Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಅಕ್ಟೋಬರ್-24ರಂದು 5ನೇ ಮಾಹಿತಿ ಹಕ್ಕು ದಿನಾಚರಣೆ

ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ರಾಜ್ಯ ಮಾಹಿತಿ ಹಕ್ಕು ಮತ್ತು ಸಾಮಾಜಿಕ ಕಾರ್ಯಕರ್ತರ ವೇದಿಕೆಯಐದನೇ ವರ್ಷದ ಮಾಹಿತಿ ಹಕ್ಕು ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿದೆ ಮಾಹಿತಿ ಹಕ್ಕು ಮತ್ತು ಸಾಮಾಜಿಕ ಹೋರಾಟಗಾರರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ರಾಜ್ಯ ಮಾಹಿತಿ ಹಕ್ಕು ಮತ್ತು ಸಾಮಾಜಿಕ ಕಾರ್ಯಕರ್ತರ ವೇದಿಕೆಯ ಸಂಸ್ಥಾಪಕ ಅಧ್ಯಕ್ಷ ಹೆಚ್ ಜಿ ರಮೇಶ್‌ತಿಳಿಸಿದ್ದಾರೆ.
 

ಮಾಧ್ಯಮಗಳೊಂದಿಗೆ ಅವರು ಮಾತನಾಡುತ್ತಾ ಪಾರದರ್ಶಕ ಆಡಳಿತ ನೀಡಲು ಅಂದಿನ ಕಾಂಗ್ರೆಸ್‌ನೇತೃತ್ವದ ಸರ್ಕಾರ ನೇರವಾಗಿ ಸಾರ್ವಜನಿಕರು ಸರ್ಕಾರ ಮತ್ತು ಸಂಘ ಸಂಸ್ಥೆಗಳಿಂದ ಮಾಹಿತಿ ಪಡೆದು ಅದನ್ನು ಪರಿಶೀಲಿಸಿ ಸಂಬಂಧಪಟ್ಟ ಇಲಾಖೆಗೆ ದೂರು ನೀಡುವುದು ಅಲ್ಲಿಯೂ ನ್ಯಾಯ ಸಿಗದಿದ್ದರೆ ಮೇಲ್ಮನವಿ ಸಲ್ಲಿಸಬಹುದು ಆ ನಿಟ್ಟಿನಲ್ಲಿ ಸರ್ಕಾರ ಮಾಹಿತಿ ಹಕ್ಕು (ಆರ್‌ಟಿಐ) ಜಾರಿಗೊಳಿಸಿತ್ತು.

ಈ ಬಗ್ಗೆ ಅದೆಷ್ಟೋ ಜನರಿಗೆ ಸಮರ್ಪಕ ಮಾಹಿತಿಯ ಕೊರತೆ ಉಂಟಾಗಿದ್ದರಿಂದ ಸಾರ್ವಜನಿಕರ ಸಮಸ್ಯೆ ಮತ್ತು ಈ ಕಾಯ್ದೆಯ ನಿಯಮಗಳನ್ನು, ಸಮರ್ಪಕವಾಗಿ ತಿಳಿದುಕೊಂಡಂತಹ ಶಾಮಾಜಿಕ ಹೋರಾಟಗಾರರು, ಆಗಿದ್ದ ರಮೇಶ್ ರಾಜ್ಯಾದ್ಯಂತ ಸಂಘಟನೆ ಕಟ್ಟಿ ಆ ಮೂಲಕ ಸಾರ್ವಜನಿಕರ ಸಮಸ್ಯೆಗೆ ಸ್ಪಂದಿಸುತ್ತಾ ಬಂದಿದ್ದು ಇದೀಗ ಈ ಸಂಘಟನೆಗೆ ಐದನೇ ವರ್ಷದ ದಿನಾಚರಣೆಯನ್ನು ಮಾಡಲು ಮುಂದಾಗಿರುವುದು ಶ್ಲಾಘನೀಯ.

ಇದೇ ತಿಂಗಳು 24ರ ಗುರುವಾರದಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದ ಪಕ್ಕದಲ್ಲಿರುವ ನಯನ ಸಭಾಂಗಣದಲ್ಲಿ ಬೆಳಿಗ್ಗೆ 10:30ಕ್ಕೆ ಹಮ್ಮಿಕೊಂಡಿದದ್ದು ವೇದಿಕೆಯ ದಿವ್ಯಸಾನಿಧ್ಯವನ್ನು ಕುಣಿಗಲ್ ತಾಲ್ಲೂಕಿನ ಬೆಟ್ಟಹಳ್ಳಿ ಮಠದ ಪೀಠಾಧ್ಯಕ್ಷರಾದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ,

ಮೈಸೂರಿನ ಉರಿಲಿಂಗ ಮಠದ ಪೀಠಾಧ್ಯಕ್ಷರಾದ ಶ್ರೀ ಜ್ಞಾನ ಪ್ರಕಾಶ ಸ್ವಾಮೀಜಿ ಮತ್ತು ಕಾರ್ಯಕ್ರಮದ ಉದ್ಘಾಟನೆಯನ್ನು ನಿವೃತ್ತ ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳು ಎನ್.ಸಂತೋಷ್ ಹೆಗ್ಡೆರವರು, ಮುಖ್ಯ ಅಥಿತಿಗಳಾಗಿ ಐ.ಪಿ.ಎಸ್ ಅಧಿಕಾರಿ ರೂಪಾ ಮೌದ್ಗಿಲ್,

ಬೆಂಗಳೂರು ಮಾಹಿತಿ ಹಕ್ಕು ಕೇಂದ್ರದ ವೀರೇಶ್ ಬೆಳ್ಳೂರ್, ರಾಜ್ಯ ಮಾಹಿತಿ ಹಕ್ಕು ಮತ್ತು ಸಾನಾಜಿಕ ಕಾರ್ಯಕರ್ತರ ವೇದಿಕೆಯ ರಾಜ್ಯಾಧ್ಯಕ್ಷ ಚೆನ್ನಯ್ಯ ಎಂ.ವಸ್ತ್ರದ್ ಅವರು ಸೇರಿದಂತೆ ರಾಜ್ಯದ ಎಲ್ಲಾ ಜಿಲ್ಲಾಧ್ಯಕ್ಷರುಗಳು ಪಧಾದಿಕಾರಿಗಳು ಭಾಗವಹಿಸಲಿದ್ದಾರೆಂದು ಅವರು ತಿಳಿಸಿದ್ದಾರೆ.

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಿಕ್ಷಣಕ್ಕೆ ಹೆಚ್ಚಿನ ಒತ್ತು ಕೊಡಬೇಕು : ಜಿಲ್ಲಾ ಉಸ್ತುವಾರಿ ಸಚಿವರು ಟಿ ರಘುಮೂರ್ತಿಸಾಂಸ್ಕೃತಿಕ ನೆಲೆಗಟ್ಟಿನ ಮೇಲೆ ಕಾಡುಗೊಲ್ಲರ ಬದುಕು - ಸಣ್ಣಚಿತ್ತಯ್ಯ ಸಾರ್ವಜನಿಕ ಗಣೇಶೋತ್ಸವಕ್ಕೆ ಹಂದರಗಂಭ ಪೂಜೆನೂತನ ಬಸ್ ನಿಲ್ದಾಣ ಲೋಕಾರ್ಪಣೆ ನೆರವೇರಿಸಿದ ಸಚಿವ ಟಿ.ರಘುಮೂರ್ತಿ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಅತ್ಯಾಧುನಿಕ ಕ್ರೀಡಾ ಸೌಲಭ್ಯಗಳ ಉದ್ಘಾಟನೆಬೆಳೆ ಸಮೀಕ್ಷೆದಾರರ ಬೇಡಿಕೆ ಈಡೇರಿಕೆಗೆ ಕ್ರಮ: ಸರ್ಕಾರದೊಂದಿಗೆ ಚರ್ಚಿಸುವ ಭರವಸೆ ನೀಡಿದ ಸಚಿವ ರಘುಮೂರ್ತಿದೇವಾಲಯ ನಿರ್ಮಾಣ ಪವಿತ್ರ ಕಾರ್ಯ - ಟಿ. ರಘುಮೂರ್ತಿಡಾ.ಹೇಮಂತರಾಜು ರವರ ನಾನು ನೀನು ಮತ್ತು ಸ್ಕಿಜೋಫ್ರೇನಿಯಾ ಕವನ ಸಂಕಲನ ಲೋಕಾರ್ಪಣೆಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಇತಿಹಾಸ ಬರೆದ ಭಾರತದ ಶೂಟಿಂಗ್ ತಾರೆ ಮನು ಭಾಕರ್ಪ್ಯಾರಾ ಕಾಮನ್‌ವೆಲ್ತ್‌ನಲ್ಲಿ ಪದಕ ಗೆದ್ದು ಇತಿಹಾಸ ಬರೆದ ಕೆ.ಎಸ್. ಶಿಲ್ಪಾ