Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಶಾಸಕರ ಕ್ಷೇತ್ರಗಳಿಗೆ ತಲಾ 50 ಕೋಟಿ ವಿಶೇಷ ಅನುದಾನ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಇತ್ತೀಚೆಗೆ ಶಾಸಕರ ಕ್ಷೇತ್ರಗಳಿಗೆ ತಲಾ 50 ಕೋಟಿ ರೂ. ವಿಶೇಷ ಅನುದಾನ ಬಿಡುಗಡೆ ಮಾಡುವುದಾಗಿ ಹೇಳಿದ್ದ ಸಿಎಂ ಸಿದ್ದರಾಮಯ್ಯ, ಇದೀಗ ಅದಕ್ಕೆ ಒಪ್ಪಿಗೆ ಸೂಚಿಸಿದ್ದಾರೆ.


ಬೆಂಗಳೂರು ಶಾಸಕರ ಜೊತೆ ಸಭೆ ಮಾಡಿರುವ ಸಿಎಂ ಸಿದ್ದರಾಮಯ್ಯ, ರಸ್ತೆ ದುರಸ್ತಿ, ನೂತನ ರಸ್ತೆ ನಿರ್ಮಾಣಕ್ಕೆ ಅನುದಾನ ಬಳಸುವಂತೆ ಶಾಸಕರಿಗೆ ಸೂಚನೆ ನೀಡಿದ್ದಾರೆ.

ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ಪ್ರಮುಖವಾಗಿ ಅನುದಾನ ಹಂಚಿಕೆ ವಿಚಾರವಾಗಿ ಬೆಂಗಳೂರು ಭಾಗದ ಶಾಸಕರೊಂದಿಗೆ ಚರ್ಚೆ ಮಾಡಿದರು. ಈ ವೇಳೆ ಶಾಸಕರ ಕುಂದು ಕೊರತೆಯನ್ನ ಆಲಿಸಿದರು. ಈಗಾಗಲೇ ಮೂರು ಹಂತದಲ್ಲಿ ಸಭೆ ಮಾಡಿದ್ದು, ಶಾಸಕರು, ಪರಿಷತ್ ಸದಸ್ಯರ ಜೊತೆಗೂ ಸಿಎಂ ಮೀಟಿಂಗ್ ಮಾಡಿದರು.

ಈ ಕುರಿತಾಗಿ ಟ್ವೀಟ್​ ಮಾಡಿರುವ ಸಿಎಂ ಸಿದ್ದರಾಮಯ್ಯ, ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯ ಸಚಿವರು ಹಾಗೂ ಶಾಸಕರ ಜೊತೆ ಸುದೀರ್ಘ ಸಭೆ ನಡೆಸಿ, ಗ್ಯಾರಂಟಿ ಯೋಜನೆ ಮತ್ತು ಅಭಿವೃದ್ಧಿ ಕಾರ್ಯಕ್ರಮಗಳ ಪ್ರಗತಿಯ ಮಾಹಿತಿ ಪಡೆದು, ಕ್ಷೇತ್ರದಲ್ಲಿ ಆಗಬೇಕಿರುವ ಕೆಲಸ ಕಾರ್ಯಗಳ ಬೇಡಿಕೆಯನ್ನು ಆಲಿಸಿ, ಅಗತ್ಯ ಸಹಕಾರ ಹಾಗೂ ಅನುದಾನ ಒದಗಿಸುವುದಾಗಿ ತಿಳಿಸಿದ್ದರು.ಬೆಂಗಳೂರಿನ ರಸ್ತೆ, ಒಳಚರಂಡಿ, ಕುಡಿಯುವ ನೀರು ಸೇರಿದಂತೆ ಮೂಲಸೌಕರ್ಯ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯವಿರುವ ಅನುದಾನವನ್ನು ಒದಗಿಸಿ,

ಜನರ ಜೀವನಮಟ್ಟ ಸುಧಾರಣೆಗೆ ನಮ್ಮ ಸರ್ಕಾರ ಬದ್ಧವಾಗಿದೆ ಎಂದಿದ್ದಾರೆ.ಸಿಎಂ ಅವರ ಮೂಲಸೌಕರ್ಯ ಅಭಿವೃದ್ಧಿ ಯೋಜನೆ ಅಡಿಯಲ್ಲಿ ಪ್ರತಿಯೊಂದು ವಿಧಾನಸಭಾ ಕ್ಷೇತ್ರಗಳಿಗೆ 50 ಕೋಟಿ ರೂ. ಹಂಚಿಕೆ ಮಾಡಲಾಗಿದೆ. ಹಣ ಬಿಡುಗಡೆ ಮಾಡಲು ಕಾಮಗಾರಿ ವಿವರ ನೀಡುವಂತೆ ಎಲ್ಲಾ ಶಾಸಕರಿಗೆ ಸಿಎಂ ಸಿದ್ದರಾಮಯ್ಯ ಇತ್ತೀಚೆಗೆ ಪತ್ರ ಬರೆದಿದ್ದರು.

 

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ