Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಿನಿಮೀಯ ರೀತಿ ಕೆನರಾ ಬ್ಯಾಂಕ್ ದರೋಡೆ ಮಾಡಿ 58 ಕೆಜಿ ಚಿನ್ನ ಕದ್ದ ಕಳ್ಳರು

Advertisement
ಚಂದ್ರವಳ್ಳಿ ನ್ಯೂಸ್, ವಿಜಯಪುರ :
ವಿಜಯಪುರ ಜಿಲ್ಲೆಯ ಮನಗೂಳಿ ಪಟ್ಟಣದ ಕೆನರಾ ಬ್ಯಾಂಕಿನಲ್ಲಿ ಸಿನಿಮೀಯ ರೀತಿಯಲ್ಲಿ ದರೋಡೆ ನಡೆದಿದೆ. ಕಳೆದ ಮೇ
24 ರಂದು ರಾತ್ರಿ ಬ್ಯಾಂಕ್​ನಲ್ಲಿದ್ದ 58 ಕೆಜಿ 975 ಗ್ರಾಂ ಚಿನ್ನಾಭರಣ ಹಾಗೂ 5.20 ಲಕ್ಷ ನಗದು ಕದ್ದ ಆರೋಪಿಗಳು ಪರಾರಿಯಾಗಿದ್ದಾರೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಅವರು ಈ ಕುರಿತು ಮಾತನಾಡಿ, ಮನಗೂಳಿ ಪಟ್ಟಣದ ಕೆನರಾ ಬ್ಯಾಂಕ್ ಮ್ಯಾನೇಜರ್ ಠಾಣೆಗೆ ಬಂದು ಚಿನ್ನಾಭರಪಣ, ನಗದು ಕಳ್ಳತನ ಆಗಿರುವ ಬಗ್ಗೆ  ಕಂಪ್ಲೇಂಟ್ ಕೊಟ್ಟಿದ್ದಾರೆ. 23-5-2025ರಂದು ಬ್ಯಾಂಕ್ ಲಾಕ್ ಮಾಡಿ ಸಿಬ್ಬಂದಿ ಹೋಗಿದ್ದರು. 25 ನೇ ತಾರೀಖು ಅವರ ಸಿಬ್ಬಂದಿ ಸ್ವಚ್ಛತೆಗೆ ಎಂದು ಬಂದಾಗ ಶಟರ್ಸ್​ ಲಾಕ್ ಕಟ್​ ಆಗಿರುವುದು ಗಮನಕ್ಕೆ ಬಂದಿದೆ. ನಂತರ ಪೊಲೀಸ್ ಇಲಾಖೆಗೆ ಮಾಹಿತಿ ಕೊಟ್ಟಿದ್ದಾರೆ. ನಂತರ ಇದನ್ನು ಪರಿಶೀಲಿಸಿದಾಗ ಬ್ಯಾಂಕ್​ಗೆ ಕಳ್ಳರು ಬಂದು ಕದ್ದಿರುವುದು ಗಮನಕ್ಕೆ ಬಂದಿದೆ. ಇದೀಗ ಬ್ಯಾಂಕ್ ಉನ್ನತ ಮಟ್ಟದ ಅಧಿಕಾರಿಗಳು ಆಗಮಿಸಿ ಪರಿಶೀಲನೆ ಮಾಡುತ್ತಿದ್ದಾರೆ.

ಸಾರ್ವಜನಿಕರು ಲೋನ್​ಗಾಗಿ ಬಂಗಾರವನ್ನು ಅಡವಿಟ್ಟು ದುಡ್ಡನ್ನು ತೆಗೆದುಕೊಂಡಿದ್ದಾರೆ ಎಂದು ಹೇಳಿದ್ದಾರೆ.
ಪ್ರಕರಣದ ತನಿಖೆಗೆ
8 ತಂಡಗಳನ್ನು ರಚಿಸಿದ್ದೇವೆ. ಆದಷ್ಟು ಬೇಗ ಆರೋಪಿಗಳನ್ನು ಬಂಧಿಸಿ ಪ್ರಕರಣವನ್ನು ತಾರ್ಕಿಕ ಅಂತ್ಯಕ್ಕೆ ತರಲಾಗುವುದು ಎಂದು ಎಸ್ಪಿ ತಿಳಿಸಿದ್ದಾರೆ.

ಮನಗೂಳಿ ನಿವಾಸಿ ಶಿವನಗೊಂಡ ಮಾತನಾಡಿ, ಬ್ಯಾಂಕ್​ನವರು ಮುನ್ನೆಚ್ಚರಿಕೆ ವಹಿಸಬೇಕಿತ್ತು. ಬ್ಯಾಂಕ್​ನಲ್ಲಿ ಚಿನ್ನ ಹಾಗೂ ಹಣ ಕಳ್ಳತನವಾಗಿದ್ದು ಆತಂಕದಲ್ಲಿದ್ದಾರೆ. ಪೊಲೀಸರು ಆದಷ್ಟು ಬೇಗ ಆರೋಪಿಗಳನ್ನು ಬಂಧಿಸಲಿ. ಆದಷ್ಟು ಬೇಗ ಇದಕ್ಕೆ ಪರಿಹಾರ ಕಲ್ಪಿಸಿಕೊಡಬೇಕು ಎಂದು ವಿನಂತಿಸಿದ್ದಾರೆ.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ