Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮೃತ ರೈತನ ಕುಟುಂಬಕ್ಕೆ 5 ಲಕ್ಷ ಪರಿಹಾರ: ಚೆಲುವರಾಯಸ್ವಾಮಿ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕಳೆದ ಎರಡು ದಿನಗಳಿಂದೆ ನಗರದ ಕಾವೇರಿ ಉದ್ಯಾನವನದಲ್ಲಿ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದ  ಕೆ.ಆರ್.ಪೇಟೆ ತಾಲೂಕು ಮೂಡನಹಳ್ಳಿ ಗ್ರಾಮದ ಮಂಜೇಗೌಡ (55) ರನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುತ್ತಾರೆ.


ಅವರ ಮೃತ ದೇಹವನ್ನು ಕೃಷಿ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್ ಚೆಲುವರಾಯಸ್ವಾಮಿ ಅವರು ಬುಧವಾರ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಭೇಟಿ ನೀಡಿ ಮೃತ ರೈತನ ವಶ ವಿಕ್ಷಿಸಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

ಮೃತ ಮಂಜೇಗೌಡ ಕೆ.ಆರ್ ಪೇಟೆ ತಾಲ್ಲೂಕಿನ ಮಲ್ಲೇನಹಳ್ಳಿಯ ಸ.ನಂ 103 ಅರಣ್ಯ ಇಲಾಖೆಗೆ ಸೇರಿದ ಬಿಳು ಜಾಗದಲ್ಲಿ ಕಲ್ಲುಗಳನ್ನು ತೆಗೆದು ವ್ಯವಾಸಯ ಮಾಡುತ್ತಿರುತ್ತಾರೆ ಸದರಿ ಜಾಗ ಅರಣ್ಯ ಇಲಾಖೆಯ ವ್ಯಾಪ್ತಿಗೆ ಬರುವುದರಿಂದ ಅರಣ್ಯ ಇಲಾಖೆಯ ಸಿಬ್ಬಂದಿಗಳು ಸ.ನಂ 103 ರಲ್ಲಿ ವ್ಯವಸಾಯ ಮಾಡಬಾರದು ಎಂದು ತಿಳಿಸಿರುತ್ತಾರೆ.

ಮಂಜೇಗೌಡ ತಮ್ಮ ಕುಟುಂಬದಲ್ಲಿ 10 ಜನ ವಾಸವಾಗಿದ್ದು ಯಾವುದೇ ಜಮೀನು ಇರುವುದಿಲ್ಲವೆಂದು ಮನವಿ ಸಲ್ಲಿಸಿರುತ್ತಾರೆ ಆದರೆ  ದಾಖಲೆಗಳನ್ನು ಪರಿಶೀಲಿಸಿ ನೋಡಿದಾಗ ಮಂಜೇಗೌಡರ ಹೆಸರಿನಲ್ಲಿ ಒಟ್ಟು 4 ಎಕ್ಕರೆ 1 ಗುಂಟೆ ಪಹಣಿಯಿರುವುದು ಕಂಡು ಬಂದಿರುತ್ತದೆ.

ಮಂಜೇಗೌಡ ಕರ್ನಾಟಕ ಗ್ರಾಮೀಣ ಬ್ಯಾಂಕ್ ನಲ್ಲಿ 14-08-2014 ರಲ್ಲಿ ರೂ 3,50,000 ಬೆಳೆ ಸಾಲ ಪಡೆದಿದ್ದು ಪ್ರಸ್ತುತ ರೂ 7.79,613 ಬಾಕಿ ಪಾವತಿ ಮಾಡದೇ ಉಳಿಸಿಕೊಂಡಿರುತ್ತಾರೆ.ಎಂಬ ಮಾಹಿತಿಯನ್ನು ಕುಟುಂಬಸ್ಥರು ಸಚಿವರಿಗೆ ನೀಡಿರುತ್ತಾರೆ.

ನಂತರ ಮೃತ ರೈತನ ಕುಟುಂಬಸ್ಥರಿಗೆ 5 ಲಕ್ಷ ಪರಿಹಾರ ಸಚಿವರು ಘೋಷಿಸಿದರು. ಮುಖ್ಯಮಂತ್ರಿಗಳ ಜೊತೆ ಚರ್ಚಿಸಿ ಹೆಚ್ಚುವರಿ ಪರಿಹಾರ ನೀಡುವುದಾಗಿ ಭರವಸೆ ನೀಡಿದರು.

ಮೃತ ರೈತನ ಜಾಮೀನು ವ್ಯಾಜ್ಯಕ್ಕೆ ಸಂಬಂಧಿಸಿದಂತೆ ಸದರಿ ಜಾಗವನ್ನು ಜಂಟಿ ಸರ್ವೆ ನಡೆಸಿ ಸ್ಥಳವೇನಾದರೂ ಅರಣ್ಯ ಇಲಾಖೆಗೆ ಒಡೆತನಕ್ಕೆ ಸೇರದಿದ್ದರೆ ಸದರಿ ಜಾಗವನ್ನು ಕುಟುಂಬಸ್ಥರಿಗೆ ನೀಡುವುದಾಗಿ ಸಚಿವರು ಭರವಸೆ ನೀಡಿದರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ ಕುಮಾರ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ