಯೋಜನೆ ಬದಲಾವಣೆಯ ಬಗ್ಗೆ ವಿಶೇಷ ಚರ್ಚೆ ನಡೆಯಲಿದೆ. ಅಧಿವೇಶನದ ನಂತರ ಆಯವ್ಯಯದ ಸಿದ್ಧತೆ ಪ್ರಾರಂಭಿಸಲಾಗುವುದು ಎಂದು ಸಿಎಂ ತಿಳಿಸಿದರು.

ಮುಂದುವರೆದು ಮಾತನಾಡಿ ಸಿಎಂ ಅವರು ಕಾಂಗ್ರೆಸ್ ವರಿಷ್ಠರು ಕರೆ ನೀಡಿದರೆ ನವದೆಹಲಿಗೆ ತೆರಳುವುದಾಗಿ ಇದೇ ವೇಳೆ ತಿಳಿಸಿದರು.
ಡಿಜಿಪಿ ರಾಮಚಂದ್ರರಾವ್ ಅವರ ವಿರುದ್ಧ ಶಿಸ್ತಿನ ಕ್ರಮ ಜರುಗಿಸಿ
, ಅಮಾನತು ಗೊಳಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.


ಕಾನೂನು ಸಂಸದೀಯ ವ್ಯವಹಾರಗಳ ಸಚಿವ ಹೆಚ್.ಕೆ.ಪಾಟೀಲ್ ಈಗಾಗಲೇ ಸುದ್ದಿಗೋಷ್ಠಿ ಮಾಡಿ, ''ಜ.22 ರಿಂದ 31ರ ವರೆಗೆ ನಡೆಯಲಿರುವ ಜಂಟಿ ಅಧಿವೇಶನವನ್ನ ಉದ್ದೇಶಿಸಿ ಮಾತನಾಡಲು ರಾಜ್ಯಪಾಲರಿಗೆ ಆಹ್ವಾನಿಸಲು ತೀರ್ಮಾನಿಸಲಾಗಿದೆ. ರಾಜ್ಯಪಾಲರು ಮಾಡಲಿರುವ ಭಾಷಣವನ್ನು ಅನುಮೋದಿಸಲು ಸಚಿವ ಸಂಪುಟವು ಮುಖ್ಯಮಂತ್ರಿಗಳಿಗೆ ಅಧಿಕಾರ ನೀಡಿದೆ ಎಂದಿದ್ದರು.

ವಿಬಿಜಿ ರಾಮ್ ಜಿ ಕಾಯ್ದೆಯ ಸಾಮಾಜಿಕ ಹಾಗೂ ಆರ್ಥಿಕ ಪರಿಣಾಮಗಳ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಲು ಅಧಿವೇಶನದಲ್ಲಿ ವಿಶೇಷ ಚರ್ಚೆ ನಡೆಯಲಿದೆ. ನೂತನ ಕಾಯ್ದೆಯು ಸಮಾಜದ ಮೇಲೆ ಬೀರಿರುವ ಸಾಮಾಜಿಕ ಹಾಗೂ ಆರ್ಥಿಕ ಪರಿಣಾಮಗಳ ಬಗ್ಗೆ ಸಾರ್ವಜನಿಕರಿಗೆ ಅರಿವು ಹಾಗೂ ಜಾಗೃತಿ ಮೂಡಿಸಲು ವಿಧಾನಮಂಡಲದ ಜಂಟಿ ಅಧಿವೇಶನದಲ್ಲಿ ವಿಶೇಷ ಚರ್ಚೆ ನಡೆಸಿ ನೂತನ ಕಾಯ್ದೆಯ ಕುರಿತು ನಿರ್ಣಯ ಕೈಗೊಳ್ಳಲು ಸಚಿವ ಸಂಪುಟ ಈಗಾಗಲೇ ನಿರ್ಣಯಿಸಿದೆ.

 ಈ ಮೂಲಕ ಜನಹಿತ, ರಾಜ್ಯದ ಹಿತ ಕಾಪಾಡಲು ಸೂಕ್ತವಾದ ಹೆಜ್ಜೆಯನ್ನು ಸರ್ಕಾರ ಇಡಲಿದೆ. ಒಕ್ಕೂಟ ವ್ಯವಸ್ಥೆಯಲ್ಲಿ ನಮ್ಮ ರಾಜ್ಯದ ಜನರ ಹಕ್ಕನ್ನು ಕಿತ್ತುಕೊಳ್ಳಲು ಮುಂದಾದರೆ ರಾಜ್ಯ ಸರ್ಕಾರ ಸುಮ್ಮನೆ ಕುಳಿತಿರಲು ಸಾಧ್ಯವಿಲ್ಲ. ಸರ್ಕಾರ ಅಧಿವೇಶನ ಕರೆಯದೇ ಬಿಡಲು ಸಾಧ್ಯವಿಲ್ಲ. ಅರಿವು ಹಾಗೂ ಜಾಗೃತಿ ಮೂಡಿಸಲು ಹಾಗೂ ಕೇಂದ್ರ ಸರ್ಕಾರದ ಮೇಲೆ ಮನರೇಗಾ ಕಾಯ್ದೆಯ ಮರುಸ್ಥಾಪನೆಗಾಗಿ ಒತ್ತಡ ತರಲಾಗುವುದು ಎಂದು ಹೇಳಿದ್ದರು.

ಮನರೇಗಾ ಹಾಗೂ ರಾಮ್ ಜಿ ಯೋಜನೆಗಳ ಇರುವ ವೈರುಧ್ಯಗಳ ಬಗ್ಗೆ ತಿಳಿಸಲು ಅಧಿವೇಶನದಲ್ಲಿ ನಡೆಯಲಿರುವ ವಿಶೇಷ ಚರ್ಚೆ ವೇಳೆ ಐವರು ಸಚಿವರಿಗೆ ಉಸ್ತುವಾರಿ ವಹಿಸಲಾಗಿದೆ. ಸಚಿವರಾದ ಕೃಷ್ಣ ಬೈರೇಗೌಡ, ಹೆಚ್.ಕೆ.ಪಾಟೀಲ್, ಪ್ರಿಯಾಂಕ್ ಖರ್ಗೆ, ಶರಣಪ್ರಕಾಶ್ ಸೇರಿದಂತೆ ಐವರಿಗೆ ಹೆಚ್ಚು ಚರ್ಚೆಯಲ್ಲಿ ಭಾಗಿಯಾಗುವಂತೆ ತಿಳಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ