Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

20 ತಿಂಗಳಲ್ಲಿ 3 ಸಾವಿರ ರೈತರ ಆತ್ಮಹತ್ಯೆ ಕಾಂಗ್ರೆಸ್ ಕೊಡುಗೆ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮಾಧ್ಯಮಗಳ ಮುಂದೆ ಬಾಯಿಗೆ ಬದಂತೆ ಬಡಬಡಾಯಿಸುವುದು ಬಿಟ್ಟು ತಮ್ಮ ಖಾತೆ ನಿರ್ವಹಣೆ ಬಗ್ಗೆ ಸ್ವಲ್ಪ ಗಮನ ಕೊಡಿ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ವಿರುದ್ಧ ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ ಮಾಡಿದ್ದಾರೆ.


ಇಷ್ಟಕ್ಕೂ ತಮ್ಮ ಖಾತೆ ಯಾವುದು ಎಂದು ತಮಗೆ ನೆನಪಿದೆಯೇ ಚಲುವರಾಯಸ್ವಾಮಿ ಅವರೇ? ಸಿಎಂ ಸಿದ್ದರಾಮಯ್ಯ ಅವರ ಬಣದಲ್ಲಿ ಇರಬೇಕೋ ಅಥವಾ ಡಿಸಿಎಂ ಡಿಕೆ ಶಿವಕುಮಾರ್ ಅವರ ಬಣದಲ್ಲಿ ಗುರುತಿಸಿಕೊಳ್ಳಬೇಕೋ ಎಂಬ ತ್ರಿಶಂಕು ಸ್ಥಿತಿಯಲ್ಲಿರುವ ತಮಗೆ, ಸಂಪುಟ ಪುನಾರಚನೆ ಆದರೆ ಅಥವಾ ಮುಖ್ಯಮಂತ್ರಿ ಬದಲಾದರೆ ತಮ್ಮ ಕುರ್ಚಿ ಉಳಿಯುತ್ತದೆಯೋ ಇಲ್ಲವೋ ಎಂಬ ಗೊಂದಲದಲ್ಲಿ ಇರುವ ತಮಗೆ ಪಾಪ ತಮ್ಮ ಖಾತೆ, ತಮ್ಮ ಕರ್ತವ್ಯದ ಬಗ್ಗೆ ಹೇಗೆ ನೆನಪಿರಲು ಸಾಧ್ಯ ಎಂದು ಅಶೋಕ್ ಹರಿಹಾಯ್ದಿದ್ದಾರೆ.

ತಾವು ಜವಾಬ್ದಾರಿ ಹೊತ್ತಿರುವ ಖಾತೆ ಎಂತಹದ್ದು, ಅದರ ಪ್ರಾಮುಖ್ಯತೆ ಏನು, ಗಂಭೀರತೆ ಏನು, ಆ ಇಲಾಖೆಯನ್ನ ಈ ಹಿಂದೆ ಎಂತೆಂತಹ ಮುತ್ಸದ್ಧಿ ನಾಯಕರು ನಿರ್ವಹಿಸಿದ್ದರು ಎಂಬ ಕನಿಷ್ಠ ಅರಿವಾದರೂ ತಮಗಿದೆಯೇ? ಇಷ್ಟಕ್ಕೂ ಕಳೆದ 20 ತಿಂಗಳಲ್ಲಿ ಕೃಷಿ ಸಚಿವರಾಗಿ ತಮ್ಮ ಸಾಧನೆಯಾದರೂ ಏನು? ಎಂದು ಅಶೋಕ್ ಖಾರವಾಗಿ ಪ್ರಶ್ನಿಸಿದ್ದಾರೆ.

ಕಾಂಗ್ರೆಸ್ ಸರ್ಕಾರ ಬಂದಾಗಿನಿಂದ ಕಳೆದ 20 ತಿಂಗಳುಗಳಲ್ಲಿ ರಾಜ್ಯದ 3,000 ರೈತರು ಆತ್ಮಹತ್ಯೆಗೆ ಶರಣಾಗಿದ್ದರೂ ತಮಗೆ ಕಳಕಳಿ ಇಲ್ಲ.

ಬರ, ನೆರೆ ಬಂದಾಗ ಸಮಯಕ್ಕೆ ಸರಿಯಾಗಿ ರೈತರಿಗೆ ಪರಿಹಾರ ಕೊಡಲು ನಿಮ್ಮ ಸರ್ಕಾರಕ್ಕೆ ಯೋಗ್ಯತೆ ಇಲ್ಲ. ಸಕಾಲಕ್ಕೆ ಭತ್ತ ಖರೀದಿ ಕೇಂದ್ರಗಳನ್ನು ತೆರೆಯಲು ನಿಮ್ಮ ಕೈಲಾಗಲಿಲ್ಲ. ನಾನು ಮಧ್ಯಪ್ರವೇಶ ಮಾಡಿ 24 ಗಂಟೆಯೊಳಗೆ ಖರೀದಿ ಕೇಂದ್ರ ತೆರೆಯದಿದ್ದರೆ ಬೀಗ ಜಡಿಯಬೇಕಾಗಿತ್ತದೆ ಎಂದು ಎಚ್ಚರಿಕೆ ಕೊಟ್ಟ ಮೇಲೆ ಎಚ್ಚೆತ್ತುಕೊಂಡಿದ್ದೀರಿ. ಇದು ನಿಮ್ಮ ಸರ್ಕಾರ ಯೋಗ್ಯತೆ ಎಂದು ಅಶೋಕ್ ಹಿಗ್ಗಾಮುಗ್ಗಾ ಜಾಡಿಸಿದ್ದಾರೆ.

 ರಾಜ್ಯಾದ್ಯಂತ ಸಕ್ಕರೆ ಕಾರ್ಖಾನೆಗಳು ಕಬ್ಬು ಪೂರೈಸಿದ ರೈತರಿಗೆ 4,482 ಕೋಟಿ ರೂಪಾಯಿ ಬಾಕಿ ಉಳಿಸಿಕೊಂಡಿದ್ದು, ಕಬ್ಬು ಪೂರೈಸಿದ 14 ದಿನಗಳಲ್ಲಿ ಬಿಲ್ ಮೊತ್ತ ಪಾವತಿಸಬೇಕು ಎಂಬ ಕಾಯ್ದೆ ಇದ್ದರೂ ಸಹ, ನಿಯಮವನ್ನ ಜಾರಿ ಮಾಡಲು ಕಾಂಗ್ರೆಸ್ ಸರ್ಕಾರ ಇಚ್ಛಾಶಕ್ತಿ ಇಲ್ಲ.

ತೊಗರಿ ಖರೀದಿ ಕೇಂದ್ರ ಆರಂಭಿಸಲು ವಿಳಂಬವಾದ ಕಾರಣ ಉತ್ತರ ಕರ್ನಾಟಕದ ರೈತರು ಸಿಕ್ಕಷ್ಟು ಬೆಲೆಗೆ ತೊಗರಿ ಮಾರಿ ನಷ್ಟ ಅನುಭವಿಸುತ್ತಿದ್ದರೂ ತಮ್ಮ ಕಾಂಗ್ರೆಸ್ ಸರ್ಕಾರಕ್ಕೆ ಕಾಳಜಿ ಇಲ್ಲ. ಇದು ನಿಮ್ಮ ಕಾರ್ಯವೈಖರಿ.

ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳಕ್ಕೆ ದಿನಬೆಳಗಾದರೆ ರೈತರು ಆತಹತ್ಯಗೆ ಶರಣಾಗುತ್ತಿದ್ದರೂ, ಅವರ ಸಮಸ್ಯೆ ಬಗೆಹರಿಸುವುದು ಇರಲಿ, ಕನಿಷ್ಠ ಪಕ್ಷ ತಮ್ಮ ತವರು ಜಿಲ್ಲೆಯ ಸಂತ್ರಸ್ತರ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳುವ ಸೌಜನ್ಯವೂ ತಮಗಿಲ್ಲ. ಮೊನ್ನೆ ನಾನು ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ಕೊನ್ನಾಪುರ ಗ್ರಾಮದಲ್ಲಿ ಆತ್ಮಹತ್ಯೆಗೆ ಶರಣಾದ ಶ್ರೀಮತಿ ಪ್ರೇಮ ಹಾಗು ಅವರ ಮಗ ಶ್ರೀ ರಂಜಿತ್ ಅವರ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿ ವೈಯಕ್ತಿಕವಾಗಿ 1 ಲಕ್ಷ ರೂಪಾಯಿ ಸಹಾಯಧನ ನೀಡಿದ ಮೇಲೆ ಪಾಪ ತಮಗೆ ಜ್ಞಾನೋದಯವಾಗಿದೆ.

ಈಗಿರುವ ಕಾನೂನಿನ ಚೌಕಟ್ಟಿನಲ್ಲಿಯೇ ಮೈಕ್ರೋ ಫೈನಾನ್ಸ್ ಕಂಪನಿಗಳ ಸಮಸ್ಯೆಗೆ ಕಡಿವಾಣ ಹಾಕಬಹುದು ಎಂದು ರಾಜ್ಯಪಾಲರು ಅಭಿಪ್ರಾಯ ಪಟ್ಟಿದ್ದಾರೆ. ಇದರಲ್ಲಿ ತಪ್ಪೇನಿದೆ? ರಾಜ್ಯಪಾಲರ ಅಭಿಪ್ರಾಯದ ಬಗ್ಗೆ ತಮ್ಮ ಸರ್ಕಾರಕ್ಕೆ ತಕರಾರಿದ್ದರೆ ಅವರಿಗೆ ಪತ್ರ ಬರೆದು, ಅವರನ್ನ ಭೇಟಿಯಾಗಿ ಮನವರಿಕೆ ಮಾಡಿಕೊಡಿ. ಅದು ಬಿಟ್ಟು ಸಾಂವಿಧಾನಿಕ ಹುದ್ದೆಯಲ್ಲಿರುವವರ ಮೇಲೆ ರಾಜಕೀಯ ಟೀಕೆ ಮಾಡುವುದು, ಬಿಜೆಪಿ ವಕ್ತಾರರು ಎಂದು ಆಪಾದನೆ ಮಾಡುವುದು ಎಷ್ಟು ಸರಿ? ಎಂದು ಅಶೋಕ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ.

ಈ ಹಿಂದೆ ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರಗಳಿದ್ದಾಗ ಯಾವ್ಯಾವ ರಾಜ್ಯದ ರಾಜ್ಯಪಾಲರು ಹೇಗೆ ನಡೆದುಕೊಂಡಿದ್ದಾರೆ ಎಂಬ ಇತಿಹಾಸ ಇಡೀ ದೇಶದ ಜನತೆಗೆ ಚೆನ್ನಾಗಿ ಗೊತ್ತಿದೆ. ಈ ರೀತಿ ಅನಾವಶ್ಯಕ ಹೇಳಿಕೆಗಳನ್ನು ಕೊಟ್ಟು ಟೈಂಪಾಸ್ ಮಾಡುವ ಬದಲು ತಮ್ಮ ಇಲಾಖೆಯ ಕೆಲಸ ನಿರ್ವಹಣೆ ಮಾಡುವ ಕಡೆ ಗಮನ ಕೊಡಿ. ರೈತರ ಸಮಸ್ಯೆಗಳಿಗೆ ಸ್ಪಂದಿಸುವ ಮೂಲಕ ತಮ್ಮ ಕರ್ತವ್ಯ ಪಾಲಿಸಿ ಮತದಾರರ ಋಣ ತೀರಿಸಿ ಎಂದು ಅಶೋಕ್ ತಾಕೀತು ಮಾಡಿದ್ದಾರೆ.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ