Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಿರೋಧಿಗಳಿಗೆ 25, ಆಡಳಿತ ರೂಢರಿಗೆ 50 ಕೋಟಿ ಅನುದಾನಕ್ಕೆ ಅಸ್ತು

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಇವರುಗಳ ನೇತೃತ್ವದ ಕಾಂಗ್ರೆಸ್ ಸರ್ಕಾರ ಕೊನೆಗೂ ವಿಪಕ್ಷಗಳಿಗೆ ಅನುದಾನ ಹಂಚಿಕೆ ಮಾಡಿದೆ.


ಈಗಾಗಲೇ ಆಡಳಿತ ಪಕ್ಷದ ಶಾಸಕರಿಗೆ 50 ಕೋಟಿ ರೂ. ಮಂಜೂರು ಮಾಡಿ, ಕ್ರಿಯಾ ಯೋಜನೆ ಸಲ್ಲಿಸಲು ಸೂಚಿಸಿದ್ದ ಕಾಂಗ್ರೆಸ್ ಸರ್ಕಾರ, ಈಗ ಬಿಜೆಪಿ ಮತ್ತು ಜೆಡಿಎಸ್ ಶಾಸಕರಿಗೆ ತಲಾ‌25 ಕೋಟಿ ರೂ. ಅನುದಾನ ನೀಡಲು ನಿರ್ಧರಿಸಿದೆ.


ಅನುದಾನ ಹಂಚಿಕೆ ಸಂಬಂಧ ಸಿಎಂ ಸಿದ್ದರಾಮಯ್ಯ ಪತ್ರ ಬರೆದು ಪ್ರತಿಪಕ್ಷ ಶಾಸಕರಿಗೆ ತಿಳಿಸಿದ್ದಾರೆ.
2025-26ನೇ ಸಾಲಿನ ರಾಜ್ಯ ಆಯವ್ಯಯದಲ್ಲಿ ಘೋಷಿಸಿದಂತೆ ಮುಖ್ಯಮಂತ್ರಿಯವರ ಮೂಲಸೌಕರ್ಯ ಅಭಿವೃದ್ಧಿ ಯೋಜನೆಯಡಿ ತಮ್ಮ ವಿಧಾನಸಭಾ ಕ್ಷೇತ್ರಕ್ಕೆ 25 ಕೋಟಿ ರೂ. ವಿಶೇಷ ಅನುದಾನ ಹಂಚಿಕೆ ಮಾಡಲು ತೀರ್ಮಾನಿಸಲಾಗಿದೆ. ಅದರನ್ವಯ ಕಾಮಗಾರಿವಾರು ಅನುದಾನದ ಹಂಚಿಕೆಯ ಪ್ರಮಾಣವನ್ನು ನಿಗದಿಪಡಿಸಿದ್ದು, ಇಲಾಖಾವಾರು ಕಾಮಗಾರಿಗಳ ವಿವರಗಳನ್ನು ಮುಂದಿನ ಕ್ರಮಕ್ಕಾಗಿ ಆರ್ಥಿಕ ಇಲಾಖೆಗೆ ಸಲ್ಲಿಸಲು ಕೋರಿದೆ ಎಂದಿದ್ದಾರೆ.

25 ಕೋಟಿ ರೂ. ನೀಡಲು ನಿರ್ಧರಿಸಿರುವ ಅನುದಾನದಲ್ಲಿ ಲೋಕೋಪಯೋಗಿ ಇಲಾಖೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಗಳಡಿ ಬರುವ ರಸ್ತೆ ಮತ್ತು ಸೇತುವೆ ಕಾಮಗಾರಿಗಳು ಹಾಗೂ ನಗರಾಭಿವೃದ್ಧಿ ಇಲಾಖೆಯಡಿ ಬರುವ ನಗರ ಪ್ರದೇಶದ ಕಾಮಗಾರಿಗಳಿಗೆ 18.75 ಕೋಟಿ ರೂ. ಅನುದಾನ ನೀಡಲಾಗುವುದು. ಇತ್ತ ವಿವೇಚನಾಧಿಕಾರದಡಿ ವಿಧಾನಸಭಾ ಸದಸ್ಯರು ಆಯ್ಕೆ ಮಾಡಬಹುದಾದ ಇತರೆ ಇಲಾಖೆಯ ಕಾಮಗಾರಿಗಳಿಗೆ 6.25 ಕೋಟಿ ರೂ. ನೀಡಲು ತೀರ್ಮಾನಿಸಲಾಗಿದೆ.

ಬಿಜೆಪಿ ಹಾಗೂ ಜೆಡಿಎಸ್ ಶಾಸಕರು ಕಾಂಗ್ರೆಸ್ ಶಾಸಕರಿಗೆ ಮಾತ್ರ‌ಅನುದಾನ ನೀಡಲಾಗುತ್ತಿದೆ ಎಂದು ಅಧಿವೇಶನದಲ್ಲಿ ಆಕ್ಷೇಪ ವ್ಯಕ್ತಪಡಿಸಿ ತಮಗೂ ಅನುದಾನ ಬಿಡುಗಡೆ ಮಾಡುವಂತೆ ಸಿಎಂ ಸಿದ್ದರಾಮಯ್ಯ ಅವರನ್ನು ಒತ್ತಾಯಿಸಿದ್ದರು. ಇದೀಗ ಸಿಎಂ ಸಿದ್ದರಾಮಯ್ಯ ವಿಪಕ್ಷಗಳ ಶಾಸಕರಿಗೂ ತಲಾ 25 ಕೋಟಿ ರೂ. ಅನುದಾನ ಮಂಜೂರು ಮಾಡಿದ್ದಾರೆ.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ