Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅಂಚೆ ಕಚೇರಿಗಳ ಕಟ್ಟಡ ನಿರ್ಮಾಣಕ್ಕೆ 3.40 ಕೋಟಿ ಅನುದಾನ: ಕಾರಜೋಳ

Advertisement
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಕೇಂದ್ರ ಸಂವಹನ ಸಚಿವಾಲಯದಿಂದ ಚಿತ್ರದುರ್ಗ ಜಿಲ್ಲೆಯ 8 ಗ್ರಾಮಗಳಲ್ಲಿ ಅಂಚೆ ಕಚೇರಿ ಕಟ್ಟಡಗಳನ್ನು ನಿರ್ಮಾಣ ಮಾಡಲು ಕೇಂದ್ರ ಸರ್ಕಾರ 3.4೦ ಕೋಟಿ ಅನುದಾನ ಬಿಡುಗಡೆ ಮಾಡಿದೆ ಎಂದು ಚಿತ್ರದುರ್ಗ ಲೋಕಸಭಾ ಸದಸ್ಯ ಗೋವಿಂದ ಎಂ ಕಾರಜೋಳ ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.


ಜಿಲ್ಲೆಯ ದೊಡ್ಡ ದೊಡ್ಡ ಗ್ರಾಮಗಳಲ್ಲಿ ಅಂಚೆ ಕಚೇರಿಗಳು ಬಾಡಿಗೆ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸುತ್ತದ್ದವು. ಇದನ್ನು ಮನಗಂಡು ಅಂಚೆ ಕಚೇರಿಗೆ ಸ್ವಂತ ಕಟ್ಟಡ ನಿರ್ಮಾಣ ಮಾಡಲು ಪ್ರಸ್ತಾವನೆ ಸಲ್ಲಿಸಲಾಗಿತ್ತು. ಪ್ರಸ್ತಾವನೆ ಅನುಮೋದಿಸಿ ಕೇಂದ್ರ ಸಂವಹನ ಖಾತೆ ಸಚಿವರಾದ ಜ್ಯೋತಿರಾದಿತ್ಯ ಸಿಂಧಿಯಾ ರವರು ಅನುದಾನ ಬಿಡುಗಡೆ ಮಾಡಿದ್ದಾರೆ.


ಹಿರಿಯೂರು ತಾಲ್ಲೂಕು ಆದಿವಾಲ ಗ್ರಾಮದಲ್ಲಿ ಬಿ.ಮಾದರಿ ಅಂಚೆ ಕಚೇರಿ ಕಟ್ಟಡ ನಿರ್ಮಾಣಕ್ಕಾಗಿ 50 ಲಕ್ಷ, ಚಿತ್ರದುರ್ಗ ತಾಲ್ಲೂಕು ಭೀಮಸಮುದ್ರ ಗ್ರಾಮದಲ್ಲಿ ಸಿ ಮಾದರಿ ಅಂಚೆ ಕಛೇರಿ ಕಟ್ಟಡ ನಿರ್ಮಾಣಕ್ಕಾಗಿ 35 ಲಕ್ಷ, ಹೊಳಲ್ಕೆರೆ ತಾಲ್ಲೂಕು ಚಿಕ್ಕಜಾಜೂರು ಗ್ರಾಮದಲ್ಲಿ ಬಿ ಮಾದರಿ ಅಂಚೆ ಕಛೇರಿ ಕಟ್ಟಡ ನಿರ್ಮಾಣಕ್ಕಾಗಿ 45 ಲಕ್ಷಚಿತ್ರದುರ್ಗ ತಾಲ್ಲೂಕು ಓಬಳಾಪುರ ಗ್ರಾಮದಲ್ಲಿ ಸಿ ಮಾದರಿ ಅಂಚೆ ಕಛೇರಿ ಕಟ್ಟಡ ನಿರ್ಮಾಣಕ್ಕಾಗಿ ೩೭ ಲಕ್ಷಚಳ್ಳಕೆರೆ

ತಾಲ್ಲೂಕು ಪರಶುರಾಂಪುರ ಗ್ರಾಮದಲ್ಲಿ ಬಿ ಮಾದರಿ ಅಂಚೆ ಕಛೇರಿ ಕಟ್ಟಡ ನಿರ್ಮಾಣಕ್ಕಾಗಿ 44 ಲಕ್ಷಮೊಳಕಾಲ್ಮೂರು ತಾಲ್ಲೂಕು ಕೊಂಡ್ಲಹಳ್ಳಿ ಗ್ರಾಮದಲ್ಲಿ  ಬಿ ಮಾದರಿ ಅಂಚೆ ಕಛೇರಿ ಕಟ್ಟಡ ನಿರ್ಮಾಣಕ್ಕಾಗಿ 48 ಲಕ್ಷಮೊಳಕಾಲ್ಮೂರು ತಾಲ್ಲೂಕು ರಾಂಪುರ ಗ್ರಾಮದಲ್ಲಿ ಬಿ ಮಾದರಿ ಅಂಚೆ ಕಛೇರಿ ಕಟ್ಟಡ ನಿರ್ಮಾಣಕ್ಕಾಗಿ 45 ಲಕ್ಷ, ಹೊಸದುರ್ಗ ತಾಲ್ಲೂಕು ಬೆಲಗೂರು ಗ್ರಾಮದಲ್ಲಿ ಸಿ ಮಾದರಿ ಅಂಚೆ ಕಛೇರಿ ಕಟ್ಟಡ ನಿರ್ಮಾಣಕ್ಕಾಗಿ 36 ಲಕ್ಷ ಹೀಗೆ ಒಟ್ಟು 3.40 ಕೋಟಿ ಅನುದಾನ ಬಿಡುಗಡೆ ಮಾಡಿಸಲಾಗಿದೆ ಎಂದು ಸಂಸದರು ತಿಳಿಸಿದ್ದಾರೆ.


ಶೀಘ್ರದಲ್ಲಿ ಕಾಮಗಾರಿಗಳಿಗೆ ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಿ ಕಾಮಗಾರಿ ಕೈಗೆತ್ತಿಕೊಳ್ಳಲು ಅಧಿಕಾರಿಗಳು ಸಂಸದರು ಸೂಚನೆ ನೀಡಿದ್ದಾರೆ. ಅದೇ ರೀತಿ ಅನುದಾನ ಬಿಡುಗಡೆ ಮಾಡಿದ ಜ್ಯೋತಿರಾದಿತ್ಯ ಸಿಂದಿಯಾ ರವರಿಗೆ ಚಿತ್ರದುರ್ಗ ಜಿಲ್ಲೆಯ ಜನತೆಯ ಪರವಾಗಿ ಸಂಸದರು ಕೃತಜ್ಞತೆಗಳನ್ನು ಸಲ್ಲಿಸಿದ್ದಾರೆ.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ