Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಾಸರಗೋಡು ಪತ್ರಕರ್ತರ ಕ್ಷೇಮಾಭಿವೃದ್ಧಿ ನಿಧಿಗೆ 25 ಲಕ್ಷ ನೆರವು: ಸಿಎಂ, ಪ್ರಭಾಕರ್ ಅವರಿಗೆ ಅಭಿನಂದನೆ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ(ಕೆಯುಡಬ್ಲೂೃಜೆ)ದ ಹೊರನಾಡಿನ ಘಟಕವಾಗಿರುವ ಕಾಸರಗೋಡು ಪತ್ರಕರ್ತರ ಸಂಘದ ಕ್ಷೇಮಾಭಿವೃದ್ಧಿ ನಿಧಿಗೆ ಕರ್ನಾಟಕ ಸರ್ಕಾರ 25 ಲಕ್ಷ ರೂ ಮಂಜೂರು ಮಾಡಿದೆ.


ಕ್ಷೇಮಾಭಿವೃದ್ಧಿ ನಿಧಿಗೆ 25 ಲಕ್ಷ ಮಂಜೂರು ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಇದಕ್ಕೆ ಸತತ ಪರಿಶ್ರಮ ವಹಿಸಿದ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಅವರಿಗೆ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು ಅಭಿನಂದನೆ ಸಲ್ಲಿಸಿದ್ದಾರೆ.

ಕೇರಳ ರಾಜ್ಯದ ಕಾಸರಗೋಡು ಭಾಗದಲ್ಲಿ ಕನ್ನಡ ಪತ್ರಿಕೆಗಳು ಈಗಲೂ ಹೆಚ್ಚಿನ ಪ್ರಸಾರ ಹೊಂದಿದ್ದು, ಕನ್ನಡ ಪತ್ರಕರ್ತರು ಹೆಚ್ಚಿನ ಸಂಖ್ಯೆಯಲ್ಲಿರುವುದರಿಂದ ಅವರ ಹಿತ ರಕ್ಷಣೆ ಮಾಡುವುದು ಸರ್ಕಾರದ ಕರ್ತವ್ಯವಾಗಿದೆ.

ಈ ಹಿನ್ನೆಲೆಯಲ್ಲಿ ಅಲ್ಲಿನ ಪತ್ರಕರ್ತರ ಸಂಘಕ್ಕೆ ಆರ್ಥಿಕ ನೆರವು ನೀಡಬೇಕು ಎಂದು ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ ಮತ್ತು ಕಾಸರಗೋಡು  ಘಕದ ಮಾಡಿದ ಮನವಿಯನ್ನು ಪರಿಗಣಿಸಿರುವ ಮುಖ್ಯಮಂತ್ರಿಗಳು 25 ಲಕ್ಷ ರೂ ಮಂಜೂರು ಮಾಡಿದ್ದಾರೆ.

ಗಡಿ ನಾಡಿನ ಕನ್ನಡ ಪತ್ರಕರ್ತರ ಹಿತ ರಕ್ಷಣೆಗೆ ಬದ್ದವಾಗಿರುವ ಕರ್ನಾಟಕ ಸರ್ಕಾರ, ಕ್ಷೇಮಾಭಿವೃದ್ಧಿ ನಿಧಿಗೆ 25 ಲಕ್ಷ ನೀಡಿರುವುದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಇದಕ್ಕೆ ಸತತ ಪರಿಶ್ರಮ ವಹಿಸಿದ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಅವರಿಗೆ ಕಾಸರಗೋಡು ಘಟಕದ ಎ.ಆರ್.ಸುಬ್ಬಯ್ಯಕಟ್ಟೆ ಅವರು ಅಭಿನಂದಿಸಿದ್ದಾರೆ.

ಆರ್ಥಿಕ ನೆರವು ಕೊಡಿಸುವ ನಿಟ್ಟಿನಲ್ಲಿ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು ನೀಡಿದ ಸಹಕಾರವನ್ನು ಅವರು ಸ್ಮರಿಸಿದ್ದಾರೆ.

 

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ