ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ವತಿಯಿಂದ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 6 ಕೋಟಿ ರೂಪಾಯಿಗಳ ಆರ್ಥಿಕ ನೆರವನ್ನು ನೀಡಲಾಗಿದೆ.
ಮಂಡಳಿಯ ಅಧ್ಯಕ್ಷರು ಹಾಗೂ ಶಾಸಕರಾದ ನರೇಂದ್ರ ಸ್ವಾಮಿ ಅವರು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ 6 ಕೋಟಿ ರೂ. ಮೊತ್ತದ ಚೆಕ್ ಅನ್ನು ಅಧಿಕೃತವಾಗಿ ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ಪರಿಸರ ಮತ್ತು ಅರಣ್ಯ ಸಚಿವ ಈಶ್ವರ ಖಂಡ್ರೆ, ಮಾಲಿನ್ಯ ನಿಯಂತ್ರಣ ಮಂಡಳಿಯ ಸದಸ್ಯ ಕಾರ್ಯದರ್ಶಿ ಆರ್. ಗೋಕುಲ್ ಸರ್ಕಾರದ ಪ್ರಮುಖ ಗಣ್ಯರು ಹಾಗೂ ಇಲಾಖೆಯ ಉನ್ನತ ಅಧಿಕಾರಿಗಳು ಉಪಸ್ಥಿತರಿದ್ದರು.
ರಾಜ್ಯದ ವಿವಿಧ ಜನಪರ ಮತ್ತು ಪರಿಹಾರ ಕಾರ್ಯಗಳಿಗೆ ಆಸರೆಯಾಗುವ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಮಾಲಿನ್ಯ ನಿಯಂತ್ರಣ ಮಂಡಳಿಯು ಈ ಬೃಹತ್ ಮೊತ್ತದ ದೇಣಿಗೆಯನ್ನು ನೀಡುವ ಮೂಲಕ ತನ್ನ ಸಾಮಾಜಿಕ ಜವಾಬ್ದಾರಿಯನ್ನು ಮೆರೆದಿದೆ. ಈ ಸಂದರ್ಭದಲ್ಲಿ ಪರಿಸರ ಮತ್ತು ಅರಣ್ಯ ಇಲಾಖೆಯ ಇತರೆ ಹಿರಿಯ ಅಧಿಕಾರಿಗಳು ಕೂಡ ಭಾಗವಹಿಸಿದ್ದರು.



