Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
National News

ಹೆದ್ದಾರಿ ಮೇಲ್ಸೇತುವೆ ಹಾಗೂ ಕೆಳಸೇತುವೆ ನಿರ್ಮಾಣಕ್ಕೆ 35.61 ಕೋಟಿ ಬಿಡುಗಡೆ-ಸೋಮಣ್ಣ

ಚಂದ್ರವಳ್ಳಿ ನ್ಯೂಸ್, ನವದೆಹಲಿ:
ತುಮಕೂರು ಲೋಕಸಭಾ ಕ್ಷೇತ್ರದ ಸಂಪೂರ್ಣ ಅಭಿವೃದ್ಧಿ ಹೊಣೆಯನ್ನು ಹೊಂದಿರುವ
 ಹಾಗೂ ಕ್ಷೇತ್ರದ ಸಾರ್ವಜನಿಕರ ಹಿತದೃಷ್ಟಿಯಿಂದ ಕೇಂದ್ರ ರೈಲ್ವೆ ಹಾಗೂ ಜಲಶಕ್ತಿ ರಾಜ್ಯ ಸಚಿವ ವಿ. ಸೋಮಣ್ಣರವರ ವಿಶೇಷ  ಕಾಳಜಿಯಿಂದ ಒಟ್ಟು  ರೂ 35.61 ಕೋಟಿ ರೂ ವೆಚ್ಚದಲ್ಲಿ  

ಹೆಗ್ಗರೆ ಗೇಟ್ ರೈಲ್ವೆ ನಿಲ್ದಾಣ ರಸ್ತೆ ಮೇಲ್ಸೇತುವೆ ( ಎಲ್ ಸಿ ನಂ 44)   ಕಾಮಗಾರಿಗೆ ಅಂದಾಜು ಮೊತ್ತ ರೂ 28.53 ಕೋಟಿ ಹಾಗೂ  ಬಿಳಿಪಾಳ್ಯ ಗೇಟ್, ರಸ್ತೆ ಕೆಳಸೇತುವೆ (ಎಲ್ ಸಿ ನಂ. 50) ಕಾಮಗಾರಿಗೆ ಅಂದಾಜು ಮೊತ್ತ ರೂ 7.08 ಕೋಟಿ ಕಾಮಗಾರಿಯನ್ನು ಕೈಗೊಳ್ಳಲಾಗುತ್ತಿದೆ.

ಈ ಕಾಮಗಾರಿಯು ಸಂಪೂರ್ಣ ಶೇಕಡ 100 ರಷ್ಟು ರೈಲ್ವೆ  ವೆಚ್ಚದ ಅನುದಾನದಡಿಯಲ್ಲಿ ನಡೆಯಲಿದೆ. ಕೇಂದ್ರ ರೈಲ್ವೆ ಹಾಗೂ ಜಲಶಕ್ತಿ ರಾಜ್ಯ ಸಚಿವರು ಈಗಾಗಲೆ ಸರಿ ಸುಮಾರು ರೂ. 440 ಕೋಟಿ ಯೋಜನಾ ಮೊತ್ತವನ್ನು  ROB , RUB ಅಭಿವೃದ್ಧಿಗೆ ತಮ್ಮ ತುಮಕೂರು ಲೋಕಸಭಾ ಕ್ಷೇತ್ರಕ್ಕೆ ದೊರಕಿಸಿ ಕೊಟ್ಟಿದ್ದಾರೆ.  

ಇದಕ್ಕೆ ಸಂಪೂರ್ಣ ಬೆಂಬಲವಾಗಿ ಸಹಕರಿಸಿದ ಪ್ರಧಾನಿ ನರೇಂದ್ರ ಮೋದಿಯವರಿಗೆ ಹಾಗೂ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ ಅವರಿಗೆ ಕೇಂದ್ರ ರೈಲ್ವೆ ಹಾಗೂ ಜಲಶಕ್ತಿ ರಾಜ್ಯ ಸಚಿವ ಸೋಮಣ್ಣನವರು ತುಮಕೂರಿನ ಜನತೆಯ ಪರವಾಗಿ ಧನ್ಯವಾದಗಳನ್ನು ತಿಳಿಸಿದ್ದಾರೆ.

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಅಜ್ಜ-ಅಜ್ಜಿಯರ ದಿನಾಚರಣೆ: ಹಿರಿಯ ಜೀವಗಳೊಂದಿಗೆ ಮಗುವಾದ ಸಂಭ್ರಮ!ಆತ್ರೇಯ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳ ಅತಂತ್ರ ಭವಿಷ್ಯ: ಸರ್ಕಾರದ ತುರ್ತು ಮಧ್ಯಪ್ರವೇಶಕ್ಕೆ ಬಿ.ಎಸ್.ಚಂದ್ರಶೇಖರ್ ಆಗ್ರಹಸತೀಶ್ ಜಾರಕಿಹೊಳಿ ಮೇಲಿನ ಇ.ಡಿ ದಾಳಿ ರಾಜಕೀಯ ಪ್ರೇರಿತ: ಕಾಂಗ್ರೆಸ್ ಮುಖಂಡರ ತೀವ್ರ ಆಕ್ರೋಶತನ್ನ ಪತ್ನಿಯನ್ನು ಆಕೆಯ ಇಚ್ಛೆಯಂತೆ ಪ್ರಿಯಕರನೊಡನೆ ಮದುವೆ ಮಾಡಿಸಿದ ವಿಶಾಲ ಹೃದಯದ ಪತಿ!ಪತ್ರಕರ್ತ ಜಿ. ಮಹಂತೇಶ್‌ಗೆ ಜೀವ ಬೆದರಿಕೆ ಪ್ರಕರಣ: ವಿಪಕ್ಷಗಳ ತೀವ್ರ ಆಕ್ರೋಶದ ಬೆನ್ನಲ್ಲೇ ಎಫ್‌ಐಆರ್ ದಾಖಲಿಸಿದ ನಂದಿನಿ ಲೇಔಟ್ ಪೊಲೀಸರುಜೈಲಿನಲ್ಲೂ ಮುಂದುವರಿದ ಪ್ರಜ್ವಲ್ ರೇವಣ್ಣ ವಿಕೃತಿ: ಸೆಲ್‌ನಲ್ಲೇ ಪೆನ್ ಡ್ರೈವ್ ಬಳಸಿ ಅಶ್ಲೀಲ ವೀಡಿಯೋ ವೀಕ್ಷಣೆ!ಮಸೀದಿ ಮುಂದೆ ಗಣೇಶ ಮೆರವಣಿಗೆ ನಿಷೇಧ: ವಿವಾದಾತ್ಮಕ ಹೇಳಿಕೆಗೆ ತೀವ್ರ ಆಕ್ರೋಶಭಾರತ-ಚೀನಾ ಸಂಬಂಧಕ್ಕೆ ಹೊಸ ಚೈತನ್ಯ: ಭಾರತ ಭೇಟಿಗಾಗಿ ದೆಹಲಿಗೆ ಆಗಮಿಸಿದ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ಇಂಟರ್ನೆಟ್ ಇಲ್ಲದೆಯೂ ಯುಪಿಐ ಪಾವತಿ: ‘ಟ್ಯಾಪ್‌ಆ್ಯಂಡ್‌ಪೇ’ ಹಾಗೂ ‘ಮೈಯುಪಿಐ’ ಹೊಸ ಫೀಚರ್‌ಪರಿಚಯಿಸಿದ ಆರ್‌ಬಿಐನಮಗೆ ಹಾಕಿರುವ ಬೇಡಿ ಬಿಚ್ಚಿದರೆ ಕರ್ನಾಟಕವನ್ನೇ ಸ್ವಚ್ಛ ಮಾಡುತ್ತೇವೆ: ನ್ಯಾ. ಬಿ. ವೀರಪ್ಪ